ETV Bharat / state

ಜೂ. 15 ರಿಂದ ಎರಡು ದಿನ 'ದಕ್ಷಿಣ ಭಾರತ ಉತ್ಸವ-2024 ಸಮಾವೇಶ' ಆಯೋಜನೆ: ಸಚಿವ ಹೆಚ್ ಕೆ ಪಾಟೀಲ್ - South India Festival 2024

ಸಚಿವ ಹೆಚ್.​ ಕೆ ಪಾಟೀಲ್ ಅವರು ದಕ್ಷಿಣ ಭಾರತ ಉತ್ಸವ 2024 ಸಮಾವೇಶದ ಬಗ್ಗೆ ಮಾಹಿತಿ ನೀಡಿದರು.

minister-h-k-patil
ಸಚಿವ ಹೆಚ್ ಕೆ ಪಾಟೀಲ್ (ETV Bharat)
author img

By ETV Bharat Karnataka Team

Published : Jun 12, 2024, 7:15 PM IST

ಬೆಂಗಳೂರು : ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI), ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ 2024ರ ಜೂನ್ 15 ಮತ್ತು 16 ರಂದು ಪ್ರಿನ್ಸೆಸ್ ಲೈನ್, ಗೇಟ್ ನಂ. 9, ಅರಮನೆ ಮೈದಾನ, ಬೆಂಗಳೂರಿನಲ್ಲಿ ' ದಕ್ಷಿಣ ಭಾರತ ಉತ್ಸವ-2024' ಸಮಾವೇಶವನ್ನು ಆಯೋಜಿಸಲಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್. ಕೆ ಪಾಟೀಲ್ ತಿಳಿಸಿದರು.

ವಿಧಾನಸೌಧದಲ್ಲಿ ಇಂದು ಸಂಜೆ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಕಾರ್ಯಕ್ರಮವು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಯ ಅವಕಾಶಗಳು ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚು ಒತ್ತು ನೀಡುವ ಮೂಲಕ ದಕ್ಷಿಣ ಭಾರತದ ರಾಜ್ಯಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಪ್ರದರ್ಶಿಸುವ ಗುರಿ ಹೊಂದಿದೆ ಎಂದರು.

ಕ್ರಿಯಾತ್ಮಕ ಪ್ರವಾಸೋದ್ಯಮ ಉದ್ಯಮದೊಳಗೆ ಪಾಲುದಾರರನ್ನು ತೊಡಗಿಸಿಕೊಳ್ಳಲು ಮತ್ತು ಸಬಲೀಕರಣಗೊಳಿಸಲು ನಿಖರವಾಗಿ ವಿನ್ಯಾಸಗೊಳಿಸಲಾದ ದಕ್ಷಿಣ ಭಾರತ ಉತ್ಸವವು ಎರಡು ದಿನಗಳ ಕಾರ್ಯಕ್ರಮವಾಗಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆದಾರರ ಸಮಾವೇಶ, ದಕ್ಷಿಣ ರಾಜ್ಯಗಳ ಶ್ರೀಮಂತ ಸಂಸ್ಕೃತಿ, ಪಾಕಪದ್ಧತಿ ಮತ್ತು ಪ್ರವಾಸೋದ್ಯಮ ಕೊಡುಗೆಗಳನ್ನು ವಿಶ್ಲೇಷಿಸಿ ತೋರಿಸುವ ಪ್ರದರ್ಶನ, ಸಮ್ಮೇಳನಗಳು ಮತ್ತು ಬಿ 2 ಬಿ. ಬಿ 2 ಜಿ ಮತ್ತು ಬಿ 2 ಸಿ ಸಂವಹನಗಳ ಮೂಲಕ ಸಂಪರ್ಕ ಅವಕಾಶಗಳು ಸೇರಿದಂತೆ ವೈವಿಧ್ಯಮಯ ಚಟುವಟಿಕೆಗಳನ್ನು ಒಳಗೊಂಡಿದೆ ಎಂದರು.

ದಕ್ಷಿಣ ಭಾರತ ಉತ್ಸವದ ಸಲುವಾಗಿ ಬಂಡವಾಳ ಹೂಡಿಕೆ ಆಕರ್ಷಿಸಲು ನಮ್ಮ ರಾಜ್ಯದ ಚಿಕ್ಕಮಗಳೂರು, ಮೈಸೂರು, ಉಡುಪಿ ಜಿಲ್ಲೆಗಳಲ್ಲಿ ಹಾಗೂ ನೆರೆಯ ರಾಜ್ಯದ ಹೈದರಾಬಾದ್, ಚೆನ್ನೈ, ವಿಜಯವಾಡ ಮತ್ತು ಕೊಚ್ಚಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಯೋಗಯೊಂದಿಗೆ ಅನೇಕ ರೋಡ್ ಶೋಗಳನ್ನು ನಡೆಸಿ ಅಲ್ಲಿನ ಹೂಡಿಕೆದಾರರೊಂದಿಗೆ ಸಭೆ ನಡೆಸಿದ್ದೇವೆ.

ಪ್ರಯಾಣ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ವಿಶೇಷವಾಗಿ ಎಸ್.ಎಂ.ಇ ಗಳ ಅನೇಕ ಪಾಲುದಾರರು ಹೂಡಿಕೆ ಚಟುವಟಿಕೆಗಳನ್ನು ಪ್ರಾರಂಭಿಸಲು ಸರ್ಕಾರದೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಈ ರೋಡ್ ಶೋಗಳ ಸಮಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿ, ಅವರಿಂದ ಆಸಕ್ತಿ ಪತ್ರವನ್ನು ಸ್ವೀಕರಿಸಲಾಗಿದೆ. ಈಗಾಗಲೇ ಸುಮಾರು ರೂ. 500 ಕೋಟಿ ರೂಪಾಯಿ "ಹೂಡಿಕೆ ಆಸಕ್ತಿ ಪತ್ರ"ವನ್ನು ಸ್ವೀಕರಿಸಲಾಗಿದೆ. ಮತ್ತು ಸಣ್ಣ ಮತ್ತು ಮಧ್ಯಮ ಉದ್ಯಮಗಳಿಂದ ಈ ಸಮಾವೇಶದ ದಿನಗಳಲ್ಲಿ ಇನ್ನೂ ರೂ. 500 ಕೋಟಿ ಹೂಡಿಕೆಯನ್ನು ನಾವು ನಿರೀಕ್ಷಿಸುತ್ತಿದ್ದೇವೆ ಎಂದು ಸಚಿವರು ಮಾಹಿತಿ ನೀಡಿದರು.

ಈ ಪ್ರಯತ್ನದಲ್ಲಿ ಎಫ್‌ಕೆಸಿಸಿಐ ಮತ್ತು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ನಡುವಿನ ಈ ಸಹಯೋಗವು ಆರ್ಥಿಕ ಸಮೃದ್ಧಿ ಮತ್ತು ಸಾಮಾಜಿಕ ಪ್ರಗತಿಯ ಚಾಲಕನಾಗಿ ಪ್ರವಾಸೋದ್ಯಮದ ಅಪಾರ ಸಾಮರ್ಥ್ಯವನ್ನು ಬಳಸಿಕೊಳ್ಳುವ ಹಂಚಿಕೆಯ ಬದ್ಧತೆಯನ್ನು ಒತ್ತಿಹೇಳುತ್ತದೆ. ಕಾರ್ಯತಂತ್ರದ ಪಾಲುದಾರಿಕೆಗಳು ಮತ್ತು ನವೀನ ಉಪಕ್ರಮಗಳ ಮೂಲಕ, ದಕ್ಷಿಣ ಭಾರತ ಉತ್ಸವವು ಅಂತರ್ಗತ ಬೆಳವಣಿಗೆಯನ್ನು ಉತ್ತೇಜಿಸಲು, ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಮತ್ತು ದಕ್ಷಿಣ ಭಾರತವನ್ನು ಜಾಗತಿಕ ಪ್ರವಾಸೋದ್ಯಮ ನಕ್ಷೆಯಲ್ಲಿ ಮುಂಚೂಣಿಯಲ್ಲಿಡಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್​ಕೆಸಿಸಿಐ) ಭಾರತದ ಅತ್ಯಂತ ಹಳೆಯ ಹಾಗೂ 108 ವರ್ಷಗಳ ಇತಿಹಾಸ ಹೊಂದಿದ್ದು, ವ್ಯಾಪಾರ ಸಂಸ್ಥೆಗಳಲ್ಲಿ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಇದು ಕರ್ನಾಟಕದ ವಿವಿಧ ಕ್ಷೇತ್ರಗಳಲ್ಲಿ ವ್ಯವಹಾರಗಳ ಹಿತಾಸಕ್ತಿಗಳನ್ನು ಉತ್ತೇಜಿಸಲು ವೇದಿಕೆಯಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಪ್ರವಾಸೋದ್ಯಮ ಇಲಾಖೆಯು ರಾಜ್ಯದ ವೈವಿಧ್ಯಮಯ ಸಾಂಸ್ಕೃತಿಕ, ನೈಸರ್ಗಿಕ ಮತ್ತು ಐತಿಹಾಸಿಕ ಪರಂಪರೆಯನ್ನು ಪ್ರದರ್ಶಿಸಲು ಬದ್ಧವಾಗಿದೆ ಮತ್ತು ಕರ್ನಾಟಕವನ್ನು ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ ಮಾಡುವ ಗುರಿಯನ್ನು ಹೊಂದಿದೆ. ಇದು ರಾಜ್ಯದ ಸಾಮಾಜಿಕ-ಆರ್ಥಿಕ ಪ್ರಗತಿಗೆ ಕೊಡುಗೆ ನೀಡುವ ಜೊತೆಗೆ ಪ್ರವಾಸಿಗರಿಗೆ ಸಮೃದ್ಧ ಅನುಭವಗಳನ್ನು ನೀಡುತ್ತದೆ ಎಂದು ಸಚಿವರು ತಿಳಿಸಿದರು.

ದಕ್ಷಿಣ ಭಾರತ ಉತ್ಸವದ ಉದ್ದೇಶ ಮತ್ತು ಅವಕಾಶಗಳು : ದಕ್ಷಿಣ ಭಾರತದಲ್ಲಿ ಲಭ್ಯವಿರುವ ಹೂಡಿಕೆ ಅವಕಾಶಗಳನ್ನು ಪ್ರದರ್ಶಿಸುವುದು ಮತ್ತು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುವುದು. ದಕ್ಷಿಣ ಭಾರತದ ಪ್ರವಾಸೋದ್ಯಮದ ಸಾಮರ್ಥ್ಯ ಮತ್ತು ಆಕರ್ಷಣೆಗಳನ್ನು ಪ್ರದರ್ಶಿಸುವುದು.

ಪ್ರವಾಸೋದ್ಯಮವನ್ನು ಉತ್ತೇಜಿಸಲಿದೆ. ಸಾಂಸ್ಕೃತಿಕ ವಿನಿಮಯವನ್ನು ಉತ್ತೇಜಿಸುವುದು ಮತ್ತು ವ್ಯಾಪಾರ ಅವಕಾಶಗಳನ್ನು ಸುಗಮಗೊಳಿಸಲಿದೆ. ದಕ್ಷಿಣ ಭಾರತದ ಶ್ರೀಮಂತ ಸಾಂಸ್ಕೃತಿಕ, ಐತಿಹಾಸಿಕ ಮತ್ತು ಭೌಗೋಳಿಕ ವೈವಿಧ್ಯತೆಯನ್ನು ಇದು ಪದರ್ಶಿಸಲಿದೆ. ದಕ್ಷಿಣ ಭಾರತದ ವಿಶಿಷ್ಟ ಕೊಡುಗೆಗಳನ್ನು ಅನ್ವೇಷಿಸಲು ದೇಸಿಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಸೆಳೆಯುವುದು ಹಾಗೂ ಪ್ರೋತ್ಸಾಹಿಸಲಿದೆ.

ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಪಾಲುದಾರರಿಗೆ ನೆಟ್​ವರ್ಕಿಂಗ್ ಸಹಯೋಗ ಮತ್ತು ಪಾಲುದಾರಿಕೆಗಳನ್ನು ರೂಪಿಸಲು ವೇದಿಕೆಯನ್ನು ಸಹ ಒದಗಿಸಲಿದೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ಪ್ರದರ್ಶಿಸಲು ಉದ್ಯಮಗಳಿಗೆ ಅವಕಾಶಗಳ ವೇದಿಕೆಯಾಗಲಿದೆ.

ದಕ್ಷಿಣ ಭಾರತದಲ್ಲಿ ಜವಾಬ್ದಾರಿಯುತ ಪ್ರವಾಸೋದ್ಯಮ ಪದ್ಧತಿಗಳು, ಸಂರಕ್ಷಣಾ ಪ್ರಯತ್ನಗಳು ಮತ್ತು ಸಮುದಾಯ ಆಧಾರಿತ ಪ್ರವಾಸೋದ್ಯಮ ಉಪಕ್ರಮಗಳ ಮಹತ್ವದ ಬಗ್ಗೆ ಪ್ರತಿನಿಧಿಗಳಿಗೆ ವಿಚಾರಗೋಷ್ಠಿಗಳು, ಕಾರ್ಯಾಗಾರಗಳು ಮತ್ತು ಸಂವಾದಾತ್ಮಕ ಅಧಿವೇಶನಗಳನ್ನು ಆಯೋಜಿಸಲಾಗುತ್ತದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ದಕ್ಷಿಣ ಭಾರತವನ್ನು ಪ್ರಮುಖ ಪ್ರವಾಸೋದ್ಯಮ ತಾಣವಾಗಿ ಬಿಂಬಿಸಲಿದೆ.

ಇದನ್ನೂ ಓದಿ : ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲು; ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.