ETV Bharat / state

ಉಕ್ಕು ಕಾರ್ಖಾನೆಗಳಿಂದ ಮೋದಿ ಹೆಸರಲ್ಲಿ ಕುಮಾರಸ್ವಾಮಿ ₹1 ಸಾವಿರ ಕೋಟಿ ಸಂಗ್ರಹ: ಚಲುವರಾಯಸ್ವಾಮಿ ಆರೋಪ - CHALUVARAYASWAMY ALLEGATIONS ON HDK

ಚುನಾವಣೆಗಳಿಗೆ ಪ್ರಧಾನಿ ಮೋದಿ ಹೆಸರಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ₹1 ಸಾವಿರ ಕೋಟಿ ಸಂಗ್ರಹ ಮಾಡಿದ್ದಾರೆಂದು ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

chaluvarayaswamy
ಹೆಚ್.ಡಿ.ಕುಮಾರಸ್ವಾಮಿ, ಎನ್‌.ಚಲುವರಾಯಸ್ವಾಮಿ (ETV Bharat)
author img

By ETV Bharat Karnataka Team

Published : Nov 10, 2024, 10:05 PM IST

ಬೆಂಗಳೂರು: ''ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ ಹಾಗೂ ಕರ್ನಾಟಕದ ಉಪ ಚುನಾವಣೆಗಳಿಗೆ ಪ್ರಧಾನಿ ಮೋದಿ ಹೆಸರಿನಲ್ಲಿ ಉಕ್ಕು ಕಂಪನಿಗಳಿಂದ 1 ಸಾವಿರ ಕೋಟಿ ರೂಪಾಯಿಗಳನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಂಗ್ರಹಿಸಿದ್ದಾರೆ'' ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಆರೋಪಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಹೇಳಿಕೆ ನೀಡಿರುವ ಅವರು, ''ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆಗಳನ್ನು ಶತಾಯಗತಾಯ ಗೆಲ್ಲಬೇಕು ಎಂದು ಬಿಜೆಪಿ ಮಿತ್ರ ಪಕ್ಷಗಳು ವಾಮ ಮಾರ್ಗ ಹಿಡಿದಿವೆ. ಅಲ್ಲಿ ಹಣದ ಹೊಳೆಯನ್ನೇ ಹರಿಸಲು ಎಲ್ಲ ತಯಾರಿ ನಡೆಸಿವೆ. ಮಾತ್ರವಲ್ಲ, ಕರ್ನಾಟಕದ ಉಪ ಚುನಾವಣೆಯಲ್ಲಿ ಮುಖ್ಯವಾಗಿ ಚನ್ನಪಟ್ಟಣದಲ್ಲಿ ಸೋಲಿನ ಭೀತಿ ಹೊಂದಿರುವ ಬಿಜೆಪಿ ಇಲ್ಲಿಯೂ ದೊಡ್ಡ ಪ್ರಮಾಣದಲ್ಲಿ ಹಣ ಸುರಿಯಲು ಮುಂದಾಗಿದೆ. ಚುನಾವಣೆಗಳ ಜವಾಬ್ದಾರಿ ಹೊತ್ತಿರುವ ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆಗಳ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಭಾರತದ ವಿವಿಧೆಡೆ ಮತ್ತು ರಾಜ್ಯದ ಉಕ್ಕು ಕಂಪನಿಗಳಿಂದ 1 ಸಾವಿರ ಕೋಟಿ ರೂ.ಗೂ ಅಧಿಕ ಹಣವನ್ನು ಸಂಗ್ರಹ ಮಾಡಿದ್ದಾರೆ'' ಎಂದು ಚಲುವರಾಯಸ್ವಾಮಿ ಆರೋಪ ಮಾಡಿದ್ದಾರೆ.

''ಉಕ್ಕಿನ ಕೈಗಾರಿಕೆಗಳಿಂದ ಹಣ ಸಂಗ್ರಹಿಸಿರುವ ಬಗ್ಗೆ ನಮಗೆ ಆಂತರಿಕ ಮಾಹಿತಿ ಬಂದಿದೆ. ಮಾತ್ರವಲ್ಲ, ಉಕ್ಕಿನ ಕೈಗಾರಿಕೋದ್ಯಮಿಗಳೂ ಈ ಕುರಿತು ಮಾಹಿತಿ ನೀಡಿದ್ದಾರೆ. ಇದು ರಾಷ್ಟ್ರದ ಬಹುದೊಡ್ಡ ಹಗರಣವಾಗಿದ್ದು, ಇ.ಡಿ ಮುಂತಾದ ತನಿಖಾ ಸಂಸ್ಥೆಗಳು ಇಂಥ ವಿಷಯವನ್ನು ತನಿಖೆ ನಡೆಸಬೇಕು. ಮಹಾರಾಷ್ಟ್ರ, ಕರ್ನಾಟಕ ಹಾಗೂ ಗೋವಾದಲ್ಲಿ ಆಪರೇಷನ್‌ ಮಾಡಿ ಎಕ್ಸ್‌ಪರ್ಟ್‌ ಆಗಿರುವ ಬಿಜೆಪಿ ಚುನಾವಣೆಯ ಪಾವಿತ್ರ್ಯತೆಯನ್ನು ಕೆಡಿಸಲು ಹೊರಟಿದೆ. ಹಣದ ಹೊಳೆ ಹರಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ನೆಲೆಘಟ್ಟನ್ನೇ ಅಲುಗಾಡಿಸಲು ಹೊರಟಿದೆ'' ಎಂದು ದೂರಿದ್ದಾರೆ.

''ತಮಗೆ ದೇಣಿಗೆ ನೀಡದ ಕಂಪನಿಗಳ ವಿರುದ್ಧ ಇ.ಡಿ., ಐಟಿ ಮುಂತಾದ ತನಿಖಾ ಸಂಸ್ಥೆಗಳಿಂದ ದಾಳಿ ಮಾಡಿಸುವ ತಂತ್ರವನ್ನು ಬಿಜೆಪಿ ಎಂದಿನಿಂದ ನಡೆಸಿಕೊಂಡು ಬಂದಿದೆ. ಈ ಹಿಂದೆ ಬಿಜೆಪಿ ವಿವಿಧ ಕಂಪನಿಗಳಿಂದ ಚುನಾವಣಾ ಬಾಂಡ್‌ ಹೆಸರಲ್ಲಿ 1,751 ಕೋಟಿ ರೂ.ಗಳನ್ನು ಪಡೆದುಕೊಂಡಿತ್ತು. ಇದು ರಾಷ್ಟ್ರದ ಅತಿ ದೊಡ್ಡ ಹಗರಣವಾಗಿದೆ. ಕುಮಾರಸ್ವಾಮಿ ಅವರ ವಿರುದ್ಧ ಅಕ್ರಮ ಗಣಿಗಾರಿಕೆ ಕಿಕ್‌ ಬ್ಯಾಕ್‌ ಆರೋಪವೂ ಕೇಳಿ ಬಂದಿತ್ತು. ಅವುಗಳನ್ನೆಲ್ಲ ವ್ಯವಸ್ಥಿತವಾಗಿ ಮುಚ್ಚಿ ಹಾಕಿರುವ ಬಿಜೆಪಿ ಈಗ ಕಂಪನಿಗಳಿಂದ ಮತ್ತೆ ದೊಡ್ಡ ಪ್ರಮಾಣದಲ್ಲಿ ಹಣ ವಸೂಲಿ ಮಾಡಿ ಅವುಗಳನ್ನು ಮುಚ್ಚಿ ಹಾಕಲು ತಂತ್ರ ರೂಪಿಸಿದೆ. ಆದರೆ, ಈ ಬಾರಿ ಅವರ ತಂತ್ರ ಫಲಿಸದು'' ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್ ಹಗರಣ : ನ್ಯಾ. ಮೈಕಲ್ ಡಿ ಕುನ್ಹಾ ‌ಕಮಿಟಿ ವರದಿ ಆಧಾರದ ಮೇಲೆ ತನಿಖೆ ಮಾಡುತ್ತೇವೆ - ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.