ETV Bharat / state

ಬೈಲಹೊಂಗಲ: ಹೂಳೆತ್ತುವಾಗಲೇ ಹೃದಯಾಘಾತದಿಂದ ನರೇಗಾ ಕಾರ್ಮಿಕ ಸಾವು - Heart Attack - HEART ATTACK

ನರೇಗಾ ಕೆಲಸ ಮಾಡುವಾಗಲೇ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ.

mgnrega-worker-died-due-to-heart-attack-in-belagavi
ಬೆಳಗಾವಿ: ಹೂಳೆತ್ತುವಾಗಲೇ ಹೃದಯಾಘಾತದಿಂದ ನರೇಗಾ ಕಾರ್ಮಿಕ ಸಾವು
author img

By ETV Bharat Karnataka Team

Published : Apr 22, 2024, 8:15 PM IST

ಬೆಳಗಾವಿ: ನರೇಗಾ ಯೋಜನೆಯಡಿ ಹಳ್ಳ ಹೂಳೆತ್ತುವಾಗಲೇ ಹೃದಯಾಘಾತದಿಂದ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತರಾಗಿರುವ ಘಟನೆ ಬೈಲಹೊಂಗಲ ತಾಲೂಕಿನ ಒಕ್ಕುಂದ ಗ್ರಾಮದಲ್ಲಿ ಸಂಭವಿಸಿದೆ. ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತ ಕಾರ್ಮಿಕ.

ಗ್ರಾಮದಲ್ಲಿ ನರೇಗಾ ಯೋಜನೆಯಡಿ ಹಳ್ಳದ ಹೂಳೆತ್ತುವ ಕಾಮಗಾರಿ ಕೆಲಸ ಮಾಡುತ್ತಿದ್ದರು.‌ ಈ ವೇಳೆ ಮಲ್ಲೇಶ ತೀವ್ರ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ನೋಡ ನೋಡುತ್ತಿದ್ದಂತೆ ಸ್ಥಳದಲ್ಲೇ ಮಲ್ಲೇಶ ಕೊನೆಯುಸಿರೆಳೆದಿದ್ದಾರೆ.

ಮನೆ ಮಾಲೀಕನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನಾ ಸ್ಥಳಕ್ಕೆ ತಾಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕ ವಿಜಯ ಪಾಟೀಲ, ಪಿಡಿಒ ವಿಜಯಲಕ್ಷೀ ಆನಿಗೋಳ, ಗ್ರಾಮ ಪಂಚಾಯಿ ಸದಸ್ಯರು ಭೇಟಿ ನೀಡಿ ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ಬರುವ ಸಹಾಯಧನ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು. ಬೈಲಹೊಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಜನರ ಸಾವು; ಹುಬ್ಬಳ್ಳಿಯ ನೂತನ ಮನೆಯಲ್ಲಿ ನೀರವ ಮೌನ - 6 people death in Kali river

ETV Bharat Logo

Copyright © 2025 Ushodaya Enterprises Pvt. Ltd., All Rights Reserved.