ETV Bharat / state

ಕಾಂಗ್ರೆಸ್​ ಸರ್ಕಾರದ ಮೊದಲ ವಿಕೆಟ್​ ಪತನ! ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಕೆ - B Nagendra Resignation

ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಅವರು ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದ್ಧಾರೆ.

Minister B. Nagendra submitted his resignation letter to CM Siddaramaiah
ಸಚಿವ ಬಿ.ನಾಗೇಂದ್ರ ಅವರು ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದರು. (ETV Bharat)
author img

By ETV Bharat Karnataka Team

Published : Jun 6, 2024, 9:37 PM IST

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಸಂಬಂಧ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ಸಂಜೆ ರಾಜೀನಾಮೆ ಪತ್ರ ಸಲ್ಲಿಸಿದರು. ಕಾವೇರಿ ನಿವಾಸಕ್ಕೆ ತೆರಳಿ ಸಿಎಂ ಅವರನ್ನು ಭೇಟಿಯಾಗಿ, ನಾನು ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಉಲ್ಲೇಖಿಸಿ ಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಇದ್ದರು.

ಇದಕ್ಕೂ ಮುನ್ನ ವಿಧಾನಸೌಧದಲ್ಲಿ ತುರ್ತು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ನಾಗೇಂದ್ರ, "ಅಕ್ರಮದ ಸಂಬಂಧ ವಿಪಕ್ಷದವರು ಕಾಂಗ್ರೆಸ್ ಮೇಲೆ ಕೆಸರೆರಚಾಟ ಮಾಡುತ್ತಿದ್ದಾರೆ. ನಾನು ಸ್ವಇಚ್ಛೆಯಿಂದ ರಾಜೀನಾಮೆ ಕೊಡುತ್ತಿದ್ದೇನೆ. ಆತ್ಮ‌ಸಾಕ್ಷಿಯಿಂದ ಯಾರದ್ದೂ ಒತ್ತಡ ಇಲ್ಲದೆ ರಾಜೀನಾಮೆ ಪಡೆಯುತ್ತಿದ್ದೇನೆ. ಸಿಎಂ ಜೊತೆ ಚರ್ಚಿಸಿದಾಗ ನನ್ನ ಮೇಲೆ ಯಾವುದೇ ಒತ್ತಡ ಹಾಕಿಲ್ಲ" ಎಂದು ಹೇಳಿದ್ದರು.

"ಯಾರಿಗೂ ಕೂಡ ಮುಜುಗರ ಆಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ. ಸಿಎಂ ಅದ್ಬುತವಾಗಿ ಆಡಳಿತ ನಡೆಸುತ್ತಿದ್ದಾರೆ. ಈ ವೇಳೆ ಯಾವುದೇ ಸಮಸ್ಯೆ ಆಗಬಾರದು ಎಂದು ರಾಜೀನಾಮೆ ನೀಡುತ್ತಿದ್ದೇನೆ. ಪ್ರಕರಣ ಸಂಬಂಧ ಎಸ್​ಐಟಿ ತನಿಖೆ ನಡೆಯುತ್ತಿದೆ. ತನಿಖೆ ನಡೆಯುವಾಗ ನಾನು ಮಂತ್ರಿ ಸ್ಥಾನದಲ್ಲಿದ್ದರೆ ಸಮಸ್ಯೆ ಆಗುತ್ತೆ ಎಂಬ ಕಾರಣಕ್ಕೆ ಹುದ್ದೆ ತೊರೆಯುತ್ತಿದ್ದೇನೆ. ಸತ್ಯಾಂಶ ಹೊರಬಂದ ಬಳಿಕ ಮತ್ತೆ ಸಚಿವನಾಗುತ್ತೇನೆ" ಎಂದು ತಿಳಿಸಿದರು.

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ 187 ಕೋಟಿ ರೂಪಾಯಿ ಅಕ್ರಮ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಪ್ರತಿಪಕ್ಷ ಬಿಜೆಪಿ ಪಟ್ಟು ಹಿಡಿದಿತ್ತು. ಇಂದು ಪಕ್ಷದ ನಾಯಕರು ಸಚಿವರ ರಾಜೀನಾಮೆಗೆ ಆಗ್ರಹಿಸಿ ರಾಜಪಾಲರಿಗೆ ದೂರು ನೀಡಿದ್ದರು.

ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಅಧಿಕಾರಿಯ ಆತ್ಮಹತ್ಯೆ: ಶಿವಮೊಗ್ಗದಲ್ಲಿ ನಿಗಮದ ಅಧಿಕಾರಿ ಚಂದ್ರಶೇಖರ್ ಭ್ರಷ್ಟಾಚಾರವನ್ನು ಪ್ರಸ್ತಾಪಿಸಿ ನಿಗಮದ ಮೇಲಾಧಿಕಾರಿಗಳ ಹೆಸರು ಹಾಗೂ ಮಂತ್ರಿ ಎಂದು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಚಿವರ ಮೌಖಿಕ ಸೂಚನೆ ಮೇರೆಗೆ ಹಣ ವರ್ಗಾವಣೆ ಆಗಿರುವುದಾಗಿ ಉಲ್ಲೇಖಿಸಿದ್ದರು‌. ಹೀಗಾಗಿ ಈ ಪ್ರಕರಣ ರಾಜಕೀಯವಾಗಿ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಸ್ವಇಚ್ಛೆಯಿಂದ ರಾಜೀನಾಮೆ ಕೊಡುತ್ತಿದ್ದೇನೆ: ಬಿ ನಾಗೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.