ETV Bharat / state

ಭ್ರಷ್ಟಾಚಾರ ಆರೋಪ; ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಮದ್ಯ ಮಾರಾಟಗಾರರ ಸಂಘದ ಸಭೆ - CORRUPTION AGAINST EXCISE MINISTER

ಅಬಕಾರಿ ಇಲಾಖೆ ಹಾಗೂ ಅಬಕಾರಿ ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿರುವ ಹಿನ್ನೆಲೆ ಇಂದು ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ರಾಜ್ಯ ಮದ್ಯ ಮಾರಾಟಗಾರರ ಸಂಘದ ಸದಸ್ಯರು ಸಭೆ ನಡೆಸಿದರು.

Guruswamy
ರಾಜ್ಯ ಮದ್ಯ ಮಾರಾಟಗಾರರ ಸಂಘದ ಒಕ್ಕೂಟದ ಅಧ್ಯಕ್ಷ ಗುರುಸ್ವಾಮಿ (ETV Bharat)
author img

By ETV Bharat Karnataka Team

Published : Nov 7, 2024, 3:48 PM IST

ಬೆಂಗಳೂರು : ಅಬಕಾರಿ ಇಲಾಖೆ, ಅಬಕಾರಿ ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪ ವಿಚಾರದಲ್ಲಿ ಮದ್ಯ ಮಾರಾಟಗಾರರ ಸಂಘದಲ್ಲೇ ಪರ, ವಿರೋಧ ಚರ್ಚೆಗಳು ವ್ಯಕ್ತವಾಗುತ್ತಿವೆ.

ಅಬಕಾರಿ ಇಲಾಖೆ, ಅಬಕಾರಿ ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪ ವಿಚಾರ ಹಾಗೂ ನವೆಂಬರ್ 20 ರಂದು ಮದ್ಯ ಮಾರಾಟ ಬಂದ್​ಗೆ ಕರೆ ನೀಡಿರುವ ಹಿನ್ನೆಲೆ ಇಂದು ವಿಧಾನಸೌಧದಲ್ಲಿ ಹಣಕಾಸು ಇಲಾಖೆ ಎಸಿಎಸ್ ಎಲ್. ಕೆ ಅತೀಕ್ ಹಾಗೂ ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ. ಸಿ ಜಾಫರ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯ ಮದ್ಯ ಮಾರಾಟಗಾರರ ಸಂಘದ ಒಕ್ಕೂಟದ ಅಧ್ಯಕ್ಷ ಗುರುಸ್ವಾಮಿ ಹಾಗೂ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ರಾಜ್ಯ ಮದ್ಯ ಮಾರಾಟಗಾರರ ಸಂಘದ ಒಕ್ಕೂಟದ ಅಧ್ಯಕ್ಷ ಗುರುಸ್ವಾಮಿ ಮಾತನಾಡಿದರು (ETV Bharat)

ನವೆಂಬರ್ 20ರಂದು ಮದ್ಯದಂಗಡಿಗಳ ಬಂದ್‌ಗೆ ಒಂದೆಡೆ ಬೆಂಬಲ ನೀಡುವುದಾಗಿ ಹೇಳಿದರೆ, ಇನ್ನೊಂದೆಡೆ ವಿರೋಧ ವ್ಯಕ್ತವಾಗಿದೆ. ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್‌ ಅಸೋಸಿಯೇಷನ್ ಮತ್ತು ಬೆಂಗಳೂರು, ಮೈಸೂರು, ಶಿವಮೊಗ್ಗ ವಿಭಾಗದ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್​ನಿಂದಲೂ ಇಂದು ಆರ್ಥಿಕ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಲು ಆಗಮಿಸಿದ್ದರು. ಆದರೆ, ಅದು ಸಾಧ್ಯವಾಗಲಿಲ್ಲ.

ಸಭೆ ನಂತರ ಮಾಧ್ಯಮಗಳ ಜೊತೆ ರಾಜ್ಯ ಮದ್ಯ ಮಾರಾಟಗಾರರ ಸಂಘದ ಒಕ್ಕೂಟದ ಅಧ್ಯಕ್ಷ ಗುರುಸ್ವಾಮಿ ಮಾತನಾಡಿ, ''ಮದ್ಯ ಮಾರಾಟಗಾರರ ಸಂಘದಿಂದ ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ. ಭ್ರಷ್ಟಾಚಾರದ ವಿಚಾರಗಳನ್ನೂ ಗಮನಕ್ಕೆ ತಂದಿದ್ದೇವೆ. ಹಣಕಾಸು ಇಲಾಖೆ ಎಸಿಎಸ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜೊತೆ ಮಾತನಾಡುವುದಾಗಿ ಹೇಳಿದ್ದಾರೆ. ಅದಾದ ಬಳಿಕ ಸಿಎಂ ಜೊತೆ ಸಭೆ ಮಾಡಿ ಸರ್ಕಾರ ತೀರ್ಮಾನ ಮಾಡಲಿದೆ'' ಎಂದರು.

ಬಂದ್ ವಾಪಸ್ ಪಡೆದಿಲ್ಲ : ನವೆಂಬರ್ 20 ರಂದು ಕರೆ ನೀಡಿರುವ ಮದ್ಯ ಮಾರಾಟ ಬಂದ್ ವಾಪಸ್ ಪಡೆದಿಲ್ಲ, ಬಂದ್ ಇರುತ್ತದೆ ಎಂದು ಸ್ಪಷ್ಟಪಡಿಸಿದರು.

ಬಂದ್​ಗೆ ಬೆಂಬಲವಿಲ್ಲ : ಬಳಿಕ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಹೊನ್ನಗಿರಿಗೌಡ ಮಾತನಾಡಿ, ''ಗುರುಸ್ವಾಮಿ ಅವರು ಏಕಾಏಕಿ ನಿರ್ಧಾರ ಮಾಡಿದ್ದಾರೆ. ಪದಾಧಿಕಾರಿಗಳ ಜೊತೆ ಚರ್ಚೆ ನಡೆಸದೇ ಮಾಧ್ಯಮ ಹೇಳಿಕೆ ನೀಡಿದ್ದಾರೆ. ನಮ್ಮ ಜೊತೆ ಯಾವುದೇ ಸಭೆ ನಡೆಸಿಲ್ಲ. ಜಿಲ್ಲಾ ಸಂಘಗಳನ್ನು ವಿಶ್ವಾಸಕ್ಕೆ ಪಡೆದಿಲ್ಲ. ನವೆಂಬರ್ 20 ರ ಮದ್ಯದಂಗಡಿಗಳ‌ ಬಂದ್‌ಗೆ ನಾವು ಸಹಕಾರ ನೀಡುವುದಿಲ್ಲ'' ಎಂದು ಹೇಳಿದರು.

ಭ್ರಷ್ಟ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು: ಅಬಕಾರಿ ಇಲಾಖೆಯಲ್ಲಿ ಲಂಚ ಇಲ್ಲವೆಂದು ಹೇಳುವುದಿಲ್ಲ. ಎಲ್ಲ ಕಡೆಯೂ ಲಂಚ ಇದೆ. ಆದರೆ, ನಮ್ಮಲ್ಲಿ ಹೆಚ್ಚಿದೆ. ಅದನ್ನು ಕಡಿಮೆ ಮಾಡಬೇಕು. ಅಬಕಾರಿ ಇಲಾಖೆಯಲ್ಲಿ ಭ್ರಷ್ಟ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು. ನಮ್ಮಲ್ಲಿ ಹಲವು ಸಮಸ್ಯೆಗಳು ಇವೆ. ಇದರ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸುವುದಾಗಿ ಹೊನ್ನಗಿರಿಗೌಡ ತಿಳಿಸಿದರು.

ಇದನ್ನೂ ಓದಿ : ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನನ್ನ ವಿರುದ್ಧದ ಷಡ್ಯಂತ್ರ ಎಂದ ಸಚಿವ ತಿಮ್ಮಾಪುರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.