ಬೆಂಗಳೂರು : ತಾಂತ್ರಿಕ ಸಮಸ್ಯೆಯಿಂದಾಗಿ ಎಂ. ಜಿ. ರಸ್ತೆ- ಬೈಯಪ್ಪನಹಳ್ಳಿ ನಡುವೆ ಸ್ಥಗಿತಗೊಂಡಿದ್ದ ಮೆಟ್ರೊ ರೈಲು ಸಂಚಾರ ಪುನರ್ ಆರಂಭವಾಗಿದೆ. ಒಂದು ಗಂಟೆಯವರೆಗೆ ನೇರಳೆ ಮಾರ್ಗದ ಎರಡು ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸೇವೆ ಲಭ್ಯವಿರಲಿಲ್ಲ. ಇದೀಗ ಎಲ್ಲ ಮಾರ್ಗಗಳಲ್ಲಿ ಎಂದಿನಂತೆ ಮೆಟ್ರೋ ರೈಲು ಸಂಚಾರ ನಡೆಯುತ್ತಿದೆ ಎಂದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ (ಬಿಎಂಆರ್ಸಿಎಲ್) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಳಗ್ಗೆ ಮೆಟ್ರೊ ರೈಲು ಸಂಚಾರ ಸ್ಥಗಿತಗೊಂಡಿರುವುದರಿಂದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿತ್ತು. ಪ್ರಯಾಣಿಕರಿಗೆ ಆಗುತ್ತಿರುವ ಅನಾನುಕೂಲತೆಗಾಗಿ ಬಿಎಂಆರ್ಸಿಎಲ್ ವಿಷಾದ ವ್ಯಕ್ತಪಡಿಸಿತ್ತು.
ಇದನ್ನೂ ಓದಿ : ಪೀಣ್ಯ-ನಾಗಸಂದ್ರ ನಡುವೆ 3 ದಿನ 'ನಮ್ಮ ಮೆಟ್ರೋ' ರೈಲು ಸಂಚಾರ ಸ್ಥಗಿತ