ETV Bharat / state

ಬಿಪಿಎಲ್​​ ಕಾರ್ಡ್​ಗಳ ಪರಿಷ್ಕರಣೆ ತಾತ್ಕಾಲಿಕವಾಗಿ ನಿಲ್ಲಿಸಿದ ಸರ್ಕಾರ - MINISTER K H MUNIYAPPA

ಆಹಾರ ಸಚಿವ ಕೆ. ಹೆಚ್​ ಮುನಿಯಪ್ಪ ಅವರು ಬಿಪಿಎಲ್ ಕಾರ್ಡ್​ಗಳ ಪರಿಷ್ಕರಣೆ ಬಗ್ಗೆ ಮಾತನಾಡಿದ್ದಾರೆ.

minister-k-h-muniyappa
ಸಚಿವ ಕೆ. ಹೆಚ್​ ಮುನಿಯಪ್ಪ (ETV Bharat)
author img

By ETV Bharat Karnataka Team

Published : Nov 21, 2024, 3:13 PM IST

Updated : Nov 21, 2024, 3:29 PM IST

ಬೆಂಗಳೂರು : ರಾಜ್ಯದಲ್ಲಿ ಬಿಪಿಎಲ್​​ ಕಾರ್ಡ್​ಗಳ ಪರಿಷ್ಕರಣೆ ವ್ಯಾಪಕ ವಿರೋಧ ಮತ್ತು ಟೀಕೆಗಳಿಗೆ ಎಡೆ ಮಾಡಿಕೊಟ್ಟಿದ್ದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಕಾರ್ಡ್​ಗಳ ಪರಿಷ್ಕರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ.

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಕೆ. ಹೆಚ್ ಮುನಿಯಪ್ಪ, ಸದ್ಯಕ್ಕೆ ಕಾರ್ಡ್‌ಗಳ ಪರಿಷ್ಕರಣೆಯನ್ನು ಕೈಬಿಡಲಾಗಿದೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದರೆ, ಉಳಿದೆಲ್ಲ ಕಾರ್ಡ್‌ಗಳೂ ಯಥಾಸ್ಥಿತಿಯಲ್ಲಿ ಮುಂದುವರೆಯಲಿವೆ. ಮುಂದಿನ ದಿನಗಳಲ್ಲಿ ಪರಿಷ್ಕರಣೆಗೆ ಒಳಪಡಿಸಿ ಸೂಕ್ತ ತೀರ್ಮಾನ ಕೈಗೊಳ್ಳುವವರೆಗೂ ಯಾವುದೇ ಬದಲಾವಣೆ ಇರುವುದಿಲ್ಲ. ಎಲ್ಲ ಕಾರ್ಡ್‌ಗಳು ಯಥಾಸ್ಥಿತಿಯಲ್ಲೇ ಮುಂದುವರೆಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಚಿವ ಕೆ ಹೆಚ್​ ಮುನಿಯಪ್ಪ ಅವರು ಮಾತನಾಡಿದರು (ETV Bharat)

ಈಗಾಗಲೇ ಪರಿಷ್ಕರಣೆಗೆ ಒಳಪಟ್ಟು, ಅಮಾನತುಗೊಂಡಿರುವ ಕಾರ್ಡ್‌ಗಳನ್ನು ಒಂದು ವಾರದೊಳಗಾಗಿ ನೀಡಿ ಅಕ್ಕಿ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಬಡವರಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸುವುದಾಗಿ ತಿಳಿಸಿದರು.

ಪಾನ್​ ಕಾರ್ಡ್​​​​ ಚೆಕ್​ ಮಾಡಿದಾಗ ಈ ಅಂಶಗಳು ಬಯಲು: ಪಾನ್‌ಕಾರ್ಡ್‌ ಆಧಾರಿತ ಪರಿಶೀಲನೆಯ ವೇಳೆ ಕೆಲವರು ಆದಾಯ ತೆರಿಗೆ ಪಾವತಿಗೆ ವಿಳಂಬವಾಗಿ ದಂಡ ವಿಧಿಸಿಕೊಂಡಿದ್ದಾರೆ. ಅಲ್ಲಿಗೆ ಅವರು ಆದಾಯ ತೆರಿಗೆ ಪಾವತಿದಾರರು ಎಂಬುದು ಖಚಿತವಾಗಿದೆ. ಇನ್ನು ಕೆಲವರು ಸರ್ಕಾರಿ ನೌಕರರಿದ್ದಾರೆ. ಕೇಂದ್ರ ಸರ್ಕಾರದ ಮಾನದಂಡಗಳ ಅನುಸಾರವೇ 2 ತಿಂಗಳಿನಿಂದ ರಾಜ್ಯ ಸರ್ಕಾರ ಬಿಪಿಎಲ್‌ ಕಾರ್ಡ್‌ಗಳ ಪರಿಶೀಲನೆ ಆರಂಭಿಸಿತ್ತು. ಈವರೆಗೂ 3.81 ಲಕ್ಷ ಕಾರ್ಡ್‌ಗಳನ್ನು ಪರಿಷ್ಕರಿಸಲಾಗಿತ್ತು. ಒಟ್ಟು ಪರಿಷ್ಕರಣೆಯಾದ ಕಾರ್ಡ್‌ಗಳಲ್ಲಿ 98,483 ಕಾರ್ಡ್‌ದಾರರು ಆದಾಯ ತೆರಿಗೆ ಪಾವತಿ ಮಾಡುತ್ತಿದ್ದು, 4,036 ಕಾರ್ಡ್‌ದಾರರು ಸರ್ಕಾರಿ ನೌಕರರಾಗಿದ್ದಾರೆ ಎಂದು ಹೇಳಿದ್ದಾರೆ.

ಈ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡುವ ತೀರ್ಮಾನ ತೆಗೆದುಕೊಂಡಿದ್ದೇವೆ. ಉಳಿದಂತೆ ಯಾವುದೇ ಕಾರ್ಡ್‌ಗಳು ರದ್ದುಗೊಳ್ಳದೇ 2 ತಿಂಗಳ ಮೊದಲಿದ್ದಂತೆ ಯಥಾಸ್ಥಿತಿಯಲ್ಲಿ ಮುಂದುವರೆಯಲಿವೆ. ತಾತ್ಕಾಲಿಕವಾಗಿ ಅಮಾನತುಗೊಂಡಿರುವ ಕಾರ್ಡ್‌ಗಳನ್ನು ಒಂದು ವಾರದೊಳಗಾಗಿ ಲಾಗಿನ್‌ಗೆ ಒಳಪಡಿಸಿ ಮುಂದಿನ ವಾರದಿಂದ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ಕರ್ನಾಟಕ; ಮಹಾರಾಷ್ಟ್ರ ಹೊರತುಪಡಿಸಿದರೆ ಕರ್ನಾಟಕ ಹೆಚ್ಚು ಆದಾಯ ತೆರಿಗೆ ಪಾವತಿ ಮಾಡುವ ಎರಡನೇ ರಾಜ್ಯವಾಗಿದೆ. ಆದರೂ ಇಲ್ಲಿ ಬಿಪಿಎಲ್‌ ಕಾರ್ಡ್‌ಗಳ ಪ್ರಮಾಣ ಶೇ. 66 ರಷ್ಟಿದೆ. ಬೇರೆ ಯಾವ ರಾಜ್ಯಗಳಲ್ಲೂ ಬಿಪಿಎಲ್‌ ಕಾರ್ಡ್‌ ಪ್ರಮಾಣ ಶೇ.50 ದಾಟಿಲ್ಲ. ಆದರೆ, ಇದು ನಮಲ್ಲಿ ಹೆಚ್ಚಿರುವ ಕಾರಣ ಪರಿಷ್ಕರಣೆ ಮಾಡಲು ಎರಡು ತಿಂಗಳ ಹಿಂದೆ ನಿರ್ಧರಿಸಲಾಗಿತ್ತು. ಅಧಿಕಾರಿಗಳು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಪ್ಯಾನ್‌ಕಾರ್ಡ್‌ ಆಧರಿಸಿ ಪರಿಷ್ಕರಣೆ ನಡೆದಿದೆ. ಶೇ.1 ಅಥವಾ 2 ರಷ್ಟು ಗೊಂದಲಗಳಾಗಿವೆ. ಅರ್ಹರ ಕಾರ್ಡ್‌ಗಳು ಸಮಸ್ಯೆಗೊಳಗಾಗಿರಬಹುದು. ಏನೇ ಲೋಪಗಳಾಗಿದ್ದರೂ ಅದನ್ನು ಸರಿಪಡಿಸಲಾಗುವುದು ಮತ್ತು ಇದರ ಸಂಪೂರ್ಣ ಹೊಣೆಯನ್ನು ನಾನೇ ಹೊತ್ತುಕೊಳ್ಳುತ್ತೇನೆ ಎಂದು ಹೇಳಿದರು.

ಬಿಪಿಎಲ್‌ನಿಂದ ಎಪಿಎಲ್‌ ಆಗಿ ಪರಿವರ್ತಿಸಲಾಗಿದೆ: ಕೇಂದ್ರ ಸರ್ಕಾರ ಸಹ ಬಿಪಿಎಲ್‌ ಕಾರ್ಡ್‌ಗಳ ಪರಿಷ್ಕರಣೆ ಮಾಡಿದ್ದು, 5.08 ಕೋಟಿ ಕಾರ್ಡ್‌ಗಳನ್ನು ರದ್ದು ಮಾಡಿದೆ. ರಾಜ್ಯದಲ್ಲಿ 8,647 ಕಾರ್ಡ್‌ಗಳನ್ನು ಅಮಾನತುಗೊಳಿಸಲಾಗಿದೆ. 59,379 ಕಾರ್ಡ್‌ಗಳನ್ನು ಬಿಪಿಎಲ್‌ನಿಂದ ಎಪಿಎಲ್‌ ಆಗಿ ಪರಿವರ್ತಿಸಲಾಗಿದೆ. ಇದರಲ್ಲೂ 16,806 ಕಾರ್ಡ್‌ಗಳನ್ನು ಬಿಪಿಎಲ್‌ ಆಗಿಯೇ ಮತ್ತೆ ಮುಂದುವರೆಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಅಂತ್ಯೋದಯ ಅನ್ನಯೋಜನೆಯಡಿ 10,68,028 ಕಾರ್ಡ್‌ಗಳಿವೆ. ಬಿಪಿಎಲ್‌ ಕಾರ್ಡ್‌ಗಳು 1,02,44,435 ಇವೆರಡೂ ಸೇರಿ 1,13,12,463 ಕಾರ್ಡ್‌ಗಳಿವೆ. ರಾಜ್ಯಸರ್ಕಾರ 11,84,425 ಕಾರ್ಡ್‌ಗಳನ್ನು ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡಿರುವುದು ಹಾಗೂ ಅಂತ್ಯೋದಯ ಅನ್ನ ಯೋಜನೆಯಡಿ 1,24,97,088 ಕಾರ್ಡ್‌ಗಳನ್ನು ನೀಡಲಾಗಿದೆ. ಆದ್ಯತೆ ಇರುವ ಕುಟುಂಬಗಳಿಗೆ (ಎಪಿಎಲ್‌) 25,62,343 ಕಾರ್ಡ್‌ಗಳಿವೆ. ರಾಜ್ಯದಲ್ಲಿ ಒಟ್ಟಾರೆ 1,50,59,431 ಕಾರ್ಡ್‌ಗಳಿದ್ದು, ಇದರಲ್ಲಿ 1,02,509 ಕಾರ್ಡ್‌ಗಳನ್ನು ಮಾತ್ರ ಪರಿಷ್ಕರಣೆ ಮಾಡಲಾಗಿದೆ. ಉಳಿದಂತೆ ಎಲ್ಲಾ ಕಾರ್ಡ್‌ಗಳು ಯಥಾಸ್ಥಿತಿಯಲ್ಲಿ ಮುಂದುವರೆಯಲಿವೆ ಎಂದು ವಿವರಿಸಿದರು.

ಮತ್ತಷ್ಟು ಮಂದಿ ಅರ್ಜಿ ಸಲ್ಲಿಸಿದ್ದಾರೆ: ಕಳೆದ ಎರಡು ವರ್ಷಗಳಿಂದ 2.95 ಲಕ್ಷ ಅರ್ಜಿಗಳು ಬಾಕಿ ಉಳಿದಿದ್ದವು. ಅವುಗಳನ್ನು ಪರಿಷ್ಕರಿಸಿ 2,69,536 ಮಂದಿಗೆ ಕಾರ್ಡ್‌ ನೀಡಿದ್ದು, ಅವರು ಅಕ್ಕಿ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಶೇ.66ರಷ್ಟು ಬಿಪಿಎಲ್‌ ಕಾರ್ಡ್‌ಗಳಿದ್ದರೂ ಮತ್ತಷ್ಟು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಸದ್ಯಕ್ಕೆ ಸ್ಥಗಿತಗೊಂಡಿರುವ ಪರಿಷ್ಕರಣೆ ಕಾರ್ಯವನ್ನು ಮತ್ತೆ ತೆಗೆದುಕೊಂಡು ಎಲ್ಲವನ್ನೂ ಸರಿಪಡಿಸಿದ ಬಳಿಕ ಹೊಸ ಕಾರ್ಡ್‌ಗಳ ಪರಿಶೀಲನೆಯನ್ನು ಕೈಗೆತ್ತಿಕೊಳ್ಳುವುದಾಗಿ ಮುನಿಯಪ್ಪ ಅವರು ತಿಳಿಸಿದರು. ಅನ್ನಭಾಗ್ಯ ಯೋಜನೆಯಡಿ ಆಗಸ್ಟ್‌ ತಿಂಗಳವರೆಗೆ ಹಣವನ್ನು ಫಲಾನುಭವಿಗಳ ಖಾತೆಗೆ ಪಾವತಿಸಲಾಗಿದೆ. ಸೆಪ್ಟೆಂಬರ್‌, ಅಕ್ಟೋಬರ್‌ ತಿಂಗಳ ನಗದನ್ನು ಒಂದು ವಾರದೊಳಗಾಗಿ ಬಿಡುಗಡೆ ಮಾಡುವುದಾಗಿ ಹೇಳಿದರು.

ಇದನ್ನೂ ಓದಿ : ಸರ್ಕಾರಿ ನೌಕರರು, IT ಪಾವತಿದಾರರ BPL ಕಾರ್ಡ್ ಮಾತ್ರ ರದ್ದು, ಅರ್ಹರ ಕಾರ್ಡ್​ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡಿ: ಸಿಎಂ

Last Updated : Nov 21, 2024, 3:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.