ETV Bharat / state

ಒಪ್ಪಂದ ಆಗಿದ್ದರೆ ಅವರಿಬ್ಬರೇ ರಾಜಕಾರಣ ನಡೆಸಲಿ, ನಾವೆಲ್ಲ ಯಾಕಿರಬೇಕು?: ಸಚಿವ ಜಿ.ಪರಮೇಶ್ವರ್ - CHIEF MINISTER POWER SHARING

ರಾಜ್ಯದಲ್ಲಿ ಮುಖ್ಯಮಂತ್ರಿ ಅಧಿಕಾರ ಹಂಚಿಕೆ ಕುರಿತು ಒಪ್ಪಂದ ಆಗಿದೆ ಎಂಬ ವಿಚಾರದ ಬಗ್ಗೆ ಗೃಹ ಸಚಿವ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದಾರೆ.

parameshwara
ಜಿ.ಪರಮೇಶ್ವರ್ (ETV Bharat)
author img

By ETV Bharat Karnataka Team

Published : Dec 5, 2024, 10:50 AM IST

Updated : Dec 5, 2024, 11:29 AM IST

ಬೆಂಗಳೂರು: ''ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೆ ಗೊತ್ತಿಲ್ಲ. ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು?. ಅವರಿಬ್ಬರೇ ರಾಜಕಾರಣ ನಡೆಸಲಿ. ಬೇರೆಯವರು ಇರುವುದೇ ಬೇಡವೇ?. ಆ ರೀತಿ ಒಪ್ಪಂದ ಆಗಿರಲು ಸಾಧ್ಯವಿಲ್ಲ'' ಎಂದು ಗೃಹ ಸಚಿವ ಸಚಿವ ಜಿ.ಪರಮೇಶ್ವರ್ ಸೂಚ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಒಪ್ಪಂದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ''ಈ ಬಗ್ಗೆ ದೆಹಲಿ ಮತ್ತು ರಾಜ್ಯದಲ್ಲಿ ಇಬ್ಬರು, ಮೂವರನ್ನು ಕೇಳಿದ್ದೇನೆ. ಒಪ್ಪಂದ ಆಗಿದೆ ಅಂತ ಯಾರು ಹೇಳಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಅಂತಹ ಒಪ್ಪಂದ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ'' ಎಂದರು.

''ಒಪ್ಪಂದ ಆಗಿರಲು ಸಾಧ್ಯವಿಲ್ಲ. ಹೈಕಮಾಂಡ್ ಅಂತಿಮವಾಗಿ ಏನು ತೀರ್ಮಾನ ಮಾಡುತ್ತದೆಯೋ ಅದಕ್ಕೆ ನಾವು ಬದ್ಧವಾಗಿರುತ್ತೇವೆ. ನಾವ್ಯಾರೂ ಕೂಡ ಹೈಕಮಾಂಡ್ ಅನ್ನು ಬಿಟ್ಟು ಹೋದವರಲ್ಲ‌. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದನ್ನು ಒಪ್ಪಿಕೊಳ್ಳುತ್ತೇವೆ'' ಎಂದು ತಿಳಿಸಿದರು.

ಜಿ.ಪರಮೇಶ್ವರ್ (ETV Bharat)

ಸಮಾವೇಶದ ಬಗ್ಗೆ ಯಾವುದೇ ಗೊಂದಲ ಇಲ್ಲ: ''ಕೆಪಿಸಿಸಿ ಮತ್ತು ಸ್ವಾಭಿಮಾನಿಗಳ ಒಕ್ಕೂಟ ಒಟ್ಟಾಗಿ ಸಮಾವೇಶ ಮಾಡುತ್ತಿದ್ದು, ಯಾವುದೇ ಗೊಂದಲಗಳು ಇಲ್ಲ‌. ಕಾಂಗ್ರೆಸ್ ಪಕ್ಷ‌ ಮತ್ತು ಸರ್ಕಾರದ ಮೇಲೆ ಸ್ವಾಭಿಮಾನಿ ಒಕ್ಕೂಟಕ್ಕೆ ಸಹಾನುಭೂತಿ ಇದೆ. ಹೀಗಾಗಿ, ಒಟ್ಟಿಗೆ ಸಮಾವೇಶ ಮಾಡುತ್ತಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ. ಗೊಂದಲ ಇದೆ ಎಂಬಂತೆ ಅವರಿರವರು ಸೃಷ್ಟಿ ಮಾಡುತ್ತಿದ್ದಾರೆ'' ಎಂದು ಹೇಳಿದರು.

ಪ್ರತಿಪಕ್ಷದವರ ಆಪಾದನೆಗಳಿಗೆ ರಾಜಕೀಯವಾಗಿ ಉತ್ತರ: ''ನಾವು ರಾಜ್ಯದ ಜನತೆಗೆ ಚುನಾವಣೆಯ ಸಂದರ್ಭದಲ್ಲಿ ರಾಜಕೀಯವಾಗಿ ಏನೆಲ್ಲ ಮಾತನಾಡಿದ್ದೇವೆ, ಅದೆಲ್ಲವನ್ನು ನಾವು ಜನಗಳಿಗೆ ಹೇಳಬೇಕು. ಸರ್ಕಾರದ ಕಾರ್ಯಕ್ರಮಗಳಲ್ಲಿ ಅನೇಕ ರಾಜಕೀಯ ವಿಚಾರಗಳನ್ನು ಪ್ರಸ್ತಾಪ ಮಾಡಲು ಆಗುವುದಿಲ್ಲ. ಅದಕ್ಕಾಗಿ ಈ ಸಮಾವೇಶದಲ್ಲಿ ರಾಜಕೀಯ ವಿಚಾರಗಳನ್ನು ಪ್ರಸ್ತಾಪ‌ ಮಾಡುತ್ತೇವೆ. ಜನಗಳಿಗೆ ಸತ್ಯಾಂಶ ಗೊತ್ತಾಗಬೇಕು. ಅನೇಕ ವಿಚಾರದಲ್ಲಿ ಪ್ರತಿಪಕ್ಷದವರು ಮಾಡುವ ಆಪಾದನೆಗಳಿಗೆ ರಾಜಕೀಯವಾಗಿ ಉತ್ತರ ಕೊಡುತ್ತೇವೆ'' ಎಂದು ಪ್ರತಿಕ್ರಿಯಿಸಿದರು.

''ಕಾಂಗ್ರೆಸ್‌ ಪಕ್ಷದ ಸಮಾವೇಶ ಆಗಿರುವುದರಿಂದ ಯಾವುದೇ ಬಣ ಇಲ್ಲ. ಬಿಜೆಪಿಯಲ್ಲಿ ಮೂರು ಬಣ ಮಾಡಿಕೊಂಡಿದ್ದರಲ್ಲ. ಆ ರೀತಿ ನಮ್ಮ ಪಕ್ಷದಲ್ಲಿ ಬಣ ಇಲ್ಲ. ನಾವೆಲ್ಲ ಒಟ್ಟಿಗಿದ್ದೇವೆ, ಒಟ್ಟಾಗಿ ಆಡಳಿತ ಮಾಡುತ್ತಿದ್ದೇವೆ. ಬಿಜೆಪಿ ಮತ್ತು ಜೆಡಿಎಸ್‌ನವರು ನಮ್ಮನ್ನು ಜನಸಮುದಾಯದಿಂದ ಬೇರ್ಪಡಿಸಲು ಪ್ರಯತ್ನ ಮಾಡಬಹುದು. ಅದು ಸಾಧ್ಯವಾಗುವುದಿಲ್ಲ'' ಎಂದರು.

ಕುಮಾರಸ್ವಾಮಿಗೆ ಸಂದರ್ಭ ಬಂದಾಗ ಪ್ರತಿಕ್ರಿಯೆ: ''ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಅನೇಕ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಾರೆ. ಅದಕ್ಕೆಲ್ಲ‌ ನಾವು ಉತ್ತರ ಕೊಡಬೇಕಿಲ್ಲ. ಅವರು ತಮ್ಮ ಅಭಿಪ್ರಾಯವನ್ನು ಹೇಳಿಕೊಂಡಿರುತ್ತಾರೆ. ಸಂದರ್ಭ ಬಂದಾಗ ನಾವು ಉತ್ತರ ಕೊಡುತ್ತೇವೆ‌'' ಎಂದು ತಿಳಿಸಿದರು.

ಇದನ್ನೂ ಓದಿ: ನಮ್ಮ ಚೀಫ್ ಮಿನಿಸ್ಟರ್ ಹೇಳಿದ್ಮೇಲೆ ಅದೇ ಫೈನಲ್‌: ಡಿಸಿಎಂ ಡಿ.ಕೆ.ಶಿವಕುಮಾರ್

Last Updated : Dec 5, 2024, 11:29 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.