ETV Bharat / state

ಕೊತ್ತನೂರಿನ 700 ಕೋಟಿ ಮೌಲ್ಯದ ಅರಣ್ಯ ಭೂಮಿ ವಶಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ - Kothanur Forest Land - KOTHANUR FOREST LAND

ಕೊತ್ತನೂರಿನ 700 ಕೋಟಿ ಮೌಲ್ಯದ ಅರಣ್ಯ ಭೂಮಿ ವಶಕ್ಕೆ ಪಡೆಯುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ishwar khandre
ಈಶ್ವರ ಖಂಡ್ರೆ (ETV Bharat)
author img

By ETV Bharat Karnataka Team

Published : Sep 20, 2024, 5:13 PM IST

ಬೆಂಗಳೂರು: ಬೆಂಗಳೂರಿನ ಕೊತ್ತನೂರಿನ ಸರ್ವೆ ನಂ.48ರಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22.08 ಎಕರೆ ಜಮೀನು ಮರು ವಶ ಪ್ರಕ್ರಿಯೆ ಆರಂಭಿಸಲು ಅರಣ್ಯ ಸಚಿವ ಈಶ್ವರ​ ಖಂಡ್ರೆ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು 1999-2000 ಸಾಲಿನಲ್ಲಿ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 22.08 ಎಕರೆ ಜಮೀನಿನಲ್ಲಿ ನೆಡುತೋಪು ಅಭಿವೃದ್ಧಿಪಡಿಸುವ ಸಲುವಾಗಿ ಈ ಭೂಮಿಯನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ. ಆದರೆ, ಈ ಜಮೀನು ವಶಕ್ಕೆ ಪಡೆದು ಅರಣ್ಯ ಬೆಳೆಸುವಲ್ಲಿ ವಿಫಲವಾಗಿರುವ ಇಲಾಖೆಯ ಹಿಂದಿನ ಅಧಿಕಾರಿಗಳ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅರಣ್ಯ ಇಲಾಖೆಗೆ ಮಂಜೂರಾದ 22.08 ಎಕರೆ ಭೂಮಿಯ ಪೈಕಿ 13 ಎಕರೆ ಜಮೀನನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ ಎಂದು ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ 25.01.2000ರ ಆದೇಶದಂತೆ ಪಹಣಿ (ಆರ್.ಟಿ.ಸಿ.)ಯಲ್ಲಿ ನಮೂದಾಗಿದೆ. ಈ ಜಮೀನಿನ ನಕ್ಷೆ ಪಡೆದು ಉಳಿದ 9 ಎಕರೆಯ ದಾಖಲೆಗಳನ್ನೂ ಮಾಡಿಸಿ, ಸುಮಾರು 700 ಕೋಟಿ ರೂ. ಬೆಲೆಬಾಳುವ ಜಮೀನು ಒತ್ತುವರಿಯಾಗಿದ್ದರೆ, ಅದನ್ನು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು 64(ಎ) ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ಈಶ್ವರ ಖಂಡ್ರೆ ಟಿಪ್ಪಣಿಯನ್ನೂ ನೀಡಿದ್ದಾರೆ.

ಈಶ್ವರ ಖಂಡ್ರೆ ಅರಣ್ಯ ಸಚಿವರಾದ ಬಳಿಕ ಇದೇ ಕೊತ್ತನೂರು ಗ್ರಾಮದ ಸರ್ವೆ ನಂಬರ್ 47ರಲ್ಲಿ 2006ರಲ್ಲಿ ಅರಣ್ಯ ಇಲಾಖೆಗೆ ಮಂಜೂರಾಗಿ ಒತ್ತುವರಿಯಾಗಿದ್ದ 17 ಎಕರೆ 34 ಗುಂಟೆ ಜಮೀನನ್ನು ಮರು ವಶಪಡಿಸಿಕೊಂಡು ಇಲ್ಲಿ ಸಸ್ಯೋದ್ಯಾನ ಮತ್ತು ಪಕ್ಷಿಲೋಕ ನಿರ್ಮಿಸಲು ಶಂಕುಸ್ಥಾಪನೆಯನ್ನೂ ನೆರವೇರಿಸಿದ್ದರು. ಅರಣ್ಯ ಇಲಾಖೆಗೆ ಮಂಜೂರಾಗಿದ್ದ ಈ ಭೂಮಿಯನ್ನು 17 ವರ್ಷಗಳ ತರುವಾಯ 2023ರ ಜನವರಿಯಲ್ಲಿ ಅಂದಿನ ಉಪ ವಿಭಾಗಾಧಿಕಾರಿಯಾಗಿದ್ದ ಎಂ.ಜಿ.ಶಿವಣ್ಣ ಮತ್ತು ತಹಶೀಲ್ದಾರ್ ಅಜಿತ್ ರೈ ಏಕಪಕ್ಷೀಯವಾಗಿ 'ಸರ್ಕಾರಿ ಭೂಮಿ' ಎಂದು ಬದಲಾಯಿಸಿ, ಅರಣ್ಯ ಭೂಮಿ ಒತ್ತುವರಿ ಮಾಡಿದ್ದವರಿಗೆ ಅನುಕೂಲ ಮಾಡಿಕೊಡುವ ಪ್ರಯತ್ನ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.

ಕಾನೂನುಬಾಹಿರವಾಗಿ ಅರಣ್ಯ ಭೂಮಿಯನ್ನು ಕಂದಾಯ ಎಂದು ಮಾರ್ಪಾಡು ಮಾಡಿದ್ದಾರೆಂದು ಅಂದಿನ ಅಸಿಸ್ಟೆಂಟ್ ಕಮಿಷನರ್ ಮತ್ತು ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಚಿವರು ಆದೇಶ ನೀಡಿದ್ದರು. ಇಬ್ಬರು ಹಿರಿಯ ಕೆಎಎಸ್ ಅಧಿಕಾರಿಗಳ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ 1980ರ ಅಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಕೈ ಒಕ್ಕಲಿಗ ನಾಯಕರ ನಿಯೋಗದಿಂದ ಸಿಎಂ ಭೇಟಿ; ಮುನಿರತ್ನ ಪ್ರಕರಣದ ತನಿಖೆಗೆ ಎಸ್​​ಐಟಿ ರಚಿಸಲು ಮನವಿ - Vokkaliga Leaders Meet CM

ETV Bharat Logo

Copyright © 2024 Ushodaya Enterprises Pvt. Ltd., All Rights Reserved.