ಚಿಕ್ಕಬಳ್ಳಾಪುರ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿನಾರಾಯಣ್ ಅವರ ಮೇಲೆ ಹಲ್ಲೆ ನಡೆಸಿರುವ ಕುರಿತು ಸಚಿವ ಕೆ. ಹೆಚ್ ಮುನಿಯಪ್ಪ ಅವರು ಪ್ರತಿಕ್ರಿಯಿಸಿದ್ದಾರೆ. ಒಬ್ಬ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬಳಿ ಈ ರೀತಿ ನಡೆದುಕೊಂಡಿರುವುದು ಪ್ರಪ್ರಥಮವಾಗಿದೆ. ಇದನ್ನು ಮಾಡಿದವರು ಹಾಗೂ ಇದಕ್ಕೆ ಪ್ರೋತ್ಸಾಹ ನೀಡಿರುವುದು ಸರಿಯಿಲ್ಲ. ಈ ಘಟನೆಯ ಹಿಂದೆ ಯಾರು ಇದ್ದಾರೆ ಎಂಬುದು ನನಗೆ ಗೊತ್ತಿದೆ. ಈ ಕುರಿತು ನಾನು ಕಾಂಗ್ರೆಸ್ ಪ್ರದೇಶ ಸಮಿತಿಗೆ ದೂರು ನೀಡುತ್ತೇನೆ ಎಂದು ಹೇಳಿದರು.
ಚಿಂತಾಮಣಿ ತಾಲೂಕಿನ ಕೈವಾರ ಕ಼್ಷೇತ್ರಕ್ಕೆ ಭೇಟಿ ನೀಡಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಚಿಕ್ಕ ವಿಷಯಗಳನ್ನು ದೊಡ್ಡದಾಗಿ ಮಾಡಿಕೊಳ್ಳಬಾರದಾಗಿತ್ತು. ಒಬ್ಬ ಅಧ್ಯಕ್ಷರ ಮೇಲೆ ಈ ರೀತಿ ಮಾಡಿರುವುದು ಖಂಡನೀಯ. ಅಧ್ಯಕ್ಷರಿಗೆ ಅಪಮಾನ ಮಾಡಿರುವುದು ಕಾಂಗ್ರೆಸ್ ಪ್ರದೇಶ ಸಮಿತಿಗೆ ಅಪಮಾನ ಮಾಡಿದಂತಾಗುತ್ತದೆ. ನಿಜವಾದ ಕಾಂಗ್ರೆಸ್ ನವರು ಆಗಿದ್ರೆ ಈ ರೀತಿ ಮಾಡುತ್ತಿರಲಿಲ್ಲ. ಈ ಘಟನೆಯಿಂದ ನನಗೆ ಸಾಕಷ್ಟು ನೋವಾಗಿದೆ ಎಂದು ತಿಳಿಸಿದರು.
ಕೆ. ಹೆಚ್ ಮುನಿಯಪ್ಪ ಬಣ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ಮುಖಂಡರ ನಡುವೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಿನಾರಾಯಣ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ಮುಖಂಡರು ಕೋಲಾರ ನಗರ ಹೊರವಲಯದ ನಂದಿನಿ ಪ್ಯಾಲೇಸ್ನಲ್ಲಿ ಶನಿವಾರ (ಸೆ.28) ಸಭೆಯನ್ನು ನಡೆಸುತ್ತಿದ್ದರು. ಈ ವೇಳೆ, ಉಭಯ ಬಣದ ಮುಖಂಡರ ನಡುವೆ ಮಾತಿಗೆ ಮಾತು ಬೆಳೆದು, ಗಲಾಟೆ ಗದ್ದಲ ಶುರುವಾಗಿ, ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದರು.
ಇದನ್ನೂ ಓದಿ : 'ಯಾವ ಸಚಿವರ ತಲೆದಂಡವೂ ಆಗಲ್ಲ, ಏಕೆಂದರೆ..': ಸಚಿವ ಕೆ.ಹೆಚ್.ಮುನಿಯಪ್ಪ - K H Muniyappa