ETV Bharat / state

Warning.. ನೈಋತ್ಯ ಮಾನ್ಸೂನ್ ಅಬ್ಬರ: ರಾಜ್ಯದ ಕರಾವಳಿಯಲ್ಲಿ ಮತ್ತೆ ಐದು ದಿನ ಹೈ ಅಲರ್ಟ್.. - Rain High Alert

ಹವಾಮಾನ ಇಲಾಖೆಯು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ನಾಲ್ಕು ದಿನ ಆರೆಂಜ್ ಅಲರ್ಟ್ ಮತ್ತು ಜುಲೈ 10ರಂದು ಯೆಲ್ಲೋ ಅಲರ್ಟ್ ಘೋಷಿಸಿದೆ.

rain
ಮಳೆ (ETV Bharat)
author img

By ETV Bharat Karnataka Team

Published : Jul 6, 2024, 9:19 PM IST

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆಯು ಮುಂದಿನ ಐದು ದಿನಗಳವರೆಗೆ ಹೈ ಅಲರ್ಟ್ ಘೋಷಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಇಂದು ಸೇರಿದಂತೆ ನಾಲ್ಕು ದಿನ ಆರೆಂಜ್ ಅಲರ್ಟ್ ಮತ್ತು ಜುಲೈ 10ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಿಗೆ ಇಂದು ಮತ್ತು ಜುಲೈ 9ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಮತ್ತು ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 8 ಮತ್ತು 9ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲೆಯಲ್ಲಿ 40ರಿಂದ 50 ಕಿಲೋಮೀಟರ್ ಪ್ರತಿ ಗಂಟೆಯ ವೇಗದಲ್ಲಿ ಗಾಳಿ ಬೀಸಲಿದ್ದು ಭಾರಿ ಮಳೆ ಕೂಡ ಸಂಭವಿಸುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳ ಮೇಲೆ ಗಾಳಿಯ ವೇಗ 30ರಿಂದ 40 ಕಿಲೋಮೀಟರ್ ಇರಲಿದ್ದು, ಭಾರಿ ಮಳೆಯಾಗಲಿದೆ. ಉಳಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆ ಜೊತೆಗೆ ನಿರಂತರ ಗಾಳಿ ಇರಲಿದೆ. ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಸಿಲಿಕಾನ್ ಸಿಟಿಯಲ್ಲಿ ಮಳೆ ಸಾಮಾನ್ಯ: ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಡಿಗ್ರಿ ಮತ್ತು 2 1ಡಿಗ್ರಿ ಇರಲಿದೆ ಎಂದು ಮಾಹಿತಿ ನೀಡಿದೆ.

ಕ್ಯಾಸಲ್​ರಾಕ್​ನಲ್ಲಿ ಅತಿ ಹೆಚ್ಚು ಮಳೆ: ರಾಜ್ಯದಲ್ಲಿ ನಿನ್ನೆಯಿಂದ ಅತಿ ಹೆಚ್ಚು ಮಳೆ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್​ರಾಕ್​ನಲ್ಲಿ (17 ಸೆಂಟಿಮೀಟರ್) ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ವೀಕ್ಷಣಾಲಯದ ಸುತ್ತಮುತ್ತ 16, ಉಡುಪಿಯಲ್ಲಿ 15 ಮತ್ತು ಅಂಕೋಲಾದಲ್ಲಿ 13 ಸೆಂಟಿಮೀಟರ್ ಮಳೆ ಸುರಿದಿದೆ.

''ಸರಾಸರಿ ಸಮುದ್ರ ಮಟ್ಟದಲ್ಲಿರುವ ಆಫ್- ಕೇರಳ ಟ್ರಫ್ ಈಗ ದಕ್ಷಿಣ ಗುಜರಾತ್ ಮತ್ತು ಕರ್ನಾಟಕ ಕರಾವಳಿಯಲ್ಲಿ ಹಾದು ಹೋಗುತ್ತಿದೆ. ಕರಾವಳಿ ಕರ್ನಾಟಕ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ. ಆದ್ದರಿಂದ ನೈಋತ್ಯ ಮಾನ್ಸೂನ್ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದೆ. ಇಂದು ಕರಾವಳಿ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ'' ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಚಾರ್ಮಾಡಿ ಘಾಟ್​​ನಲ್ಲಿ ಪ್ರವಾಸಿಗರ ಆಕರ್ಷಿಸುತ್ತಿರುವ ಜಲವೈಭವ: ವಿಡಿಯೋ - Falls In Charmadi Ghat

ETV Bharat Logo

Copyright © 2024 Ushodaya Enterprises Pvt. Ltd., All Rights Reserved.