ETV Bharat / state

ಬಿಡುವು ಕೊಡದ ಮುಂಗಾರು: ಕರಾವಳಿ ಮಲೆನಾಡಿನಲ್ಲಿ ಭಾರೀ ಮಳೆ, ಬೆಳಗಾವಿ ಸೇರಿ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - Red alert for six districts - RED ALERT FOR SIX DISTRICTS

ರಾಜ್ಯದ ಎಲ್ಲೆಡೆ ಮಳೆ ಸುರಿಯುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
ಕರಾವಳಿ ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್ (ETV Bharat)
author img

By ETV Bharat Karnataka Team

Published : Jul 16, 2024, 3:50 PM IST

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಾರುತ ಚುರುಕುಗೊಂಡಿದ್ದು ಎಲ್ಲೆಡೆ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ರೆಡ್​ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ ಜಿಲ್ಲೆಗೆ ಆರೇಂಜ್ ಅಲರ್ಟ್ ನೀಡಲಾಗಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು, ಯಾದಗಿರಿ, ಕಲಬುರಗಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.

ಇಂದು ಮತ್ತು ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ ಆಗಲಿದೆ. ನಿರಂತರ ಗಾಳಿ ಸಹ ಇರಲಿದ್ದು ಪ್ರತಿ ಗಂಟೆಗೆ 30 ರಿಂದ 40 ಕಿಮೀ ವೇಗ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗಾಳಿಯು 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಲಿದ್ದು ಅತಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಉಳಿದಂತೆ ಕಲಬುರಗಿ, ಬೀದರ್, ಬೆಳಗಾವಿ, ರಾಯಚೂರು, ಯಾದಗಿರಿ, ಮೈಸೂರು ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಸಹ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ ಎಂದು ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ: ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳೀಯ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿ ಸಹ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗಲಿದೆ.

ಸದ್ಯ ದಕ್ಷಿಣ ಗುಜರಾತ್ - ಉತ್ತರ ಕೇರಳ ಕರಾವಳಿ ಉದ್ದಕ್ಕೂ ಮಾರುತಗಳು ಸರಿಸುಮಾರು 20 ಡಿಗ್ರಿ ಉತ್ತರದೆಡೆಗೆ ಚಲಿಸುತ್ತಿದ್ದು, ಸಮುದ್ರ ಮಟ್ಟದಿಂದ 3.1 ರಿಂದ 7.6 ಕಿಮೀ ಎತ್ತರದಲ್ಲಿ ದಕ್ಷಿಣಕ್ಕೆ ಮುಂದುವರೆಯುವ ಸಾಧ್ಯತೆ ಇದೆ, ಆದ್ದರಿಂದ ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ. ಈ ಕಾರಣಕ್ಕೆ ಹೆಚ್ಚು ಮಳೆ ಸುರಿಯುತ್ತಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಳೆ ಅಬ್ಬರಕ್ಕೆ ಉತ್ತರ ಕನ್ನಡ ತತ್ತರ: ಗುಡ್ಡ ಕುಸಿತ, ನೆರೆಯಿಂದ ನಲುಗಿದ ಜನತೆ - Heavy rain in Uttara Kannada

ETV Bharat Logo

Copyright © 2024 Ushodaya Enterprises Pvt. Ltd., All Rights Reserved.