ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ): ಕಳೆದ ಮೂರು ವರ್ಷಗಳಿಂದ ಕೆಲಸ ಸಿಗದೆ ಹತಾಶಗೊಂಡಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ಸಂಜೆ ದೊಡ್ಡಬಳ್ಳಾಪುರ ನಗರದ ವಿದ್ಯಾನಗರದಲ್ಲಿ ನಡೆದಿದೆ. ಭರತ್ ಕುಮಾರ್ (29) ಆತ್ಮಹತ್ಯೆಗೆ ಶರಣಾದ ಯುವಕ.
ಮೃತ ಭರತ್ ಕುಮಾರ್ ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದು, ಜೆಕೆಪಿಎಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೊರೋನಾ ಲಾಕ್‌ಡೌನ್ ಸಮಯದಲ್ಲಿ ಕಂಪನಿ ಮುಚ್ಚಿದ್ದರಿಂದ ಕಳೆದ ಮೂರು ವರ್ಷಗಳಿಂದ ಮನೆಯಲ್ಲಿಯೇ ಇದ್ದ, ಕೆಲಸ ಸಿಗದಿರುವ ಬಗ್ಗೆ ಮನೆಯವರ ಬಳಿ ಬೇಸರ ತೋಡಿಕೊಂಡಿದ್ದ.
ನಿನ್ನೆ (ಭಾನುವಾರ) ಬೆಳಗ್ಗೆ ಕುಟುಂಬಸ್ಥರು ಸಂಬಂಧಿಕರೊಬ್ಬರ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ಭರತ್ ಕುಮಾರ್, "No one is Responsible for My Death. I am Solely Responsible I am a big failure" (ನನ್ನ ಸಾವಿಗೆ ಯಾರೂ ಜವಾಬ್ದಾರರಲ್ಲ. ನಾನು ಸಂಪೂರ್ಣ ಜವಾಬ್ದಾರಿಯುತ, ನಾನು ದೊಡ್ಡ ವೈಫಲ್ಯ) ಎಂದು ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ರೌಡಿಶೀಟರ್ ಗ್ಯಾಂಗ್ಗಳ ನಡುವೆ ಹೊಡೆದಾಟ: ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್ - Police Firing