ETV Bharat / state

ನೈಋತ್ಯ ಮುಂಗಾರು ಮತ್ತೆ ಚುರುಕು: 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - Karnataka Rain Alert - KARNATAKA RAIN ALERT

ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕು ಪಡೆದಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

Meteorological-department
ಮಳೆ ಮುನ್ಸೂಚನೆ (ETV Bharat)
author img

By ETV Bharat Karnataka Team

Published : Oct 3, 2024, 10:11 PM IST

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ ತಿಂಗಳ ನಾಲ್ಕನೇಯ ವಾರದಲ್ಲಿ ಕೊನೆಯಾಗಬೇಕಿದ್ದ ನೈಋತ್ಯ ಮುಂಗಾರು ಮಾರುತಗಳು ಮತ್ತೆ ಚುರುಕು ಪಡೆದಿದ್ದು, ಗುರುವಾರದಿಂದ ರಾಜ್ಯದಲ್ಲಿ ಭಾರಿ ಮಳೆ ಸುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ (ETV Bharat)

ಮುಂದಿನ 24 ಗಂಟೆಗಳ ಕಾಲ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಗದಗ, ಬೆಳಗಾವಿ, ಧಾರವಾಡ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗಲಿದೆ ಎಂದು ಮಾಹಿತಿ ನೀಡಿದೆ.

ಬೆಂಗಳೂರು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಮಾತನಾಡಿ, "ಮಾಲ್ಡೀವ್ಸ್ ಮತ್ತು ನೆರೆಹೊರೆಯಲ್ಲಿ ಚಂಡಮಾರುತದ ಪರಿಚಲನೆಯು ಈಗ ಲಕ್ಷದ್ವೀಪ ಮತ್ತು ನೆರೆಹೊರೆಯಲ್ಲಿದೆ. ಸಮುದ್ರ ಮಟ್ಟದಿಂದ ಸರಾಸರಿ 4.5 ಕಿಮೀ ಎತ್ತರದಲ್ಲಿದ್ದು, ನೈಋತ್ಯ ದಿಕ್ಕಿನಲ್ಲಿ ವಾಲಿದೆ. ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದೆ. ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿದ್ದು, ಕರಾವಳಿಯಲ್ಲಿ ದುರ್ಬಲವಾಗಿದೆ. ಬುಧವಾರದಿಂದ ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ, ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿಯ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು 9 ಸೆ.ಮೀ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ಮಳೆಯಾಗಿದೆ. ಇನ್ನು ವಿಜಯಪುರ ಜಿಲ್ಲೆಯಲ್ಲಿ 7 ಸೆ.ಮೀ ಮಳೆ ಸುರಿದಿದೆ" ಎಂದರು.

ಇದನ್ನೂ ಓದಿ: ಕರಾವಳಿ ಸೇರಿದಂತೆ ರಾಜ್ಯದ 7 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್​ ಘೋಷಣೆ - Yellow Alert

ETV Bharat Logo

Copyright © 2024 Ushodaya Enterprises Pvt. Ltd., All Rights Reserved.