ETV Bharat / state

ರಾಜ್ಯದ 12 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಈ ಬಾರಿಯ ಮುಂಗಾರು ಬಗ್ಗೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ - Meteorological Department

ರಾಜ್ಯದ 12 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

rain
ಮಳೆ
author img

By ETV Bharat Karnataka Team

Published : Mar 18, 2024, 6:13 PM IST

Updated : Mar 19, 2024, 12:32 PM IST

ಬೆಂಗಳೂರು : ರಾಜ್ಯದ 12 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯವಾಗಿ ಮಾ. 20ರಿಂದ 24ರ ವರೆಗೆ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳದಲ್ಲಿ ಒಣಹವೆ ಮುಂದುವರೆಯಲಿದೆ. ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣವಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಏಪ್ರಿಲ್‌ನಲ್ಲಿ ಕೂಡ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮೇ ಅಂತ್ಯದ ವೇಳೆಗೆ ಎಲ್‌ನಿನೋ ಪ್ರಭಾವ ಕಡಿಮೆಯಾಗಲಿದೆ. ಮುಂಬರುವ ಮುಂಗಾರು ಅವಧಿಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ತಾಪಮಾನದ ಮುನ್ಸೂಚನೆ : ಮುಂದಿನ ಒಂದೆರಡು ದಿನ ಕರಾವಳಿಯ ಪಣಂಬೂರು ಜಿಲ್ಲೆ ಮತ್ತು ಒಳನಾಡಿನ ಬಾಗಲಕೋಟೆ, ಹಾವೇರಿ, ಕೊಪ್ಪಳ, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆ ಇದೆ ಎಂದಿದೆ.

ಉಷ್ಣಾಂಶ ಮತ್ತು ಮಳೆಯ ಪ್ರಮಾಣ : ಕಳೆದ 24 ಗಂಟೆಗಳ ಕಾಲ ಬೀದರ್ ಜಿಲ್ಲೆಯಲ್ಲಿ 4 ಸೆಂ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 38.7 ಡಿ.ಸೆ. ತುಮಕೂರು ಜಿಲ್ಲೆಯ ಚಿಕ್ಕನಹಳ್ಳಿಯಲ್ಲಿ ದಾಖಲಾಗಿದೆ. ಅತೀ ಕನಿಷ್ಠ ಉಷ್ಣಾಂಶ 17.3 ಡಿ.ಸೆ. ಚಾಮರಾಜನಗರದಲ್ಲಿ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳದ ಜೊತೆಗೆ ಬಿಸಿಗಾಳಿ ಬೀಸುವ ಆತಂಕ: ಈ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಉಷ್ಣಾಂಶ

Last Updated : Mar 19, 2024, 12:32 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.