ETV Bharat / state

ಬಹಿರಂಗ‌ ಚರ್ಚೆಗೆ ನಿರ್ಮಲಾ ಸೀತಾರಾಮನ್​ಗೆ ಆಹ್ವಾನಿಸಿದ ಸಚಿವ ಕೃಷ್ಣ ಬೈರೇಗೌಡ: ತೆರಿಗೆ ಅನ್ಯಾಯದ ಬಗ್ಗೆ ಕಿಡಿ - Krishna Byre Gowda

ಸಚಿವ ಕೃಷ್ಣ ಬೈರೇಗೌಡ ಅವರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬಹಿರಂಗ‌ ಚರ್ಚೆಗೆ ಆಹ್ವಾನಿಸಿದ್ದಾರೆ. ತರಿಗೆ ಅನ್ಯಾಯದ ಕುರಿತು ಕೃಷ್ಣ ಬೈರೇಗೌಡ ಕಿಡಿಕಾರಿದ್ದಾರೆ.

MINISTER KRISHNA BYRE GOWDA  BENGALURU  OPEN DISCUSSION  NIRMALA SITHARAMAN
ಬಹಿರಂಗ‌ ಚರ್ಚೆಗೆ ನಿರ್ಮಲಾ ಸೀತಾರಾಮನ್​ಗೆ ಆಹ್ವಾನಿಸಿದ ಸಚಿವ ಕೃಷ್ಣ ಬೈರೇಗೌಡ: ತೆರಿಗೆ ಅನ್ಯಾಯದ ಬಗ್ಗೆ ಕಿಡಿ
author img

By ETV Bharat Karnataka Team

Published : Apr 7, 2024, 9:48 AM IST

ಬೆಂಗಳೂರು: ರಾಜ್ಯಕ್ಕೆ GST, ಸೆಸ್ ಹಾಗೂ ಬರ ಪರಿಹಾರ ವಿಳಂಬ ವಿಚಾರವಾಗಿ ಬಹಿರಂಗ ಚರ್ಚೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಆಹ್ವಾನಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಶನಿವಾರ ಸಂಜೆ ನಗರದ ಗಾಂಧಿ ಭವನದಲ್ಲಿ ವೇದಿಕೆ ಸಜ್ಜುಗೊಳಿಸಿದ್ದರು.‌ ಬಹಿರಂಗ ಚರ್ಚೆಗಾಗಿ ಸಿದ್ಧಪಡಿಸಲಾದ ವೇದಿಕೆಯಲ್ಲಿ ಕೇಂದ್ರ ವಿತ್ತ ಸಚಿವೆಗಾಗಿ ಕೆಲ ಹೊತ್ತು ಕಾದು ಕುಳಿತ ಕಂದಾಯ ಸಚಿವರು ಬಳಿಕ ತೆರಿಗೆ ಅನ್ಯಾಯದ ಕುರಿತು ಸಾರ್ವಜನಿಕರ ಜೊತೆ ಸಂವಾದ ನಡೆಸಿದರು.

ತೆರಿಗೆ ಹಂಚಿಕೆ ವಿಚಾರದಲ್ಲಿ ಉಂಟಾಗಿರುವ ಗೊಂದಲವನ್ನು ಬಗೆಹರಿಸುವ ಸಲುವಾಗಿ ಜಾಗೃತ ಕರ್ನಾಟಕ ಹಾಗೂ ರಾಜ್ಯ ರೈತ ಸಂಘ ಆಯೋಜಿಸಿದ್ದ ''ಜಿಎಸ್‌ಟಿ, ಸೆಸ್, ತೆರಿಗೆ ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯ'' ಬಹಿರಂಗ ಚರ್ಚೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಆಹ್ವಾನಿಸಲಾಗಿತ್ತು. ಇದಕ್ಕಾಗಿ ಗಾಂಧಿ ಭವನದಲ್ಲಿ ಏರ್ಪಡಿಸಲಾದ ವೇದಿಕೆಯಲ್ಲಿ ವಿತ್ತ ಸಚಿವೆಗಾಗಿ ಆಸನವನ್ನೂ ಕಾಯ್ದಿರಿಸಲಾಗಿತ್ತು. ನಿರ್ಮಲಾ ಸೀತಾರಾಮನ್ ಅವರು ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ.

ಬಳಿಕ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ''ನನ್ನ ಹಾಗೂ ಸೀತಾರಾಮನ್ ನಡುವೆ ಯಾವುದೇ ತಕರಾರು ಇಲ್ಲ. ಅವರ ಬಗ್ಗೆ ನನಗೆ ವೈಯಕ್ತಿಕ ಗೌರವ ಇದೆ. ಆದರೆ, ಕೇಂದ್ರ ಸರ್ಕಾರದಿಂದ ಕಳೆದ 10 ವರ್ಷಗಳಿಂದ ನಿರಂತರವಾಗಿ ಅನ್ಯಾಯವಾಗುತ್ತಿದೆ. ನಮ್ಮ ಅವಶ್ಯಕತೆಗೆ ತಕ್ಕ ತೆರಿಗೆ ಪಾಲು ಸಿಗುತ್ತಿಲ್ಲ. ಆದರೆ, ಅದಕ್ಕೆ ಪರಿಹಾರ ನೀಡುವ ಬದಲು ನಮ್ಮ ಹಕ್ಕು ಕೇಳಿದರೆ ನಮ್ಮನ್ನೇ ಅವಮಾನಿಸಲಾಗುತ್ತಿದೆ. ಅಲ್ಲದೆ, ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಾಯಕರು ರಾಜ್ಯಕ್ಕೆ ಬಂದು ಮತ್ತದೇ ಸುಳ್ಳಿನ ಜುಮ್ಲಾ ಭಾಷಣ ಮಾಡುವುದು ಎಷ್ಟು ಸರಿ?'' ಎಂದು ಪ್ರಶ್ನಿಸಿದರು.

ರಾಜ್ಯಕ್ಕಾಗುತ್ತಿರುವ ಜಿಎಸ್‌ಟಿ ಮೋಸ: ''ಜಿಎಸ್‌ಟಿ ಜಾರಿಯಾಗುವ ಮೊದಲು ಮೌಲ್ಯವರ್ಧಿತ ತೆರಿಗೆ ಜಾರಿಯಲ್ಲಿತ್ತು. ರಾಜ್ಯಕ್ಕೆ ಸ್ವಾಯತ್ತತೆ ಇತ್ತು. ಆದರೆ, ಪ್ರಸ್ತುತ ರಾಜ್ಯಗಳಿಗೆ ತೆರಿಗೆ ಸ್ವಾಯತ್ತತೆ ಇಲ್ಲದಂತಾಗಿದೆ. ಕರ್ನಾಟಕಕ್ಕೆ ಪ್ರತಿ ವರ್ಷ ಶೇ.15 ರಷ್ಟು ಹೆಚ್ಚುವರಿ ತೆರಿಗೆ ಸಂಗ್ರಹದ ಸಾಮರ್ಥ್ಯ ಇತ್ತು. ಆದರೆ, ಜಿಎಸ್‌ಟಿ ಜಾರಿಯಾದ ಮೇಲೆ ನಮ್ಮಂತ ರಾಜ್ಯಗಳ ತೆರಿಗೆ ಕಡಿಮೆಯಾಗುತ್ತಿದೆ. ಜಿಎಸ್‌ಟಿ ಜಾರಿಯಾದ ನಂತರ 2019-20ರಲ್ಲಿ ರಾಜ್ಯದ ತೆರಿಗೆ ಆದಾಯದಲ್ಲಿ ರೂ.18,897 ಕೋಟಿ ಖೋತಾ ಆಗಿದೆ. 2023-24ರಲ್ಲಿ ರೂ.34,570 ಕೋಟಿ ನಷ್ಟವಾಗಿದೆ. ರಾಜ್ಯದ ಆದಾಯದಲ್ಲಿ ಪ್ರತಿ ವರ್ಷ 30 ರಿಂದ 32 ಸಾವಿರ ಕೋಟಿ ರಾಜ್ಯಕ್ಕೆ ನಷ್ಟವಾಗುತ್ತಿದೆ. ಇದೇ ಕಾರಣಕ್ಕೆ ಜಿಎಸ್‌ಟಿ ಪರಿಹಾರವನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ತುಂಬಿ ಕೊಡಬೇಕು ಎಂದು ಹಣಕಾಸು ಆಯೋಗ ಸ್ಪಷ್ಟವಾಗಿ ನಿರ್ದೇಶನ ನೀಡಿದೆ'' ಎಂದರು.

Minister Krishna Byre Gowda  Bengaluru  open discussion  Nirmala Sitharaman
ಬಹಿರಂಗ ಚರ್ಚೆಗಾಗಿ ಸಿದ್ಧಪಡಿಸಲಾದ ವೇದಿಕೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರ ಬರುವಿಕೆಗಾಗಿ ಕೆಲ ಹೊತ್ತು ಕಾದು ಕುಳಿತ ಸಚಿವ ಕೃಷ್ಣ ಬೈರೇಗೌಡ

''2020-21 ರಲ್ಲಿ ರಾಜ್ಯಕ್ಕೆ ರೂ.5,495 ಕೋಟಿ ಹಾಗೂ 2021-26ರ ಅವಧಿಯಲ್ಲಿ ರೂ.6,000 ಕೋಟಿ ಪರಿಹಾರ ನೀಡಬೇಕು ಎಂದು 15ನೇ ಹಣಕಾಸು ಆಯೋಗ ತನ್ನ ಅಂತಿಮ ವರದಿಯಲ್ಲಿ ತಿಳಿಸಿದೆ. ಆದರೆ, ಕೇಂದ್ರ ಸರ್ಕಾರ ಈವರೆಗೆ ಈ ಹಣ ಬಿಡುಗಡೆ ಮಾಡಿಲ್ಲ. ಅಲ್ಲದೆ, ಈ ವರ್ಷದಿಂದ ಒಂದು ನಯಾಪೈಸೆಯೂ ಜಿಎಸ್‌ಟಿ ಪರಿಹಾರ ನೀಡುವಂತಿಲ್ಲ ಎಂದು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಹೀಗಾಗಿ ಜಿಎಸ್‌ಟಿ ಪರಿಹಾರ ಮುಂದುವರೆಸಲು ಮನವಿ ಮಾಡಿದ್ದೆವು. ಆದರೆ, ಸೀತಾರಾಮನ್ ಅದನ್ನು ನಿರಾಕರಿಸಿದ್ದಾರೆ'' ಎಂದು ಅಸಮಾಧಾನ ಹೊರಹಾಕಿದರು.

''ಈ ಹಿಂದೆ ಕೇಂದ್ರ ತೆರಿಗೆಯಲ್ಲಿ ರಾಜ್ಯಕ್ಕೆ ಶೇ.4.713 ರಷ್ಟು ತೆರಿಗೆ ಪಾಲು ಇತ್ತು. ಆದರೆ, 15ನೇ ಹಣಕಾಸು ಆಯೋಗ ಈ ಪ್ರಮಾಣವನ್ನು 3.617 ಕ್ಕೆ ಇಳಿಸಿದೆ. ಇದರಿಂದ ರಾಜ್ಯಕ್ಕೆ ಶೇ.23 ರಷ್ಟು ಹಣ ಕಡಿಮೆಯಾಗಿದೆ. ಅಂದ್ರೆ ಪ್ರತಿ ವರ್ಷ 6 ರಿಂದ 13 ಸಾವಿರ ಕೋಟಿ ನಷ್ಟ. ಇದರಿಂದ ರಾಜ್ಯಕ್ಕೆ ಈವರೆಗೆ ಒಟ್ಟಾಗಿ ರೂ.62,098 ಕೋಟಿ ನಷ್ಟ ಉಂಟಾಗಿದೆ. ದೇಶದ 31 ರಾಜ್ಯಕ್ಕಿಂತ ಕರ್ನಾಟಕಕ್ಕೆ ಮಾತ್ರ ಇಷ್ಟು ಕಡಿಮೆ ಪ್ರಮಾಣದ ತೆರಿಗೆ ಹಂಚಿಕೆ ಮೋಸ ಏಕೆ? ಹೆಚ್ಚು ತೆರಿಗೆ ಕಟ್ಟುವ ಕರ್ನಾಟಕಕ್ಕೆ ಇದು ಕೇಂದ್ರ ಸರ್ಕಾರ ನೀಡುವ ಉಡುಗೊರೆಯಾ?'' ಎಂದು ಅವರು ಪ್ರಶ್ನಿಸಿದರು.

''ಕೇಂದ್ರ ಸರ್ಕಾರ ಸಂಗ್ರಹಿಸುವ ಸೆಸ್‌ ಸರ್ಚಾರ್ಜ್ ನಲ್ಲೂ ರಾಜ್ಯಕ್ಕೆ ಪಾಲು ನೀಡಬೇಕು. ಆದರೆ, 2020ರಲ್ಲಿ ರಾಜ್ಯಗಳಿಗೆ ಪಾಲು ಕೊಡುವಂತಿಲ್ಲ ಎಂದು ಕೇಂದ್ರ ಸರ್ಕಾರ ಸಂವಿಧಾನದಲ್ಲಿ ತಿದ್ದುಮಾಡಿ ಮಾಡಿದೆ. ಹೀಗಾಗಿ ಈ ವಿಚಾರದಲ್ಲೂ ರಾಜ್ಯ ಸರ್ಕಾರಕ್ಕೆ ಅನ್ಯಾಯವಾಗುತ್ತಿದೆ'' ಎಂದು ಗರಂ ಆದರು.

''ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸಿದರೆ, ರಾಜ್ಯಗಳಿಗೆ ಪಾಲು ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಅದನ್ನು ಸೆಸ್‌ ಸರ್ಚಾರ್ಜ್ ಗೆ ಸೇರಿಸಿದೆ. 2017-18 ರಲ್ಲಿ ಪೆಟ್ರೋಲಿಯಂ ಉತ್ಪನ್ನಗಳಿಂದ ರೂ.2,18,553 ಕೋಟಿ ತೆರಿಗೆ ಹಣ ಕೇಂದ್ರದ ಪಾಲಾಗಿದ್ದರೆ, 2022-23 ರಲ್ಲಿ ರೂ. 5,52,789 ಕೋಟಿ ಹಣ ಸಂಗ್ರಹಿಸಲಾಗಿದೆ. ಆದರೆ, ಇದರಲ್ಲಿ ರಾಜ್ಯಗಳಿಗೆ ನಯಾಪೈಸೆಯೂ ಪಾಲಿಲ್ಲ. ಅಲ್ಲದೆ, ಕೇಂದ್ರ ಸರ್ಕಾರ ಆದಾಯ ತೆರಿಗೆಯ ಹಲವು ವಿಭಾಗಗಳನ್ನು ಸೆಸ್‌ ಸರ್‌ಚಾರ್ಜ್​ಗೆ ಸೇರ್ಪಡೆ ಮಾಡಿದ್ದು, 2014- 2024ರ ಅವಧಿಯಲ್ಲಿ ಈ ವಿಭಾಗದಲ್ಲಿ 34 ಲಕ್ಷ ಕೋಟಿ ಹಣ ಸಂಗ್ರಹಿಸಿದೆ. ಆದರೆ, ರಾಜ್ಯ ಸರ್ಕಾರಗಳಿಗೆ ಇದರಲ್ಲಿ ಎಳ್ಳಷ್ಟೂ ಪಾಲಿಲ್ಲ. ಪರಿಣಾಮ ಈ ವಿಭಾಗದಲ್ಲಿ ರಾಜ್ಯಕ್ಕೆ ಒಟ್ಟಾರೆ ರೂ.1,85,468 ಕೋಟಿ ನಷ್ಟವಾಗಿದೆ'' ಎಂದು ಆರೋಪಿಸಿದರು.

ಇದನ್ನೂ ಓದಿ: ಬೆಂಗಳೂರಿಗರು ತೆರಿಗೆ ಹಣ ವಾಪಸ್ ಕೇಳಲಾರಂಭಿಸಿದರೆ ಕಲ್ಯಾಣ ಕರ್ನಾಟಕದ ಪರಿಸ್ಥಿತಿ ಏನಾದೀತು?: ನಿರ್ಮಲಾ ಸೀತಾರಾಮನ್ - Nirmala Sitharaman

ಕೇಂದ್ರ ಪುರಸ್ಕೃತ ಯೋಜನೆಯಲ್ಲೂ ಮೋಸ: ''ಕೇಂದ್ರ ಪುರಸ್ಕೃತ ಯೋಜನೆಯಲ್ಲೂ ಹೆಚ್ಚು ಹಣ ಹೂಡುವುದು ರಾಜ್ಯ ಸರ್ಕಾರವೇ. ಆದರೆ, ಈ ಯೋಜನೆಗಳ ಹೆಸರು ಮಾತ್ರ ಕೇಂದ್ರ ಸರ್ಕಾರದ್ದಾಗಿದೆ'' ಎಂದು ಅಸಮಾಧಾನ ಹೊರಹಾಕಿದ ಸಚಿವರು ಉದಾಹರಣೆಯೊಂದಿಗೆ ವಿವರಿಸಿದರು.

''ಕೇಂದ್ರ ಸರ್ಕಾರದ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ ಶೇ.52.33, ಜಲಜೀವನ್ ಮಿಷನ್ ಯೋಜನೆಯಲ್ಲಿ ಶೇ.58.03, ಪಿಎಂ ಆವಾಸ್ ಯೋಜನೆಯಲ್ಲಿ ಶೇ.63.41, ಪಿಎಂ ಜನ ಆರೋಗ್ಯ ಯೋಜನೆಯಲ್ಲಿ ಶೇ.77.96, ಪಿಎಂ ಫಸಲ್ ಭೀಮಾ ಯೋಜನೆಯಲ್ಲಿ ಶೇ.50.72 ರಷ್ಟು ಹಣ ರಾಜ್ಯ ಸರ್ಕಾರದ್ದು. ಹಾಗೆ ನೋಡಿದರೆ ನಮ್ಮ ತೆರಿಗೆ ಪಡೆಯುವ ಕೇಂದ್ರ ಸರ್ಕಾರ ಅದಕ್ಕೆ ಪ್ರತಿಯಾಗಿ ನಮಗೆ ನೀಡಿದ ಕೊಡುಗೆ ಏನು'' ಎಂದು ಪ್ರಶ್ನಿಸಿದರು.

''ಅಲ್ಲದೆ, 2014ರಲ್ಲಿ ಕೇಂದ್ರದ ಬಜೆಟ್ 17 ಲಕ್ಷ ಕೋಟಿ ಇತ್ತು. ಈಗ ಕೇಂದ್ರದ ಬಜೆಟ್ ಗಾತ್ರ 45 ಲಕ್ಷ ಕೋಟಿಗೆ ಏರಿಕೆಯಾಗಿದೆ. ಆದರೆ, ಈ ಬಜೆಟ್‌ನಲ್ಲಿ ರಾಜ್ಯ ಸರ್ಕಾರದ ಪಾಲು ಮಾತ್ರ ಕಳೆದ 10 ವರ್ಷದಿಂದ ಒಂದು ರೂಪಾಯಿಯೂ ಏರಿಕೆಯಾಗಿಲ್ಲ. ತೆರಿಗೆ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ರೂಪದಲ್ಲಿ ಶೇ.23.2 ರಷ್ಟು ಹಣ ಕೇಂದ್ರದಿಂದ ಬರುತ್ತಿತ್ತು. ಈಗ ಅದೂ ಸಹ ಕಾಲಕ್ರಮೇಣ ಶೇ. 13.94 ಕ್ಕೆ ಇಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

''ನಾವು ನೂರು ರೂಪಾಯಿ ಕಟ್ಟಿದ್ರೆ 13 ರಿಂದ 14 ರೂ. ಮಾತ್ರ ವಾಪಸ್ ಬರುತ್ತೆ. ಆದರೆ, ಉತ್ತರ ಪ್ರದೇಶಕ್ಕೆ 333.2 ರೂ. ಮಧ್ಯಪ್ರದೇಶಕ್ಕೆ 279.1 ರೂ. ಬಿಹಾರಕ್ಕೆ 922.4 ರೂ. ಹೋಗುತ್ತಿದೆ. ನಮ್ಮಲ್ಲೂ ಪ್ರಾದೇಶಿಕ ಅಸಮಾನತೆ ಇದೆ. ಹೀಗಾಗಿ ನಮ್ಮ ಅವಶ್ಯಕತೆಗೆ ತಕ್ಕಂತೆ ನಮಗೆ ಅನುದಾನ ಕೊಡದಿದ್ದರೆ ನಮ್ಮ ಅವಶ್ಯಕತೆಗಳನ್ನು ನಾವು ಹೇಗೆ ಪೂರೈಸುವುದು. ನಮ್ಮ ಅಭಿವೃದ್ಧಿ ಹೇಗೆ ಸಾಧ್ಯ. ಮಹಾರಾಷ್ಟ್ರಕ್ಕಿಂತ ನಮ್ಮ ತಲಾ ಆದಾಯ ಹೆಚ್ಚಿದೆ. ನಮ್ಮ ನೀರಾವರಿ ಯೋಜನೆ ಹಿಂದುಳಿದ ಭಾಗಗಳ ಅಭಿವೃದ್ಧಿಗೆ ಹಣ ಬೇಕು. ಕರ್ನಾಟಕ ಇಡೀ ದೇಶಕ್ಕೆ ಬೆನ್ನೆಲುಬು, ಹೀಗಾಗಿ ಕೇಂದ್ರ ನಮಗೆ ಬೆಂಬಲ ನೀಡಬೇಕೆ ಹೊರತು, ಚಿನ್ನದ ಮೊಟ್ಟೆ ಇಡುವ ಕೋಳಿಯನ್ನು ಕತ್ತರಿಸಬಾರದು''ಎಂದು ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕೆ 8035.09 ಕೋಟಿ ರೂ. ಬಡ್ಡಿ ರಹಿತ ಸಾಲ ಕೊಡಲಾಗಿದೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ - interest free loan

ETV Bharat Logo

Copyright © 2024 Ushodaya Enterprises Pvt. Ltd., All Rights Reserved.