ETV Bharat / state

ಸೀಟು ಕೊಡಿಸುವುದಾಗಿ ವಂಚನೆ ಘೋರ ಕೃತ್ಯ, ಸಂಪೂರ್ಣ ನಿಯಂತ್ರಣ ಅಗತ್ಯ: ಹೈಕೋರ್ಟ್ - MEDICAL SEAT FRAUD CASE - MEDICAL SEAT FRAUD CASE

ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟು ಹೆಸರಲ್ಲಿ ನಡೆಯುವ ವಂಚನೆ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಸೀಟು ಕೊಡಿಸುವುದಾಗಿ ವಂಚನೆ ಮಾಡುವುದು ಘೋರ ಕೃತ್ಯಗಳಾಗಿದ್ದು, ಇದರ ಸಂಪೂರ್ಣ ನಿಯಂತ್ರಣ ಅಗತ್ಯ ಎಂದು ಹೇಳಿದೆ.

HIGH COURT
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Jul 16, 2024, 7:25 AM IST

ಬೆಂಗಳೂರು: ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟು ಕೊಡಿಸುವುದಾಗಿ ದಲ್ಲಾಳಿಗಳು ಅಮಾಯಕರನ್ನು ನಂಬಿಸಿ ಕೋಟ್ಯಂತರ ಹಣ ಪಡೆದು ವಂಚಿಸುತ್ತಿದ್ದು, ಇದೊಂದು ಸಮಾಜದಲ್ಲಿ ಅತಿಘೋರವಾಗಿ ಪರಿಣಮಿಸುತ್ತಿದೆ. ಇಂತಹ ಅಪರಾಧಗಳನ್ನು ಸಂಪೂರ್ಣ ತೊಡೆದುಹಾಕಬೇಕಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.

ನಗರದ ವಿದ್ಯಾರ್ಥಿಯೋರ್ವನಿಗೆ ಮ್ಯಾನೇಜ್‌ಮೆಂಟ್ (ಆಡಳಿತ ಮಂಡಳಿ) ಕೋಟಾದಡಿ ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟು ಕೊಡಿಸುವುದಾಗಿ ತಿಳಿಸಿ 2.12 ಕೋಟಿ ರೂ. ಪಡೆದು ವಂಚಿಸಿದ ಆರೋಪದ ಮೇಲೆ ತಮ್ಮ ವಿರುದ್ಧ ವಿಶ್ವೇಶ್ವರಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ ಪ್ರಕರಣದ ಎರಡನೇ ಆರೋಪಿ ವಿರೂಪಾಕ್ಷಪ್ಪ ಎಂಬುವರು ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ದಲ್ಲಾಳಿಗಳು ವೈದ್ಯಕೀಯ ಸೀಟು ಕೊಡಿಸುವುದಾಗಿ ಜನರಿಗೆ ನಂಬಿಸಿ ಮೋಸ ಮಾಡುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿತು. ಅರ್ಜಿದಾರರ ವಿರುದ್ಧ ಎಫ್‌ಐಆರ್ ರದ್ದುಪಡಿಸಲು ಸಾಧ್ಯವೇ ಇಲ್ಲ ಎಂದು ತಿಳಿಸಿತು. ಇದರಿಂದ ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ಹಿಂಪಡೆದರು.

ನೀವೂ ದಲ್ಲಾಳಿ ಬಳಿಯೇ ಹೋಗಿ ಎಂದ ನ್ಯಾಯಪೀಠ: ಇದಕ್ಕೂ ಮುನ್ನ ವಿಚಾರಣೆ ವೇಳೆ ಅರ್ಜಿಯನ್ನು ಆಕ್ಷೇಪಿಸಿದ ಸರ್ಕಾರಿ ವಕೀಲರು, ಎಫ್‌ಐಆರ್ ರದ್ದುಗೊಳಿಸಲು ಅರ್ಜಿದಾರರು ಕೋರಿದ್ದಾರೆ. ಅರ್ಜಿದಾರರ ಮೇಲಿನ ಆರೋಪ ಗಂಭೀರವಾಗಿದ್ದು, ಅವರ ಮನವಿ ಪುರಸ್ಕರಿಸಬಾರದು ಎಂದು ಕೋರಿದರು. ಅರ್ಜಿ ಪರಿಶೀಲಿಸಿದ ನ್ಯಾಯಮೂರ್ತಿಗಳು, ''ಎಫ್‌ಐಆರ್ ರದ್ದುಗೊಳಿಸಲು ನೀವು ದಲ್ಲಾಳಿಗೆ ಮನವಿ ಮಾಡಿ'' ಎಂದು ಅರ್ಜಿದಾರ ಪರ ವಕೀಲರಿಗೆ ತೀಕ್ಷ್ಣವಾಗಿ ಸೂಚಿಸಿದರು.

ಅರ್ಜಿದಾರರ ಪರ ವಕೀಲರು ಉತ್ತರಿಸಿ, ''ಪ್ರಕರಣದಲ್ಲಿ ಅರ್ಜಿದಾರ ಎರಡನೇ ಆರೋಪಿಯಾಗಿದ್ದಾನೆ. ಪ್ರಕರಣದ ಅಂಶಗಳನ್ನು ಓದಿದರೆ, ದೂರುದಾರರನ್ನು ಮೊದಲನೆ ಆರೋಪಿಗೆ ಪರಿಚಯ ಮಾಡಿಕೊಟ್ಟ ಆರೋಪ ಮಾತ್ರ ಅರ್ಜಿದಾರರ ಮೇಲಿದೆ. ಅವರ ಪಾತ್ರ ಅಷ್ಟಕ್ಕೆ ಸೀಮಿತವಾಗಿದೆ'' ಎಂದು ಸಮಜಾಯಿಸಿ ನೀಡಲು ಯತ್ನಿಸಿದರು.

ಈ ವಾದ ಒಪ್ಪದ ನ್ಯಾಯಮೂರ್ತಿಗಳು, ''ನೀವು ಸಹ ಆರೋಪಿಯೇ. ವೈದ್ಯಕೀಯ ಪದವಿ ಸೀಟು ಕೊಡಿಸುವುದಾಗಿ ಅಮಾಯಕರಿಗೆ ನಂಬಿಸಿ ಒಂದೂವರೆ, ಎರಡು ಕೋಟಿ ಪಡೆದು ವಂಚನೆ ಎಸಗಿದ್ದಾರೆ. ಸೀಟು ಆಕಾಂಕ್ಷಿಗಳನ್ನು ಏಕೆ ನೀವು ದಲ್ಲಾಳಿಗೆ ಪರಿಚಯ ಮಾಡಿಕೊಟ್ಟಿರಿ?, ದಲ್ಲಾಳಿಗಳ ಮೂಲಕ ವೈದ್ಯಕೀಯ ಸೀಟು ಕೊಡಿಸುವ ವ್ಯವಹಾರವೇ ಇಂದು ಸಮಾಜದಲ್ಲಿ ಅತಿಘೋರವಾಗಿ ಮಾರ್ಪಟ್ಟಿದೆ'' ಎಂದು ಚಾಟಿ ಬೀಸಿದರು.

ಜತೆಗೆ, ''ಅರ್ಜಿದಾರನ ಯಾವುದೇ ಸಣ್ಣ ಪಾತ್ರ ಇರುವುದು ಕಂಡುಬಂದರೂ ಪ್ರಕರಣದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡುವುದಿಲ್ಲ. ಸಮಾಜದಲ್ಲಿ ಸ್ವಲ್ಪವಾದರೂ ಬದಲಾವಣೆ ಆಗಬೇಕು. ವೈದ್ಯಕೀಯ ಸೀಟು ಕೊಡಿಸುವುದಾಗಿ ತಿಳಿಸಿ ಒಂದೂವರೆ, ಎರಡು ಕೋಟಿ ಪಡೆಯೋದೆಲ್ಲಾ ಏನ್ರಿ?, ನೀವು ದಲ್ಲಾಳಿಯನ್ನು ಪರಿಚಯ ಮಾಡಿಸಿಕೊಟ್ಟಿರುವುದು ನಿಜವಲ್ಲವೇ?, ಹಾಗಾದರೆ ನಿಮಗೆ ದಲ್ಲಾಳಿ ಗೊತ್ತು ಎಂದರ್ಥವಲ್ಲವೇ? ಅದರಲ್ಲಿ ಯಾವುದೇ ಸಂದೇಹ ಇಲ್ಲ ಬಿಡಿ. ಪ್ರಕರಣದಲ್ಲಿ ಮತ್ತೇನು ಇದೆ. ಇಂತಹ ಘಟನೆಗಳು ನಡೆಯಬಾರದು'' ಎಂದು ತಿಳಿಸಿ, ಅರ್ಜಿ ವಜಾಗೊಳಿಸಲು ಮುಂದಾದರು.

ಇದರಿಂದ ಅರ್ಜಿದಾರ ಪರ ವಕೀಲರು, ಅರ್ಜಿ ಹಂಪಡೆಯಲಾಗುವುದು. ಪ್ರಕರಣದಲ್ಲಿ ದೋಷಾರೋಪಪಟ್ಟಿ ಸಲ್ಲಿಕೆಯಾದ ಸಂದರ್ಭದಲ್ಲಿ ಆರೋಪಗಳನ್ನು ಕೈಬಿಡಲು ಕೋರಿ ಅರ್ಜಿ ಸಲ್ಲಿಸುವ ಅವಕಾಶವನ್ನು ಮುಕ್ತವಾಗಿರಿಸಬೇಕು ಎಂದು ಕೋರಿದರು.

ಪ್ರಕರಣದ ಹಿನ್ನಲೆ: ವೈದ್ಯಕೀಯ ಪದವಿ ಸೀಟು ಕೊಡಿಸುವುದಾಗಿ ತಿಳಿಸಿ ನಗರದ ವಿದ್ಯಾರ್ಥಿ ಮೋಹಿತ್ ರೆಡ್ಡಿ ಹಾಗೂ ಅವರ ತಂದೆಯಿಂದ 2.12 ಕೋಟಿ ರೂ. ಹಣ ಪಡೆದು ವಂಚಿಸಿದ ಆರೋಪ ಸಂಬಂಧ ಮಂಜಪ್ಪ ಹಾಗೂ ಅರ್ಜಿದಾರ ವಿರೂಪಾಕ್ಷ ಸೇರಿದಂತೆ ಆರು ಮಂದಿ ವಿರುದ್ಧ ವಿಶ್ವೇಶ್ವರಪುರ ಪೊಲೀಸ್ ಠಾಣೆಯಲ್ಲಿ 2023ರ ನ.21ರಂದು ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದಲ್ಲಿ ದಲ್ಲಾಳಿಯಾದ ಮಂಜಪ್ಪ ಮೊದಲನೇ ಆರೋಪಿಯಾದರೆ, ವಿರೂಪಾಕ್ಷ ಎರಡನೇ ಆರೋಪಿಯಾಗಿದ್ದಾರೆ. ಇದರಿಂದ ತನ್ನ ವಿರುದ್ಧದ ಎಫ್‌ಐಆರ್ ರದ್ದು ಕೋರಿ ವಿರೂಪಾಕ್ಷ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸೋಮವಾರ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಮುಂದೆ ವಿಚಾರಣೆಗೆ ಬಂದಿತ್ತು.

ಇದನ್ನೂ ಓದಿ: ಬೆಳಗಾವಿ: ಸರ್ಕಾರಿ ಮೆಡಿಕಲ್​ ಸೀಟು ಕೊಡಿಸುವುದಾಗಿ ನಂಬಿಸಿ ಕೋಟಿ ರೂ. ವಂಚಿಸಿದ ಆರೋಪಿ ಅರೆಸ್ಟ್ - NEET FRAUD

ETV Bharat Logo

Copyright © 2025 Ushodaya Enterprises Pvt. Ltd., All Rights Reserved.