ETV Bharat / state

ರಾಜ್ಯದ ಸ್ಮಾರ್ಟ್‌ ಸಿಟಿ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ್ ಸೂಚನೆ - INVESTIGATION INTO SMART CITY WORKS

ರಾಜ್ಯದ ಸ್ಮಾರ್ಟ್‌ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆ ನಡೆಸಿ ಮೂರು ತಿಂಗಳ ಕಾಲಮಿತಿಯೊಳಗೆ ಸಮಗ್ರ ವರದಿ ನೀಡುವಂತೆ ಸಚಿವ ಬೈರತಿ ಸುರೇಶ್ ಸೂಚಿಸಿದ್ದಾರೆ.

MINISTER BAIRATI SURESH  KARNATAKA SMART CITY WORKS  BENGALURU  ರ್ಟ್‌ ಸಿಟಿ ಕಾಮಗಾರಿ ತನಿಖೆ
ಬೈರತಿ ಸುರೇಶ್ (ETV Bharat)
author img

By ETV Bharat Karnataka Team

Published : Jan 2, 2025, 7:44 PM IST

ಬೆಂಗಳೂರು: ಸ್ಮಾರ್ಟ್‌ ಸಿಟಿ ಅಭಿಯಾನದ ಅಡಿ ರಾಜ್ಯದ 6 ಸ್ಮಾರ್ಟ್‌ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ, ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸೂಚಿಸಿದ್ದಾರೆ.

ಸ್ಮಾರ್ಟ್‌ ಸಿಟಿ ಅಭಿಯಾನದಡಿ ರಾಜ್ಯ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ - ಧಾರವಾಡ, ಮಂಗಳೂರು, ಶಿವಮೊಗ್ಗ ಹಾಗೂ ತುಮಕೂರು ನಗರಗಳಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸಚಿವ ಬೈರತಿ ಸುರೇಶ್​ ಅವರು ಇಂದು ವಿಧಾನಸೌಧದ ಕಚೇರಿಯಲ್ಲಿ ನಡೆಸಿದರು.

MINISTER BAIRATI SURESH  KARNATAKA SMART CITY WORKS  BENGALURU  ರ್ಟ್‌ ಸಿಟಿ ಕಾಮಗಾರಿ ತನಿಖೆ
ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ (ETV Bharat)

ಈ ವೇಳೆ, ಸ್ಮಾರ್ಟ್‌ ಸಿಟಿ ಅಭಿಯಾನ ಶುರುವಾದಾಗಿನಿಂದ ಇಲ್ಲಿಯವರೆಗೂ ರಾಜ್ಯದ 7 ಸ್ಮಾರ್ಟ್‌ ಸಿಟಿಗಳಲ್ಲಿ 6,415.51 ಕೋಟಿ ರೂ. ವೆಚ್ಚದ ಕಾಮಗಾರಿಗಳು ನಡೆದಿದ್ದು, ಪೂರ್ಣಗೊಂಡಿರುವ ಹಲವು ಕಾಮಗಾರಿಗಳು ಅಷ್ಟೊಂದು ತೃಪ್ತಿದಾಯಕವಾಗಿಲ್ಲವೆಂದು ತಿಳಿದು ಬಂದಿತ್ತು. ಆದ ಕಾರಣ ಬೆಂಗಳೂರು ಹೊರತುಪಡಿಸಿ (877.82 ಕೋಟಿ ರೂ. ಕಾಮಗಾರಿ ಬೆಂಗಳೂರು ಸ್ಮಾರ್ಟ್‌ ಸಿಟಿಯಲ್ಲಿ ಪೂರ್ಣ) ಇತರ 6 ಸ್ಮಾರ್ಟ್‌ ಸಿಟಿಗಳ ಯೋಜನೆಗಳ ಬಗ್ಗೆ ಸ್ವತಂತ್ರ ಸಂಸ್ಥೆ ಒಳಗೊಂಡಂತೆ ಸಮಿತಿ ರಚಿಸಿ ತನಿಖೆ ನಡೆಸಿ 3 ತಿಂಗಳ ಕಾಲಮಿತಿಯೊಳಗೆ ವರದಿ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರಿಗೆ ಸಚಿವ ಬೈರತಿ ಸುರೇಶ್ ಸೂಚಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ 50:50 ಅನುಪಾತದ ಅನುದಾನದಡಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದೆ. ನಡೆದಿರುವ ಕಾಮಗಾರಿಗಳಲ್ಲಿ ಬಹುತೇಕ ರಸ್ತೆ ನಿರ್ಮಾಣ, ಒಳಚರಂಡಿ, ಉದ್ಯಾನವನಗಳ ನಿರ್ಮಾಣ ಹಾಗೂ ದುರಸ್ತಿ ಕಾರ್ಯಗಳಿಗೆ ಅನುದಾನವನ್ನು ವೆಚ್ಚ ಮಾಡಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಸಚಿವ ಬೈರತಿ ಸುರೇಶ್​, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಮಪಾಲು ಅನುದಾನ ಇದಾಗಿದೆ. ಇದನ್ನು ಹೆಚ್ಚಿನ ರೀತಿಯಲ್ಲಿ ಸ್ಮಾರ್ಟ್‌ ಶಾಲೆಗಳು, ಆಸ್ಪತ್ರೆ, ಗ್ರಂಥಾಲಯ, ಬಸ್‌ ನಿಲ್ದಾಣ ಸೇರಿದಂತೆ ಶಾಶ್ವತ ಕಟ್ಟಡಗಳ ನಿರ್ಮಾಣಕ್ಕೆ ಒತ್ತು ನೀಡಬೇಕಾಗಿತ್ತು ಎಂದು ತಿಳಿಸಿದರು.

ಸ್ಮಾರ್ಟ್‌ ಸಿಟಿ ಅಭಿಯಾನದ ಅಡಿ ನಡೆದಿರುವ ಕಾಮಗಾರಿಗಳು ಸರ್ಕಾರದ ಆಸ್ತಿಗಳನ್ನು ವೃದ್ಧಿಸುವಂತೆ ಇರಬೇಕೆ ಹೊರತು ರಸ್ತೆ ನಿರ್ಮಾಣ, ಚರಂಡಿ ಹಾಗೂ ಇತರ ಕಾಮಗಾರಿಗಳಿಗೆ ಬಳಸಿರುವುದು ಸರಿಯಾದ ಮಾರ್ಗವಲ್ಲ ಎಂದು 6 ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕರುಗಳಿಗೆ ಸೂಚಿಸಿದರು.

ಸಮರ್ಪಕವಾಗಿ ನಡೆಯದ ಕಾಮಗಾರಿ: ಪ್ರತಿ ಸ್ಮಾರ್ಟ್‌ ಸಿಟಿಗೂ ಅಂದಾಜು 990 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ಶೈಕ್ಷಣಿಕ ಶೇ.2ರಷ್ಟು, ಇಂಧನ ಶೇ.8ರಷ್ಟು, ಆರೋಗ್ಯ ಶೇ.2ರಷ್ಟು, ಮಾಹಿತಿ ತಂತ್ರಜ್ಞಾನಕ್ಕೆ ಶೇ.8ರಷ್ಟು ಒಟ್ಟಾರೆಯಾಗಿ ಶೇ.20ರಷ್ಟು ಅನುದಾನವನ್ನು ಕೆರೆ ಮತ್ತು ಉದ್ಯಾನವನಕ್ಕೆ ಶೇ.9ರಷ್ಟು, ಮಾರುಕಟ್ಟೆಗೆ ಶೇ.5ರಷ್ಟು, ರಸ್ತೆ ನಿರ್ಮಾಣಕ್ಕೆ ಶೇ.36ರಷ್ಟು, ಕ್ರೀಡಾ ವಲಯಕ್ಕೆ ಶೇ.5ರಷ್ಟು, ಸಾರಿಗೆ ವ್ಯವಸ್ಥೆಗೆ ಶೇ.8ರಷ್ಟು, ಇತರ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಶೇ.18ರಷ್ಟು ಅನುದಾನ ಹಂಚಿಕೆಯಾಗಿದೆ. ಈ ವಲಯಗಳಲ್ಲಿ ನಡೆದಿರುವ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದ್ದು, ಅವುಗಳಲ್ಲಿ ಕೆಲವು ಸಮರ್ಪಕವಾಗಿ ನಡೆದಿಲ್ಲ ಎಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರ ಗಮನಕ್ಕೆ ಬಂದಿದೆ. ಹೀಗಾಗಿ, ಒಟ್ಟಾರೆ ನಡೆದಿರುವ ಎಲ್ಲಾ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸಬೇಕಾಗುತ್ತದೆ ಎಂದು ಸಚಿವ ಬೈರತಿ ಸುರೇಶ್ ಸಭೆಯಲ್ಲಿ ತಿಳಿಸಿದರು.

2025ರ ಮಾರ್ಚ್‌ ಅಂತ್ಯಕ್ಕೆ ಸ್ಮಾರ್ಟ್‌ ಸಿಟಿ ಅಭಿಯಾನ ಮುಗಿಯಲಿದ್ದು, ಬರಬೇಕಾಗಿರುವ ಉಳಿಕೆ ಮೊತ್ತ ಹಾಗೂ ಹಾಲಿ ಉಳಿದಿರುವ ಮೊತ್ತದಲ್ಲಿ ಆಧುನಿಕ ತಂತ್ರಜ್ಞಾನದ ಅಂತಾರಾಷ್ಟ್ರೀಯ ಮಟ್ಟದ ಸ್ಮಾರ್ಟ್‌ ಶಾಲೆಗಳ ನಿರ್ಮಾಣಕ್ಕೆ ವಿನಿಯೋಗಿಸಬೇಕು. ಇದರಿಂದಾಗಿ ನಮ್ಮ ಬಡ ಮಕ್ಕಳು ಸಹ ಕಲಿಕೆಯಲ್ಲಿ ಮುಂದುವರೆಯಬೇಕು. ಇದಕ್ಕಾಗಿ ಅತ್ಯಾಧುನಿಕ ಕಲಿಕಾ ಸಾಮಗ್ರಿಗಳು ಸ್ಮಾರ್ಟ್‌ ಶಾಲೆಗಳಲ್ಲಿ ಇರಬೇಕು ಎಂದು ಅಭಿಪ್ರಾಯಪಟ್ಟರು.

ಸ್ಥಳೀಯ ಜನಪ್ರತಿನಿಧಿಗಳಿಂದ ಅಸಮಾಧಾನ: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಶಿವಮೊಗ್ಗ ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ನಡೆದಿರುವ ಕಾಮಗಾರಿಗಳ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಅಸಮಾಧಾನ ವ್ಯಕ್ತಪಡಿಸಿ ನನಗೆ ನೇರವಾಗಿ ಹೇಳಿದ್ದಾರೆ ಎಂದು ಸಚಿವರು ಸಭೆಯಲ್ಲಿ ತಿಳಿಸುತ್ತಾ, ಮುಂದೆ ಈ ರೀತಿ ಆಗಬಾರದೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ವರದಿಗೆ ಮೂರು ತಿಂಗಳ ಕಾಲಮಿತಿ: ಸ್ಮಾರ್ಟ್‌ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್‌ ಸಿಟಿಗಳಲ್ಲಿ ಇಲ್ಲಿಯವರೆಗೂ ನಡೆದಿರುವ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸಲು ಸಮಿತಿಯೊಂದನ್ನು ರಚಿಸಲು ಸಚಿವರು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಸೂಚಿಸಿದರು. ತನಿಖಾ ಸಮಿತಿಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಅಭಿಯಂತರರು, ಲೋಕೋಪಯೋಗಿ ಇಲಾಖೆಯಿಂದ ಮುಖ್ಯ ಅಭಿಯಂತರ ದರ್ಜೆಯ ಓರ್ವ ಅಧಿಕಾರಿ ಹಾಗೂ ಆಯಾ ಸ್ಮಾರ್ಟ್‌ ಸಿಟಿ ವ್ಯಾಪ್ತಿಗಳಲ್ಲಿ ಬರುವ ವಿಶ್ವವಿದ್ಯಾಲಯದ ತಾಂತ್ರಿಕ ಪರಿಣಿತರು ಮತ್ತು Indian Institute of Science ಸಂಸ್ಥೆಯಿಂದ ಓರ್ವ ಪರಿಣಿತಿ ತಜ್ಞರನ್ನು ಸಮಿತಿ ಒಳಗೊಳ್ಳಬೇಕು. ಅಗತ್ಯ ತನಿಖೆ ನಡೆಸಿ ಸಮಗ್ರ ವರದಿಯನ್ನು ಮೂರು ತಿಂಗಳ ಕಾಲಮಿತಿಯೊಳಗೆ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: ರಾಜ್ಯ ಸಾರಿಗೆ ಬಸ್ ಪ್ರಯಾಣ​ ದರದಲ್ಲಿ ಏರಿಕೆ: ಎಷ್ಟು, ಯಾವಾಗಿನಿಂದ ಎಂಬುದನ್ನು ತಿಳಿಯಿರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.