ETV Bharat / state

ರಾಜ್ಯಾದ್ಯಂತ ಶೀಘ್ರದಲ್ಲೇ ಮತ್ತೊಮ್ಮೆ ಕಂದಾಯ ಅದಾಲತ್​ಗೆ ಚಾಲನೆ: ಸಚಿವ ಕೃಷ್ಣ ಭೈರೇಗೌಡ

ಜನಸಾಮಾನ್ಯರ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಕಂದಾಯ ಅದಾಲತ್‌ಗೆ ಮರುಚಾಲನೆ ಸಿಗಲಿದೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ಸಚಿವ ಕೃಷ್ಣ ಭೈರೇಗೌಡ
ಸಚಿವ ಕೃಷ್ಣ ಭೈರೇಗೌಡ
author img

By ETV Bharat Karnataka Team

Published : Jan 30, 2024, 6:49 AM IST

ಬೆಂಗಳೂರು: 'ಕಂದಾಯ ಅದಾಲತ್' ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರ್‌ಗೆ ಪ್ರತ್ಯಾಯೋಜಿಸುವ ಅವಧಿ ವಿಸ್ತರಿಸುವ ಸಂಬಂಧ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದ್ದು, ಶೀಘ್ರದಲ್ಲೇ ದಿನಾಂಕ ಘೋಷಿಸಲಾಗುವುದು. ಒಂದೇ ಸೂರಿನಡಿಯಲ್ಲಿ ಜನಸಾಮಾನ್ಯರ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಕಂದಾಯ ಅದಾಲತ್ ಕಾರ್ಯಕ್ರಮಕ್ಕೆ ಮರುಚಾಲನೆ ನೀಡುವ ಸಂಬಂಧ ಸೋಮವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸಂಬಂಧಿತ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದರು. ಸರ್ಕಾರದ ಆದೇಶದಲ್ಲಿ ಗಣಕೀಕೃತ ಪಹಣಿಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ರಾಜ್ಯಾದ್ಯಂತ ಮತ್ತೊಮ್ಮೆ ಕಂದಾಯ ಅದಾಲತ್ ಆಂದೋಲನ ಕೈಗೊಳ್ಳಬೇಕು. ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಜನರ ಸಮಸ್ಯೆಗಳಿಗೆ ಒಂದೇ ಸೂರಿನಡಿ ಪರಿಹಾರ ನೀಡಬೇಕು ಎಂದು ಅವರು ಸೂಚಿಸಿದರು.

ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರೆಸಿಕೊಂಡು ಬರಲಾಗುತ್ತಿದೆ. ಅದರನ್ವಯ, ಈ ಅಧಿಕಾರ ಪ್ರತ್ಯಾಯೋಜನೆಯು ಡಿಸೆಂಬರ್ 31ರಂದು ಮುಕ್ತಾಯಗೊಂಡಿತ್ತು. ಕಂದಾಯ ಅದಾಲತ್ ಕಾರ್ಯಕ್ರಮದಡಿಯಲ್ಲಿ ಆಕಾರ್ಬಂದ್ ಮತ್ತು ಪಹಣಿ ಕಾಲಂ 3 ಮತ್ತು 9ರ ನಮೂದಿನಲ್ಲಿನ ವ್ಯತ್ಯಾಸಕ್ಕೆ ಸಂಬಂಧಿಸಿದಂತೆ ದೋಷಪೂರಿತ ಪಹಣಿಗಳನ್ನು ಸರಿಪಡಿಸಲಾಗುತ್ತಿದ್ದು, 2022-23ನೇ ಸಾಲಿನಲ್ಲಿ ಪಹಣಿ ಕಾಲಂ 3 ಮತ್ತು 9ರಲ್ಲಿ ವ್ಯತ್ಯಾಸವಿರುವ ಹೆಚ್ಚಿನ ಸಂಖ್ಯೆ ಪಹಣಿಗಳನ್ನು ಸರಿಪಡಿಸಿರುವುದು ಕಂಡುಬಂದಿದೆ. 2022-2023ರ ಸಾಲಿನ ಪ್ರಗತಿಯನ್ನು ಅವಲೋಕಿಸಲು ಈ ಕಾರ್ಯಕ್ರಮವನ್ನು ಮತ್ತೆ ಮುಂದುವರಿಸಲು ನಿರ್ಧರಿಸಲಾಗಿದೆ. ಕಂದಾಯ ಅದಾಲತ್ ಆಂದೋಲನದ ಮೂಲಕ ಪಹಣಿ ತಿದ್ದುವ ಕಾರ್ಯವನ್ನು ಮುಂದುವರೆಸುವುದು ಬಹಳ ಅವಶ್ಯಕವಾಗಿದೆ. ಈ ಮೂಲಕ ಬಾಕಿ ಉಳಿದಿರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಅನುಕೂಲವಾಗುತ್ತದೆ ಎಂದು ಸಚಿವರು ತಿಳಿಸಿದರು.

ಪೈಕಿ ಮತ್ತು ಪಹಣಿ ಕಾಲಂ 3 ಮತ್ತು 9ರಲ್ಲಿ ವ್ಯತ್ಯಾಸವಿರುವ ಪ್ರಕರಣಗಳ ಸಂಖ್ಯೆ ಎಷ್ಟು ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಯಿತು. ಈ ವೇಳೆ ಅಂಕಿಅಂಶಗಳನ್ನು ಮುಂದಿಟ್ಟ ಅಧಿಕಾರಿಗಳು ರಾಜ್ಯದಲ್ಲಿ ಒಟ್ಟಾರೆ 1,32,618 ಪ್ರಕರಣಗಳಿದ್ದು, ಈ ಪೈಕಿ ಕೊಡಗಿನಲ್ಲೇ ಸುಮಾರು 60,000ಕ್ಕೂ ಹೆಚ್ಚಿನ ಪ್ರಕರಣಗಳಿವೆ. ಸೋಮವಾರಪೇಟೆ ತಾಲೂಕಿನಲ್ಲಿ ಅಧಿಕ ಸಂಖ್ಯೆಯಲ್ಲಿ ಸರ್ಕಾರಿ ಮಂಜೂರು ಭೂಮಿ ಇದ್ದರೆ, ಉಳಿದ ತಾಲೂಕುಗಳಲ್ಲಿ ಜಮಾ ಬಾಣೆ ಭೂಮಿ ಹೆಚ್ಚಿದೆ. ಹೀಗಾಗಿ ಪೈಕಿ ಮತ್ತು ಪಹಣಿ ಕಾಲಂ 3 ಮತ್ತು 9ರಲ್ಲಿ ವ್ಯತ್ಯಾಸವಿರುವ ಪ್ರಕರಣಗಳ ಸಂಖ್ಯೆಯೂ ಅಧಿಕವಾಗಿದೆ ಎಂದು ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು.

ಪೈಕಿ ಮತ್ತು ಪಹಣಿ ಕಾಲಂ 3 ಮತ್ತು 9ರಲ್ಲಿ ವ್ಯತ್ಯಾಸವಿರುವ ಪ್ರಕರಣಗಳ ಸಂಖ್ಯೆ ಕೊಡಗಿನಲ್ಲಿ ಅಧಿಕವಾಗಿದ್ದು, ಸಮಸ್ಯೆ ಬಗೆಹರಿಸುವಂತೆ ಅಲ್ಲಿನ ಸ್ಥಳೀಯ ಶಾಸಕರು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಕೊಡಗಿನಲ್ಲಿ ವಿಶೇಷ ಆದ್ಯತೆಯ ಮೇಲೆ ಕೆಲಸ ನಿರ್ವಹಿಸುವ ತುರ್ತು ಇದೆ. ಸಂಬಂಧಿತ ಕಂದಾಯ ಮತ್ತು ಸರ್ವೇ ಇಲಾಖೆ ಹಿರಿಯ ಅಧಿಕಾರಿಗಳು ಕೊಡಗಿಗೆ ತೆರಳಿ ಸರ್ವೇ ತಯಾರಿ ಕೆಲಸ ಆರಂಭಿಸಬೇಕು. ಮುಂದಿನ ಎರಡು ತಿಂಗಳಲ್ಲಿ ಕೆಲಸ ಪೂರ್ಣಗೊಳ್ಳಬೇಕು. ಅಧಿವೇಶನಕ್ಕೂ ಮುನ್ನ ಸ್ವತಃ ನಾನೂ ಸಹ ಕೊಡಗಿಗೆ ತೆರಳಿ ಪರಿಶೀಲಿಸುತ್ತೇನೆ ಎಂದರು.

ರಾಜ್ಯಾದ್ಯಂತ ಭೂಮಿ ತಂತ್ರಾಂಶದಲ್ಲಿ 1,89,55,773 ಆರ್​ಟಿಸಿ ಇದ್ದು, 80,53,616 ಆರ್​ಟಿಸಿಗಳು ಡಿಜಿಟಲೀಕರಣಗೊಳ್ಳುವುದು ಬಾಕಿ ಇದೆ. ಈ ಕೆಲಸವನ್ನು ಶೀಘ್ರದಲ್ಲಿ ಮುಗಿಸಿ, ಸಂಯೋಜಿತ ಪರಿವರ್ತನೆ ಪೋಡಿ ಕೆಲಸವನ್ನೂ ಶೀಘ್ರವಾಗಿ ಮುಗಿಸಲು ಪೋಡಿ ಅದಾಲತ್​ಗೆ ಚಾಲನೆ ನೀಡಿ ಎಂದು ಸಚಿವರು ಸೂಚಿಸಿದರು.

ಇದನ್ನೂ ಓದಿ: ಶಿವಮೊಗ್ಗ: ತುಂಗಾ ರಿವರ್ ಫ್ರಂಟ್ ಪ್ರಾಜೆಕ್ಟ್ ಲೋಕಾರ್ಪಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.