ETV Bharat / state

ಕಳಪೆ ಗುಣಮಟ್ಟದ ಔಷಧಿಗಳ ಪೂರೈಕೆ: ಕಟ್ಟುನಿಟ್ಟಿನ ಗುಣಮಟ್ಟ ತಪಾಸಣೆಗೆ ಗುಂಡೂರಾವ್ ಸೂಚನೆ - Dinesh Gundu Rao

author img

By ETV Bharat Karnataka Team

Published : Aug 7, 2024, 9:41 PM IST

ರಾಜ್ಯದ ಮಾರುಕಟ್ಟೆಯಲ್ಲಿ ಸಾಕಷ್ಟು ಕಳಪೆ ಗುಣಮಟ್ಟದ ಔಷಧಿಗಳು ಪೂರೈಕೆ ಆಗುತ್ತಿದ್ದು, ಔಷಧಿಗಳ ಗುಣಮಟ್ಟದ ಬಗ್ಗೆ ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ಔಷಧ ನಿಯಂತ್ರಣ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.

MINISTER DINESH GUNDU RAO MEETING WITH DRUG CONTROL OFFICER
ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ದಿನೇಶ್ ಗುಂಡೂರಾವ್ (ETV Bharat)

ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆಯಾಗುವ ಔಷಧಗಳು ಸೇರಿದಂತೆ ಸರ್ಕಾರಿ ಔಷಧಾಲಯಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಇಂದು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅವರು ಗರಂ ಆದರು.

ರಾಜ್ಯದ ಮಾರುಕಟ್ಟೆಯಲ್ಲಿ ಸಾಕಷ್ಟು ಕಳಪೆ ಗುಣಮಟ್ಟದ ಔಷಧಿಗಳು ಪೂರೈಕೆ ಆಗುತ್ತಿದೆ. ಯಾರ ಹಂಗು ಇಲ್ಲದೇ ಮನಬಂದಂತೆ ಔಷಧಿಗಳನ್ನು ಜನರ ಮನೆಗೆ ಪೂರೈಸುತ್ತಿದ್ದಾರೆ. ಇದು ಜನರ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುತ್ತಿದೆ. ಡ್ರಗ್ ಕಂಟ್ರೋಲ್ ಇಲಾಖೆಯ ಮುಖ್ಯ ಉದ್ದೇಶವೇ ಪಬ್ಲಿಕ್ ಹೆಲ್ತ್. ಸಾರ್ವಜನಿಕರ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಔಷಧಿಗಳ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು. ಆದರೆ, ಆ ರೀತಿಯ ಕಾರ್ಯವೈಖರಿ ಇಲಾಖೆಯ ಅಧಿಕಾರಿಗಳಿಂದ ಕಂಡುಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಔಷಧಿಗಳ ಗುಣಮಟ್ಟದ ವಿಚಾರದಲ್ಲಿ ಯಾವ ಕ್ರಮಗಳನ್ನು ಕೈಗೊಳ್ಳುತ್ತಿದ್ದೀರಿ ಎಂಬ ಬಗ್ಗೆ ವಿಸ್ತೃತ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಎಷ್ಟು ಕಳಪೆ ಔಷಧಿಗಳ ತಯಾರಕರ ಮೇಲೆ ಕ್ರಮ ತೆಗೆದುಕೊಂಡಿದ್ದೀರಾ? ಯಾವ ಔಷಧಿಗಳನ್ನು ಟೆಸ್ಟಿಂಗ್‌ಗೆ ಒಳಪಡಿಸಲಾಗಿದೆ, ಕಳಪೆ ಗುಣಮಟ್ಟದ ಔಷಧಿಗಳು ಮಾರುಕಟ್ಟೆಯಲ್ಲಿ ಸಿಗದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ಆ್ಯಕ್ಷನ್ ಪ್ಲಾನ್ ಸಿದ್ಧಪಡಿಸುವಂತೆ ಡ್ರಗ್ ಕಂಟ್ರೋಲರ್​ಗೆ ಸೂಚನೆ ನೀಡಿದರು.

ಎಷ್ಟು ಫಾರ್ಮಸಿಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂಬ ಬಗ್ಗೆ ವರದಿ ಕೊಡಿ. ಸುಮ್ಮನೆ ಸ್ಪೆಷಲ್ ಡ್ರೈವ್ ಮಾಡುತ್ತಿದ್ದೇವೆ ಎಂದು ಭಾಷಣ ಬಿಗಿಯಬೇಡಿ. ನೀವು ಕೊಡುತ್ತಿರುವ ಅಂಕಿ ಅಂಶಗಳಲ್ಲಿ ಯಾವುದೇ ಪರಿಣಾಮಕಾರಿ ಕಾರ್ಯ ಕಂಡುಬರುತ್ತಿಲ್ಲ ಎಂದು ಔಷಧ ನಿಯಂತ್ರಣ ಅಧಿಕಾರಿಗಳಿಗೆ ಸಚಿವರು ಚಾಟಿ ಬೀಸಿದರು.

ಯಾವ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ ಅವರ ರಕ್ಷಣೆಗೆ ನಾವಿದ್ದೇವೆ. ಯಾವ ಒತ್ತಡಕ್ಕೂ ಮಣಿಯುವ ಅಗತ್ಯವಿಲ್ಲ. ಮೊದಲು ಕೆಲಸ ಮಾಡಿ ತೋರಿಸಿ. ನಿಮಗೆ ತೊಂದರೆ ಆದರೆ ಸರ್ಕಾರ ನಿಮ್ಮ ರಕ್ಷಣೆಗೆ ಬರಲಿದೆ.‌ ಸರ್ಕಾರದಿಂದ ಎಲ್ಲ ರೀತಿಯ ಬೆಂಬಲ ನಿಮಗೆ ಸಿಗಲಿದೆ ಎಂದು ಇದೇ ವೇಳೆ ಸಚಿವರು ಅಧಿಕಾರಿಗಳಿಗೆ ಭರವಸೆ ನೀಡಿದರು.

ಔಷಧಿ ನಿಯಂತ್ರಣ ಇಲಾಖೆಯನ್ನು ಮುಚ್ಚಿಬಿಡೋಣವೇ?: ಔಷಧ ನಿಯಂತ್ರಣಾಧಿಕಾರಿಗಳ ವಿವರಣೆಗಳಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಎಲ್ಲವೂ ಸರಿಯಿದ್ದರೆ ಔಷಧ ನಿಯಂತ್ರಣ ಇಲಾಖೆಯನ್ನು ಮುಚ್ವಿಬಿಡೋಣವೇ ಎಂದು ಪ್ರಶ್ನಿಸಿದರು. ಕಳಪೆ ಔಷಧಿಗಳ ತಯಾರಿಕರ ವಿರುದ್ಧ ಒಂದು ಕೇಸ್ ಬುಕ್ ಮಾಡಿ, ಕ್ರಮ ಕೈಗೊಳ್ಳಲು ನಿಮಗೆ ಸಾಧ್ಯವಾಗಿಲ್ಲ. ನೀವು ಇನ್ನೇನು ಕೆಲಸ ಮಾಡ್ತಿದ್ದೀರಾ ಎಂದು ಔಷಧ ನಿಯಂತ್ರಣ ಅಧಿಕಾರಿಗಳ ವಿರುದ್ಧ ಗರಂ ಆದರು.

ಸಭೆಗೆ ಬರುವ ಮುನ್ನ ಸಂಪೂರ್ಣ ಮಾಹಿತಿಯನ್ನು ತರಬೇಕು. ಅರೆ ಬರೆ ಅಂಕಿಅಂಶಗಳನ್ನು ನಮ್ಮ ಮುಂದಿಟ್ಟು ನಿಮ್ಮ ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಸಚಿವರ ನಿರ್ದೇಶನದಂತೆ ಕಳೆಪೆ ಗುಣಮಟ್ಟದ ಔಷಧಗಳು ಸಾರ್ವಜನಿಕರಿಗೆ ಲಭ್ಯವಾಗದಂತೆ ನೋಡಿಕೊಳ್ಳುವುದು ನಿಮ್ಮ ಮುಖ್ಯ ಕೆಲಸ. ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಕೆಪಿಸಿಸಿ ಕಚೇರಿಯಲ್ಲಿ ಜನಸ್ಪಂದನ: ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಕ್ರಮ ಕೈಗೊಳ್ಳುವುದಾಗಿ ಸಚಿವ ಜಾರ್ಜ್ ಭರವಸೆ - Janata Darshana

ETV Bharat Logo

Copyright © 2024 Ushodaya Enterprises Pvt. Ltd., All Rights Reserved.