ETV Bharat / state

ದ್ವೇಷ ಭಾಷಣ ಮಾಡುತ್ತಿರುವ ಪ್ರಧಾನಿ ಮೋದಿ ವಿರುದ್ಧ ಚುನಾವಣೆ ಆಯೋಗ ಕ್ರಮ ಕೈಗೊಳ್ಳಬೇಕು: ಹೆಚ್.ಕೆ.ಪಾಟೀಲ್ - H K Patil - H K PATIL

ನರೇಂದ್ರ ಮೋದಿ ಅವರು ಚುನಾವಣೆ ಸಂದರ್ಭದಲ್ಲಿ ಹಸಿ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಟೀಕಿಸಿದ್ದಾರೆ.

ದ್ವೇಷ ಭಾಷಣ ಮಾಡುತ್ತಿರುವ ಪ್ರಧಾನಿ ಮೋದಿ ವಿರುದ್ಧ ಚುನಾವಣೆ ಆಯೋಗ ಕ್ರಮ ಕೈಗೊಳ್ಳಬೇಕು: ಹೆಚ್.ಕೆ.ಪಾಟೀಲ್

author img

By ETV Bharat Karnataka Team

Published : Apr 23, 2024, 10:56 PM IST

Updated : Apr 23, 2024, 11:02 PM IST

ಹೆಚ್.ಕೆ.ಪಾಟೀಲ್

ಹುಬ್ಬಳ್ಳಿ: ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ದ್ವೇಷ ಹರಡುವ ಭಾಷಣವನ್ನು ಮಾಡುತ್ತಿದ್ದು, ಇದನ್ನು ಚುನಾವಣೆ ಆಯೋಗ ಗಂಭೀರವಾಗಿ ಪರಿಗಣಿಸಿ ಚುನಾವಣೆ ಪ್ರಕ್ರಿಯೆಯಿಂದ ಮೋದಿ ಅವರನ್ನು ವಜಾಗೊಳಿಸಬೇಕು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಆಗ್ರಹಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರದ ಪ್ರಜಾಪ್ರಭುತ್ವದ ಕುರಿತು ಮೋದಿ ಅವರು ಬಳಸುತ್ತಿರುವ ಶಬ್ದ, ಭಾಷೆಗಳನ್ನು ನೋಡಿದರೆ ಓರ್ವ ಪಾಲಿಕೆ ಸದಸ್ಯ ಕೂಡಾ ಅಷ್ಟು ಕೆಳಮಟ್ಟದ ಮಾತುಗಳನ್ನು ಹೇಳುವುದಿಲ್ಲ ಎಂದು ಟೀಕಿಸಿದರು.

ಸಮಾಜದಲ್ಲಿ ದ್ವೇಷ ಹುಟ್ಟಿಸುವ ಮಾತುಗಳನ್ನು ಯಾರೂ ಈವರೆಗೆ ಆಡಿಲ್ಲ, ಆದರೆ ಮೋದಿಯವರು ಧರ್ಮಗಳು ಮತ್ತು ಧರ್ಮೀಯ ಹೆಸರಿನಲ್ಲಿ ಭಾಷಾ ಪ್ರಯೋಗ ಮಾಡಿದ್ದಾರೆ. ಭಾಷಣದಲ್ಲಿ ಮುಸ್ಲಿಂ ಸಮುದಾಯವನ್ನೇ ಗುರಿಯಾಗಿಸಿಕೊಂಡು ದ್ವೇಷದ ಮಾತು ಆಡಿದ್ದಾರೆ. ಇದನ್ನೆಲ್ಲಾ ನೋಡಿದಾಗ ಚುನಾವಣೆ ಆಯೋಗ ಹೊರಡಿಸಿದ ನೀತಿ ಸಂಹಿತೆ ಸಂಪೂರ್ಣವಾಗಿ ಉಲ್ಲಂಘನೆ ಆಗಿದ್ದು, ಈ ಬಗ್ಗೆ ಚುನಾವಣೆ ಆಯೋಗ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಮೋದಿ ಅವರನ್ನು ಚುನಾವಣೆ ಪ್ರಕ್ರಿಯೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.

ನರೇಂದ್ರ ಮೋದಿ ಅವರು ಚುನಾವಣೆ ಸಂದರ್ಭದಲ್ಲಿ ಹಸಿ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಇದರಿಂದ ಅವರ ಅಭಿಮಾನಿಗಳೇ ತಲೆ, ತಲೆ ಬಡೆದುಕೊಳ್ಳುವ ವಾತಾವರಣ ನಿರ್ಮಾಣ ಮಾಡಿದ್ದಾರೆ. 135 ವರ್ಷ ಇತಿಹಾಸಯುಳ್ಳ ಕಾಂಗ್ರೆಸ್ ಪಕ್ಷ ಜನರ ಆಸ್ತಿ, ತಾಳಿ ಕಿತ್ತುಕೊಳ್ಳುತ್ತದೆ ಎಂದು ಜನರಲ್ಲಿ ಗೊಂದಲ ಉಂಟುಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಯಾವತ್ತೂ ಗೂಂಡಾಗಿರಿ ಮಾಡಿಲ್ಲ, ತಾಳಿ ಭಾಗ್ಯ ಕೊಟ್ಟಿದೆ. ಗ್ಯಾರಂಟಿ ಮೂಲಕ ಜನರಿಗೆ ಬದುಕು ಕಟ್ಟಿಕೊಟ್ಟಿದ್ದೇವೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಈ ವೇಳೆ ಶಾಸಕ ಪ್ರಸಾದ್ ಅಬ್ಬಯ್ಯ, ಮಾಜಿ ಸಚಿವ ಎ.ಎಮ್.ಹಿಂಡಸಗೇರಿ, ಮುಖಂಡರಾದ ಅಲ್ತಾಫ್ ಹಳ್ಳೂರು, ಹೆಚ್.ಎಫ್.ಜಕ್ಕಪ್ಪನವರ ಸೇರಿದಂತೆ ಮತ್ತಿತರರು ಇದ್ದರು.

ಇದನ್ನೂ ಓದಿ: ಕರ್ನಾಟಕ ಸರ್ಕಾರ ಕೇಂದ್ರದ ಅನುದಾನ ಪಡೆಯಲು ಪಾಕಿಸ್ತಾನದಂತೆ ವರ್ತಿಸುತ್ತಿದೆ ಎಂದು ಹೇಳಿಲ್ಲ: ಅಣ್ಣಾಮಲೈ - Annamalai

Last Updated : Apr 23, 2024, 11:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.