ETV Bharat / state

ಪರಿಶಿಷ್ಟ ಜಾತಿಯಲ್ಲಿ ನನಗಿಂತ ಸೀನಿಯರ್​ ಖರ್ಗೆ ಇದಾರೆ, ಸಿಎಂ ಸ್ಥಾನ ಖಾಲಿ ಇಲ್ಲ : ಸಚಿವ ಕೆ ಹೆಚ್ ಮುನಿಯಪ್ಪ - MINISTER K H MUNIYAPPA

ಸಚಿವ ಕೆ. ಹೆಚ್​ ಮುನಿಯಪ್ಪ ಅವರು ಸಿಎಂ ಹುದ್ದೆ ಕುರಿತು ಮಾತನಾಡಿದ್ದಾರೆ. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ತಿಳಿಸಿದ್ದಾರೆ.

minister-k-h-muniyappa
ಸಚಿವ ಕೆ ಹೆಚ್ ಮುನಿಯಪ್ಪ (ETV Bharat)
author img

By ETV Bharat Karnataka Team

Published : Nov 21, 2024, 6:09 PM IST

Updated : Nov 21, 2024, 7:07 PM IST

ಬೆಂಗಳೂರು : ಪ್ರಸ್ತುತ ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಮುಖ್ಯಮಂತ್ರಿ ಆಯ್ಕೆ ಮಾಡುವುದರ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಹೆಚ್ ಮುನಿಯಪ್ಪ ಹೇಳಿದರು.

ವಿಧಾನಸೌಧದಲ್ಲಿ ಇಂದು ಕರೆದಿದ್ದ ಮಾಧ್ಯಮಗೋಷ್ಟಿ ಸಂದರ್ಭದಲ್ಲಿ ಯಾವಾಗ ಸಿಎಂ ಆಗುತ್ತೀರಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸ್ಥಾನ ಖಾಲಿ ಇಲ್ಲ. ಕಾರ್ಯಕ್ರಮವೊಂದರಲ್ಲಿ ಕೇಳಿದಾಗ, ಪರಿಶಿಷ್ಟ ಜಾತಿಯಲ್ಲಿ ನಾನು ಹಿರಿಯನಿದ್ದೇನೆ ಎಂದಷ್ಟೇ ಹೇಳಿದ್ದೇನೆ. ನನಗಿಂತ ಮಲ್ಲಿಕಾರ್ಜುನ ಖರ್ಗೆ ಹಿರಿಯರು. ಅವರು 50 ವರ್ಷಗಳಿಂದ ರಾಜಕೀಯ ಜೀವನದಲ್ಲಿದ್ದರೂ ಮುಖ್ಯಮಂತ್ರಿಯಾಗಲು ಸಾಧ್ಯವಾಗಲಿಲ್ಲ. ಅದು ನಮ್ಮ ಹೈಕಮಾಂಡ್ ತೀರ್ಮಾನ ಮಾಡಬೇಕು ಎಂದು ಹೇಳಿದರು.

ಸಚಿವ ಕೆ ಹೆಚ್ ಮುನಿಯಪ್ಪ ಮಾತನಾಡಿದರು (ETV Bharat)

ಪ್ರಸ್ತುತ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಖಾಲಿ ಇದ್ದರೆ ತಾನೇ ಆ ಯೋಚನೆ. ಸ್ವಾಮೀಜಿ ಅವರು ಸಿಎಂ ಅನ್ನು ಖಾಲಿ ಮಾಡಿಸುತ್ತೇನೆ ಎಂದು ಹೇಳಿಲ್ಲ ಎಂದು ಸಚಿವ ಮುನಿಯಪ್ಪ ಸ್ಪಷ್ಟಪಡಿಸಿದರು.

ಇದನ್ನೂ ಓದಿ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಡಿಸಿಎಂ ಡಿ. ಕೆ ಶಿವಕುಮಾರ್​

Last Updated : Nov 21, 2024, 7:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.