ETV Bharat / state

ಪ್ರತಿ ಜಿಲ್ಲೆಯಲ್ಲಿ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿಎಂ ಘೋಷಣೆ - MINI CINEMA THEATER

ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣ ಮತ್ತು ಪ್ರತಿ ಜಿಲ್ಲೆಗೆ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಕುರಿತು ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದರು.

ಸಿಎಂ ಸಿದ್ದರಾಮಯ್ಯ, CM Siddaramaiah, Mini Film Theater
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Jan 25, 2025, 7:15 AM IST

ಬೆಂಗಳೂರು: ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತಿ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ರವೀಂದ್ರ ಕಲಾ ಕ್ಷೇತ್ರದಲ್ಲಿ ಕನ್ನಡ ಸೇನಾನಿ ಸಾ.ರಾ. ಗೋವಿಂದು ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಕದ ರಾಜ್ಯಗಳಲ್ಲಿ ಪರಭಾಷಾ ಚಿತ್ರಗಳಿಗೆ ಟಿಕೆಟ್ ದರ ಎಷ್ಟಿದೆ ಎಂದು ಪರಿಶೀಲಿಸಿ ರಾಜ್ಯದಲ್ಲಿ ಅದಕ್ಕೆ ತಕ್ಕಂತೆ ನಿಯಂತ್ರಣ ತರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡುತ್ತೇನೆ. ಜೊತೆಗೆ ಕನ್ನಡ ಸಿನಿಮಾಗಳಿಗೆ ಎದುರಾಗಿರುವ ಥಿಯೇಟರ್​ಗಳ ಸಮಸ್ಯೆ ನಿವಾರಿಸಲು ಪ್ರತಿ ಜಿಲ್ಲೆಯಲ್ಲೂ ಮಿನಿ ಚಿತ್ರಮಂದಿರ ನಿರ್ಮಿಸಲಾಗುವುದು ಎಂದು ಸಿಎಂ ತಿಳಿಸಿದರು.

ಕನ್ನಡ ಕೆಲಸಕ್ಕೆ ಸರ್ಕಾರ ಸದಾ ಮುಂದೆ ಇರುತ್ತದೆ. ದಿನಾಂಕ 27 ರಂದು ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪುತ್ಥಳಿ ಸ್ಥಾಪಿಸಲಾಗುವುದು ಎಂದರು.

ಗೋವಿಂದು ಅವರು ರಾಜ್ ಕುಮಾರ್ ಸಂಘದ ಅಧ್ಯಕ್ಷರಾಗಿ ಮಾಡಿದ ಕೆಲಸಗಳು ಸ್ಮರಣೀಯ. ರಾಜ್ ಕುಮಾರ್ ಅವರ ವಿನಯ, ಸಭ್ಯತೆ, ಸರಳತೆ ಇಡೀ ಮನುಷ್ಯ ಕುಲಕ್ಕೆ ಮಾದರಿ. ಡಾ. ರಾಜ್ ಕುಮಾರ್ ಅವರಿಗೆ ಅವರೇ ಸಾಟಿ. ಇವರಿಗೆ ಸಾಟಿ ಆಗುವವರು ಯಾರೂ ಇನ್ನೂ ಬಂದಿಲ್ಲ ಎಂದು ಸಿಎಂ ಶ್ಲಾಘಿಸಿದರು.

ಡಾ.ರಾಜ್ ಕುಮಾರ್ ಅವರ ಭಾಷಣ ಕೇಳಲು ನಾನೂ ಗೋಕಾಕ್ ಚಳವಳಿಗೆ ಹೋಗಿದ್ದೆ. ರಾಜ್ ಅವರಿಂದಾಗಿ ಕನ್ನಡ ಹೆಚ್ಚು ಶಕ್ತಿಯುತವಾಗಿ ಬೆಳೆಯಿತು. ನಾನು ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾದಾಗ ಸಾ.ರಾ. ಗೋವಿಂದು ಮತ್ತು ಹಿರಿಯ ಪತ್ರಕರ್ತ ವೆಂಕಟೇಶ್ ಅವರ ಪರಿಚಯ ಮೊದಲ ಬಾರಿ ಆಯಿತು. ಇವರ ಕನ್ನಡ ಪರ ಹೋರಾಟದ ಬಗ್ಗೆ ಆಗಲೇ ನನಗೆ ಅಭಿಮಾನ ಇತ್ತು. ನನಗೆ ಕನ್ನಡ ನಾಡು, ನೆಲ, ಭಾಷೆ, ಸಂಸ್ಕೃತಿ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಇದೆ. ಇದನ್ನು ಗ್ರಹಿಸಿಯೇ ಆಗಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ನನ್ನನ್ನೇ ಕನ್ನಡ ಕಾವಲು ಸಮಿತಿಗೆ ಅಧ್ಯಕ್ಷನನ್ನಾಗಿಸಿದರು ಎಂದು ಸ್ಮರಿಸಿ, ಗೋವಿಂದು ಅವರ ಬದುಕು ಅವರ ಹೋರಾಟಗಳ ಕಾರಣದಿಂದಾಗಿ ಸಾರ್ಥಕವಾಗಿದೆ ಎಂದು ತಿಳಿಸಿದರು.

ನಾನು ಕನ್ನಡದಲ್ಲೇ ಸಹಿ ಹಾಕುತ್ತೇನೆ : ನಾನು ಕೇಂದ್ರ ಸರ್ಕಾರಕ್ಕೆ ಬರೆಯುವ ಪತ್ರಗಳನ್ನು ಹೊರತುಪಡಿಸಿ ಉಳಿದ ಎಲ್ಲದಕ್ಕೂ ಇವತ್ತಿಗೂ ಕನ್ನಡದಲ್ಲೇ ಸಹಿ ಹಾಕ್ತೀನಿ ಎಂದು ಇದೇ ವೇಳೆ ತಿಳಿಸಿದರು.

ಬೇರೆ ಧರ್ಮ ಮತ್ತು ಇತರೆ ಭಾಷೆಗಳ ಬಗ್ಗೆ ಸಹಿಷ್ಣುತೆ ಇರಬೇಕು. ನಮ್ಮ ಭಾಷೆ ಬಗ್ಗೆ ಅಭಿಮಾನ ಹೆಚ್ಚಾಗಿರಬೇಕು. ತಾಯಿ ಭಾಷೆ, ತಾಯಿ ನೆಲದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಸಿಎಂ ಕರೆ ನೀಡಿದರು.

ಇದನ್ನೂ ಓದಿ: ಅರಮನೆ ಮೈದಾನ ರಸ್ತೆ ಅಗಲೀಕರಣ ಯೋಜನೆ ಕೈಬಿಡಲು ಅಧಿಕಾರ ನೀಡುವ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ತೀರ್ಮಾನ!

ಇದನ್ನೂ ಓದಿ: ಟ್ರಾಯ್​ ಆದೇಶಕ್ಕೆ ತಲೆಬಾಗಿದ ಟೆಲಿಕಾಂ ಕಂಪನಿಗಳು: ಕೇವಲ ವಾಯ್ಸ್​ ಕಾಲ್​ - ಎಸ್​ಎಮ್​ಎಸ್​ ಪ್ಲಾನ್​ ಘೋಷಿಸಿದ ಜಿಯೋ, ಏರ್​ಟೆಲ್​, ವಿಐ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.