ETV Bharat / state

ಸಾಲು ಸಾಲು ಆಂಬ್ಯುಲೆನ್ಸ್​ಗಳಲ್ಲಿ ಬಂದ ಮೃತದೇಹಗಳಿಗೆ ಅಂತಿಮ ನಮನ ಸಲ್ಲಿಸಿದ ಸ್ಥಳೀಯರು - Locals paid last respects

author img

By ETV Bharat Karnataka Team

Published : Jul 31, 2024, 8:39 PM IST

Updated : Jul 31, 2024, 9:21 PM IST

ಮೇಪ್ಪಾಡಿ ವೃತ್ತದಲ್ಲಿ ಹೂವು ಹಿಡಿದು ಕಾದು ನಿಂತಿದ್ದ ಸ್ಥಳೀಯರು ಮೃತದೇಹಗಳನ್ನು ಹೊತ್ತಬಂದ ಮೃತದೇಹಗಳಿಗೆ ಪುಷ್ಪನಮನ ಸಲ್ಲಿಸಿದರು.

MEPPADI LOCALS PAID LAST RESPECTS TO DEAD BODIES THAT CAME IN AMBULANCES
ಸಾಲುಸಾಲು ಆ್ಯಂಬುಲೆನ್ಸ್​ಗಳಲ್ಲಿ ಬಂದ ಮೃತದೇಹಗಳಿಗೆ ಅಂತಿಮ ನಮನ ಸಲ್ಲಿಸಿದ ಸ್ಥಳೀಯರು (ETV Bharat)

ಚಾಮರಾಜನಗರ: ಕೇರಳ ಭೂಕುಸಿತದಲ್ಲಿ ಮೃತಪಟ್ಟವರಿಗೆ ಮೇಪ್ಪಾಡಿಯಲ್ಲಿ ಸ್ಥಳೀಯರು ಪುಷ್ಪದಳಗಳನ್ನು ಹಾರಿಸಿ ಅಂತಿಮ ನಮನ ಸಲ್ಲಿಸಿದರು. ಭೂ ಕುಸಿತದಿಂದ ಹತ್ತಾರು ಕಿಮೀ ದೂರದ ಚಾಲಿಯಾರ್ ನದಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊತ್ತುಬಂದ ಸಾಲು ಸಾಲು ಆಂಬ್ಯುಲೆನ್ಸ್​ಗಳಿಗೆ ಸ್ಥಳೀಯರು ಸಾಲಾಗಿ ನಿಂತು ಪುಷ್ಪ ನಮನ ಸಲ್ಲಿಸಿ ಕಂಬನಿ ಮಿಡಿದಿದ್ದಾರೆ.

ಯಾರೂ ಊಹಿಸದಂತೆ ಜರುಗಿದ ದುರಂತದಲ್ಲಿ ಮಡಿದವರಿಗೆ ಮೇಪ್ಪಾಡಿ ವೃತ್ತದಲ್ಲಿ ಹೂವು ಹಿಡಿದು ಕಾದು ನಿಂತಿದ್ದರು. ಕೇರಳ ಭೂ ಕುಸಿತದಲ್ಲಿ ಕನ್ನಡಿಗರು ಕೂಡ ಮೃತಪಟ್ಟಿದ್ದು, ಪತ್ತೆ ಕಾರ್ಯ ಮುಂದುವರೆದಿದೆ. ಚಾಮರಾಜನಗರ ಅಧಿಕಾರಿಗಳ‌ ತಂಡ ಕೇರಳದಲ್ಲೇ ಮೊಕ್ಕಾಂ ಹೂಡಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ವಯನಾಡಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಏಳು ಜನ ಕನ್ನಡಿಗರು ಸಾವನ್ನಪ್ಪಿದ್ದು, ಅವರಲ್ಲಿ ಐವರ ಮೃತದೇಹಗಳು ಪತ್ತೆಯಾಗಿವೆ. ಇನ್ನುಳಿದವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಸಾವನ್ನಪ್ಪಿದವರಲ್ಲಿ ನಾಲ್ವರು ಚಾಮರಾಜನಗರ ಮೂಲದವರು ಹಾಗೂ ಮೂವರು ಮಂಡ್ಯ ಜಿಲ್ಲೆಯವರು. ಇದಲ್ಲದೇ ದುರಂತದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ಗುರುತು ಪತ್ತೆ ಹಾಗೂ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.

ಆಸ್ಪತ್ರೆ ಹಾಗೂ ಕಾಳಜಿ ಕೇಂದ್ರಗಳಿಗೆ ತಹಶೀಲ್ದಾರ್​ಗಳ ತಂಡಗಳು ಭೇಟಿ ನೀಡಿ, ಕರ್ನಾಟಕದವರ ಗುರುತು ಪತ್ತೆ ಹಾಗೂ ಮಾಹಿತಿ ಕಲೆ ಹಾಕುವ ಕೆಲಸವನ್ನು ಮಾಡುತ್ತಿದೆ. ಹಸುವಿನ ಚೀರಾಟದಿಂದ ಎಚ್ಚರಗೊಂಡು ಪಾರಾದ ಚಾಮರಾಜನಗರದ ವಿನೋದ್, ಗೌರಮ್ಮ ಕುಟುಂಬವು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದು ಇವರನ್ನು ತಹಶಿಲ್ದಾರ್​ಗಳ‌ ತಂಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ.

ಇದನ್ನೂ ಓದಿ: ಕೇರಳ ಭೂಕುಸಿತದಲ್ಲಿ 7 ಮಂದಿ ಕನ್ನಡಿಗರು ಸಾವು; ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ - WAYANAD LANDSLIDES

Last Updated : Jul 31, 2024, 9:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.