ETV Bharat / state

ಮುಂಗಾರು ಮಳೆ ರಾಜ್ಯದಲ್ಲಿ ಮತ್ತಷ್ಟು ಚುರುಕು; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ - RAIN IN KARNATAKA - RAIN IN KARNATAKA

ಮುಂಗಾರು ಮಳೆ ರಾಜ್ಯದಲ್ಲಿ ಮತ್ತಷ್ಟು ಚುರುಕುಗೊಂಡಿದ್ದು, ಹವಾಮಾನ ಇಲಾಖೆ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

YELLOW ALERT
ಸಂಗ್ರಹ ಚಿತ್ರ (IANS)
author img

By ETV Bharat Karnataka Team

Published : Jun 6, 2024, 7:44 PM IST

ಬೆಂಗಳೂರು: ಮುಂಗಾರು ಮಳೆ ರಾಜ್ಯದಲ್ಲಿ ಮತ್ತಷ್ಟು ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗುರುವಾರದಿಂದ ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ತುಮಕೂರು, ಜಿಲ್ಲೆಗಳಿಗೆ ಗುರುವಾರ ಮತ್ತು ಶುಕ್ರವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಚಾಮರಾಜನಗರ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಗಾಳಿಯ ವೇಗವು 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಇರಲಿದೆ. ಮುಂದಿನ 48 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲೀನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಮತ್ತು 21 ಡಿಗ್ರಿ ಇರಲಿದೆ ಎಂದು ಮಾಹಿತಿ ನೀಡಿದೆ.

ಮಾನ್ಸೂನ್ ಕರ್ನಾಟಕದ ಎಲ್ಲಾ ಭಾಗಗಳನ್ನು ಆವರಿಸಿದೆ. ಸಮುದ್ರ ಮಟ್ಟದಿಂದ 3.1 ಮತ್ತು 5.8 ಕಿಮೀ ಎತ್ತರದ ನಡುವೆ ರಾಯಲಸೀಮಾ ಮತ್ತು ನೆರೆಹೊರೆಯಲ್ಲಿ ಚಂಡಮಾರುತದ ಪರಿಚಲನೆಯು ಮುಂದುವರಿಯಲಿದೆ. ಕರಾವಳಿ ಕರ್ನಾಟಕದ ಮೇಲೆ ಪರಿಚಲನೆ 4.5 ಕಿ.ಮೀ ಮತ್ತು 5.8 ಕಿ.ಮೀ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್.ಪುವಿಯರಸನ್ ಹೇಳಿದ್ದಾರೆ.

ನಿನ್ನೆಯ ಮಳೆಯ ಪ್ರಮಾಣ: ರಾಜ್ಯದಲ್ಲಿ ಅತಿ ಹೆಚ್ಚು ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 81 ಎಂ.ಎಂ ಮಳೆಯಾಗಿದೆ. ಇನ್ನು, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹನುಮನಟ್ಟಿಯಲ್ಲಿರುವ ಮಳೆ ಮಾಪನ ಕೇಂದ್ರದ ಪ್ರಕಾರ 28 ಮಿಲಿ ಮೀಟರ್ ಮಳೆ ದಾಖಲಾಗಿದೆ. ಗದಗದಲ್ಲಿ 16.6 ಎಂ.ಎಂ, ಚಾಮರಾಜನಗರದಲ್ಲಿ 9.5 ಎಂ.ಎಂ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಮರಗಳು ಬಿದ್ದು ಸಮಸ್ಯೆಯೇ? ಈ ಹೆಲ್ಪ್‌ಲೈನ್ ಸಂಖ್ಯೆಗೆ ಕರೆ ಮಾಡಿ - Bengaluru Rains

ETV Bharat Logo

Copyright © 2024 Ushodaya Enterprises Pvt. Ltd., All Rights Reserved.