ETV Bharat / state

ರಾಜ್ಯದ ಎಲ್ಲ ಜನರ ಅಭಿವೃದ್ಧಿಗೆ ಪೂರಕವಾದ ಬಜೆಟ್: ಸಚಿವ ಬೈರತಿ ಸುರೇಶ್ ಹೊಗಳಿಕೆ​​ - ಅಭಿವೃದ್ಧಿಗೆ ಪೂರಕವಾದ ಬಜೆಟ್

ಸಿದ್ದರಾಮಯ್ಯ ಅವರ ಬಜೆಟ್​ ಅಭಿವೃದ್ಧಿ ಪೂರಕ ಆಯವ್ಯಯ​ ಆಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್​​ ತಿಳಿಸಿದ್ದಾರೆ.

minister byarathi suresh reaction on budget

author img

By ETV Bharat Karnataka Team

Published : Feb 16, 2024, 1:30 PM IST

ಬೆಂಗಳೂರು: ರಾಜ್ಯದ ಎಲ್ಲ ವರ್ಗದ ಜನರ ಆರ್ಥಿಕ ಮತ್ತು ಸಾಮಾಜಿಕ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಗೆ ಪೂರಕವಾದ ಬಜೆಟ್​ ಅನ್ನು ಸಿದ್ದರಾಮಯ್ಯ ಮಂಡಿಸಿದ್ದಾರೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್​​ ತಿಳಿಸಿದ್ದಾರೆ,

ರಾಜಧಾನಿ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ನೀಡಲಾಗಿದೆ. ಬೆಂಗಳೂರು ಬಿಸಿನೆಸ್ ಕಾರಿಡಾರ್ ನಿರ್ಮಾಣ, ಮೆಟ್ರೋ ರೈಲು ಮಾರ್ಗ ವಿಸ್ತರಣೆ, ರಸ್ತೆಗಳ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತರುವುದಾಗಿ ತಿಳಿಸಿದ್ದಾರೆ. ಇದು ನಗರ ಮತ್ತಷ್ಟು ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಇತರ ನಗರಗಳ ಅಭಿವೃದ್ಧಿಗೆ 18155 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದ್ದು, ರಾಜ್ಯದ ಇತರ ಹತ್ತು ಮಹಾನಗರ ಪಾಲಿಕೆಗಳ ಅಭಿವೃದ್ಧಿಗಾಗಿ 200 ಕೋಟಿ ರೂಪಾಯಿಗಳನ್ನು ಘೋಷಿಸಿರುವುದಕ್ಕೆ ಇದೇ ವೇಳೆ ಧನ್ಯವಾದ ತಿಳಿಸಿದರು

ಮೈಸೂರು, ‌ಮಂಗಳೂರು, ಹುಬ್ಬಳ್ಳಿ ಧಾರವಾಡ, ಬೆಳಗಾವಿ ಕಲಬುರಗಿ, ಕೆಜಿಎಫ್, ತುಮಕೂರಿನ ನರಸಾಪುರ, ಬಳ್ಳಾರಿ ನಗರಗಳ ಸಮೀಪ ಇಂಟಿಗ್ರೇಟೆಡ್‌ ಟೌನ್ ಶಿಪ್ ನಿರ್ಮಾಣ ಮಾಡಲು ಘೋಷಣೆ ಮಾಡಲಾಗಿದೆ. ಮೈಸೂರು ಮಹಾನಗರದ ಸಂಚಾರ ದಟ್ಟಣೆ ನಿಯಂತ್ರಣ ಮಾಡಲು ಪೆರಿಫಿರಲ್ ರಿಂಗ್ ರೋಡ್ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಮೈಸೂರು ನಗರದ ಲ್ಯಾನ್ಸ್​ಡೌನ್ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಯನ್ನು ಪಾರಂಪರಿಕ ಶೈಲಿಯಲ್ಲಿ ನಿರ್ಮಿಸಲಾಗುತ್ತದೆ.

ರಾಜ್ಯದ ನಗರ ಪ್ರದೇಶಗಳಲ್ಲಿ ವಾಸಿಸುವ ಜನರ ಮನೆಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದಿಂದ ‌7.5 ಲಕ್ಷ ಮನೆಗಳಿಗೆ 200 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಗುರಿ ಹೊಂದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರ 10 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ಮತ್ತು ವ್ಯಾಪಾರ ವಹಿವಾಟು ಉತ್ತೇಜಿಸುವ ಸಲುವಾಗಿ ಬೆಳಗಿನ ಜಾವ ಒಂದು ಗಂಟೆ ವರೆಗೆ ತೆರೆಯಲು ವಿಸ್ತರಿಸಲಾಗಿದೆ. ಸಾಮಾಜಿಕ ಸಮಾನತೆ, ಆರ್ಥಿಕ ಶಿಸ್ತು, ರಾಜಸ್ವ, ಸಂಪನ್ಮೂಲ ಕ್ರೋಡೀಕರಣಕ್ಕೆ ಆದ್ಯತೆ ನೀಡುವ ಮೂಲಕ ಜನಮನ್ನಣೆ ನೀಡಲಾಗಿದೆ ಎಂದರು.

ಇದನ್ನೂ ಓದಿ: ಉಪ್ಪು ಹುಳಿ ಖಾರ ಇಲ್ಲದ ಜನ ವಿರೋಧಿ ಬಜೆಟ್: ಸಿಎಂ ನಿಲುವು ಖಂಡಿಸಿ ಬಿಜೆಪಿ ವಾಕ್​ವೌಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.