ETV Bharat / state

ಮಳೆಹಾನಿ: ಚಿಕ್ಕಮಗಳೂರು ಜಿಲ್ಲೆಗೆ ವಿಶೇಷ ಪ್ಯಾಕೇಜ್‌ಗಾಗಿ ಸಿಎಂಗೆ ಸಚಿವ ಕೆ.ಜೆ. ಜಾರ್ಜ್ ಮನವಿ - Chikkamagaluru Rain Damage

author img

By ETV Bharat Karnataka Team

Published : Aug 3, 2024, 4:43 PM IST

ಮಳೆ ಮತ್ತು ಗಾಳಿಯಿಂದ ಉಂಟಾದ ಹಾನಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ವಿಶೇಷ ಪರಿಹಾರ ಪ್ಯಾಕೇಜ್‌ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಮನವಿ ಮಾಡಿದ್ದಾರೆ.

chikkamagaluru
ಚಿಕ್ಕಮಗಳೂರಲ್ಲಿ ಮಳೆಯಿಂದ ಹಾನಿ (ETV Bharat)

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ಗಾಳಿಯಿಂದ ಆಗಿರುವ ಹಾನಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ಮಾನದಂಡಕ್ಕಿಂತ ಹೆಚ್ಚುವರಿಯಾಗಿ ವಿಶೇಷ ಪರಿಹಾರ ಪ್ಯಾಕೇಜ್ ನೀಡುವಂತೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರನ್ನು ಭೇಟಿಯಾಗಿ ಪರಿಹಾರ ಕುರಿತು ಸಮಾಲೋಚನೆ ನಡೆಸಿರುವುದಾಗಿ ಸಚಿವರು ತಿಳಿಸಿದರು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದ ಅಪಾರ ಹಾನಿಯಾಗಿದೆ. ಎನ್‌ಡಿಆರ್‌ಎಫ್ ಮಾನದಂಡದ ಅನ್ವಯ ನೆರವು ನಿಗದಿ ಮಾಡಿದರೆ ಜಿಲ್ಲೆಯಲ್ಲಿ ಪರಿಹಾರ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ, ವಿಶೇಷ ಪ್ರಕರಣ ಎಂದು ಪರಿಗಣಿಸಿ ಜಿಲ್ಲೆಗೆ ಪ್ರಕೃತಿ ವಿಕೋಪ ಪರಿಹಾರಕ್ಕಾಗಿ ಹೆಚ್ಚುವರಿ ಅನುದಾನ ನೀಡಬೇಕು ಎಂದು ಕೋರಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿ, ಆಗಿರುವ ತೊಂದರೆಗಳ ಬಗ್ಗೆ ಪರಿಶೀಲಿಸಿದ್ದೇನೆ. ಸಾಕಷ್ಟು ಮನೆಗಳು ಕುಸಿದಿದ್ದು, ರಸ್ತೆಗಳು ಕೂಡ ಹಾನಿಗೊಳಗಾಗಿವೆ. ಇದರಿಂದ ಸಂಪರ್ಕ ವ್ಯವಸ್ಥೆಯೂ ಅಸ್ತವ್ಯಸ್ತಗೊಂಡು ತಾತ್ಕಾಲಿಕವಾಗಿ ಪರ್ಯಾಯ ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗಿದೆ. ಅನೇಕ ಕಡೆ ಭೂ ಕುಸಿತವುಂಟಾಗಿದೆ. ಇನ್ನೂ ಕೆಲವೆಡೆ ಭೂ ಕುಸಿತದ ಆತಂಕ ಕಾಣಿಸಿಕೊಂಡಿದೆ. ಮರಗಳು ಬಿದ್ದು ವಿದ್ಯುತ್ ಕಂಬ, ತಂತಿ, ಪರಿವರ್ತಕಗಳು ಹಾಳಾಗಿವೆ. ಇವೆಲ್ಲವನ್ನು ಸರಿಪಡಿಸಲು ಹಚ್ಚುವರಿ ಅನುದಾನದ ಅಗತ್ಯವಿದೆ ಎಂಬುದನ್ನು ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮನೆಗಳು ಸಂಪೂರ್ಣ ಹಾನಿಗೊಳಗಾದವರಿಗೆ ತಾತ್ಕಾಲಿಕ ಪರಿಹಾರವಾಗಿ 1.20 ಲಕ್ಷ ರೂ. ಪರಿಹಾರವನ್ನು ಈಗಾಗಲೇ ನೀಡಲಾಗಿದೆ. ಉಳಿದಂತೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ 3.80 ಲಕ್ಷ ರೂ. ನೀಡಿ ಮನೆ ನಿರ್ಮಿಸಿ ಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದೇ ರೀತಿ ಹಾನಿಗೊಳಗಾಗಿರುವ ಮತ್ತು ಕುಸಿದಿರುವ ರಸ್ತೆಗಳನ್ನು ತಾತ್ಕಾಲಿಕವಾಗಿ ದುರಸ್ತಿ ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಶಾಶ್ವತ ಪರಿಹಾರಕ್ಕೆ ಕ್ರಿಯಾಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ಭೂ ಕುಸಿತಕ್ಕೂ ಶಾಶ್ವತ ಪರಿಹಾರ ಕಲ್ಪಿಸಬೇಕಾಗಿದೆ. ಎನ್‌ಡಿಆರ್‌ಎಫ್ ಅನ್ವಯ ಅನುದಾನ ನೀಡಿದರೆ, ಈ ಎಲ್ಲಾ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಯವರಿಗೆ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಗಿರುವ ಮಳೆಹಾನಿ ಬಗ್ಗೆ ಸಮಗ್ರ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಸದ್ಯದಲ್ಲೇ ವರದಿಯನ್ನು ಸಲ್ಲಿಸಲಾಗುವುದು. ಈ ವರದಿ ಆಧರಿಸಿ ಜಿಲ್ಲೆಗೆ ಹೆಚ್ಚಿನ ನೆರವನ್ನು ರಾಜ್ಯ ಸರ್ಕಾರದಿಂದ ಒದಗಿಸಬೇಕು. ಆ ಮೂಲಕ ಜಿಲ್ಲೆಯ ಜನರ ನೆರವಿಗೆ ಧಾವಿಸಬೇಕು ಎಂದು ಸಚಿವರು ಕೋರಿದ್ದಾರೆ.

ಇದಕ್ಕೆ ಮುಖ್ಯಮಂತ್ರಿಯವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದ ಭಾರೀ ಹಾನಿಯಾಗಿದ್ದು, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಅನುದಾನ ಹೊರತುಪಡಿಸಿ ಹೆಚ್ಚುವರಿ ಆರ್ಥಿಕ ನೆರವು ನೀಡುವಂತೆ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಮನವಿ ಮಾಡಿ ವಾಸ್ತವ ಸ್ಥಿತಿಯನ್ನು ವಿವರಿಸಲಾಗಿದೆ. ಅವರಿಂದ ಪೂರಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಇದನ್ನೂ ಓದಿ: ಡಾಂಬರ್​ ರಸ್ತೆ ಕಣ್ಮರೆ, ಮನೆ ಮೇಲೆ ಅಪ್ಪಳಿಸಿದ ಗುಡ್ಡ: ಕಳಸ, ಸಂಸೆಯಲ್ಲಿ ಮಳೆ ಸಂಬಂಧಿ ಅವಘಡಗಳು - Chikkamagaluru Rain

ETV Bharat Logo

Copyright © 2024 Ushodaya Enterprises Pvt. Ltd., All Rights Reserved.