ETV Bharat / state

ಪಹಣಿಗಳಿಗೆ ಆಧಾರ್ ಲಿಂಕ್ ಹಾಗೂ ಆಸ್ತಿ ನೋಂದಣಿ ಹಂತದಲ್ಲೇ ಆಧಾರ್ ಪಡೆಯಲು ಆರಂಭ: ಸಚಿವ ಕೃಷ್ಣ ಬೈರೇಗೌಡ - Krishna Byre Gowda

ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದ್ದಾರೆ.

Krishna Byre gowda
ಸಚಿವ ಕೃಷ್ಣ ಬೈರೇಗೌಡ
author img

By ETV Bharat Karnataka Team

Published : Mar 12, 2024, 9:20 PM IST

ಬೆಂಗಳೂರು : ನೋಂದಣಿ ಸಮಯದಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಮತ್ತು ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ನೇರವಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದಲ್ಲಿ ಪಹಣಿಗಳಿಗೆ (RTC) ಆಧಾರ್ ಜೋಡಣೆ ಕಾರ್ಯ ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು.

ವಿಕಾಸಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನನ್ನ ಆಸ್ತಿ' ಯೋಜನೆಯಡಿ 'ನನ್ನ ಆಸ್ತಿ ನನ್ನ ಗುರುತು' ಎಂಬ ಉದ್ದೇಶದಿಂದ ಈ ಮಹತ್ವದ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಕೆಲವೆಡೆ ಪೈಲಟ್ ಆಗಿ ಮಾಡಲಾಗಿದೆ. ಇದನ್ನು ಇಂದಿನಿಂದ ರಾಜ್ಯಾದ್ಯಂತ ವಿಸ್ತರಿಸಲಾಗಿದೆ ಎಂದು ಹೇಳಿದರು.

ಕಂದಾಯ ಇಲಾಖೆಯನ್ನು ಆಧುನೀಕರಣ ಮಾಡಬೇಕು. ಬೆರಳ ತುದಿಯಲ್ಲಿ ಎಲ್ಲ ಸೌಲಭ್ಯಗಳು ಸಿಗಬೇಕು ಎಂಬ ಉದ್ದೇಶದಿಂದ ಈಗಾಗಲೇ ಅನೇಕ ಸುಧಾರಣಾ ಕ್ರಮಗಳನ್ನು ಮಾಡಲಾಗುತ್ತಿದೆ. ಅದರ ಒಂದು ಭಾಗವಾಗಿ ಸಹ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.

ಈ ಸಂಬಂಧ ನಮ್ಮ ಗ್ರಾಮಾಧಿಕಾರಿಗಳು 19 ಲಕ್ಷ ರೈತರನ್ನು ಸಂಪರ್ಕಿಸಿದ್ದಾರೆ. ಅದರಲ್ಲಿ 6 ಲಕ್ಷ ಪಹಣಿಗಳಿಗೆ ಸಂಬಂಧಿಸಿದಂತೆ ಅದರ ಖಾತೆದಾರರು ಮೃತಪಟ್ಟಿದ್ದಾರೆ. ಹೀಗೆ ಮೃತಪಟ್ಟವರ ಹೆಸರಿನಲ್ಲಿ ಪಹಣಿಗಳು ಇದ್ದರೆ ದುರುಪಯೋಗ ಆಗುವ ಸಾಧ್ಯತೆಗಳು ಇರುತ್ತವೆ. ಆದ್ದರಿಂದ ಆಧಾರ್ ಜೋಡಣೆ ಮಾಡುವುದರಿಂದ ಯಾರದ್ದೋ ಆಸ್ತಿ ಮತ್ತಾರೋ ನೋಂದಣಿ ಮಾಡಿಸಿಕೊಳ್ಳುವಂತಹ ಅಕ್ರಮಗಳಿಗೆ ಕಡಿವಾಣ ಹಾಕಬಹುದು ಎಂದು ಹೇಳಿದರು.

ಆಸ್ತಿಗಳ ನೋಂದಣಿ ಸಮಯದಲ್ಲಿಯೂ ಸಹ ಆಧಾರ್ ಕಡ್ಡಾಯವಾಗಿ ಕೇಳಲಾಗುತ್ತದೆ. ಆಗ ಆಧಾರ್ ಸಂಖ್ಯೆ ಕೊಡದಿದ್ದರೆ ಅದು ಅನುಮಾನಕ್ಕೆ ಕಾರಣವಾಗಿ ಅದರ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ, ತದನಂತರ ನೋಂದಣಿ ಮಾಡಿದರೆ ಒಂದಷ್ಟು ಅಕ್ರಮಗಳನ್ನು ತಡೆದಂತಾಗುತ್ತದೆ ಎಂದು ಆಧಾರ್ ಜೋಡಣೆಯ ಅಗತ್ಯತೆಯನ್ನು ವಿವರಿಸಿದರು.

ಲೋಕಸಭಾ ಚುನಾವಣೆ ಘೋಷಣೆಯಾದರೂ ಸಹ ಅದರ ಮಧ್ಯೆಯೂ ಆಧಾರ್ ಜೋಡಣೆ ಕಾರ್ಯ ಮಾಡಬೇಕು ಎಂದು ಗ್ರಾಮಾಧಿಕಾರಿಗಳಿಗೆ ಸೂಚಿಸಲಾಗಿದೆ. ನಮ್ಮ ಗ್ರಾಮಾಧಿಕಾರಿಗಳೇ ಮನೆ ಮನೆಗೆ ತೆರಳಿ ಪಹಣಿ ಮತ್ತು ಆಧಾರ್ ಜೋಡಣೆ ಕಾರ್ಯ ಮಾಡುತ್ತಾರೆ. ಸಾರ್ವಜನಿಕರೂ ಸಹ ತಮ್ಮ ಸಮೀಪದ ಕಂದಾಯ ಕಚೇರಿಗೆ ತೆರಳಿ ಆಧಾರ್ ಜೋಡಣೆ ಮಾಡಿಸಲು ಸಹ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಆಟೋಮ್ಯುಟೇಷನ್ : ಬ್ಯಾಂಕ್‌ಗಳಲ್ಲಿ ಸಾಲ ಪಡೆದರೆ, ಸಾಲ ತೀರುವಳಿಯಾದರೆ, ವಿಭಾಗ ಮಾಡಿಕೊಂಡರೆ, ಆಸ್ತಿಯನ್ನು ಅಡಮಾನ ಇಟ್ಟರೆ, ಎಸಿ ನ್ಯಾಯಾಲಯದ ಆದೇಶಗಳಾಗಿದ್ದರೆ ಹೀಗೆ ಸಣ್ಣಪುಟ್ಟ ಬದಲಾವಣೆಗಳು ಆದಾಗ ಅದರ ವಿವರವನ್ನು ಪಹಣಿಯಲ್ಲಿ ದಾಖಲಿಸುವುದನ್ನು ಸ್ವಯಂಚಾಲಿತ ಮಾಡಲಾಗಿದೆ. ಇದಕ್ಕಾಗಿ ಗ್ರಾಮಾಧಿಕಾರಿಗಳು ಧೃಢೀಕರಣ (ಥಂಬ್ ಕೊಡುವುದು) ಮಾಡುವುದು ಅಗತ್ಯವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.

ಆಯಾ ಪಹಣಿ ಮೇಲೆ ಬ್ಯಾಂಕ್‌ಗಳು, ನ್ಯಾಯಾಲಯಗಳು ಹೀಗೆ ವಿವಿಧ ಮೂಲಗಳಿಂದ ನೀಡುವ ಮಾಹಿತಿಯನ್ನು ನೇರವಾಗಿ ಪಡೆದು ಅದನ್ನು ಪಹಣಿಯಲ್ಲಿ ದಾಖಲಿಸಲಾಗುತ್ತದೆ. ಇದಕ್ಕಾಗಿ ರೈತರು ಸರ್ಕಾರಿ ಕಚೇರಿಗಳಿಗೆ ಹತ್ತಾರು ಬಾರಿ ಅಲೆದಾಡುವ ಅಗತ್ಯವನ್ನು ತಪ್ಪಿಸಲಾಗುತ್ತಿದೆ. ಇದರಿಂದ ರೈತರ ಸಮಯ, ಅಧಿಕಾರಿಗಳ ಸಮಯ ಪೋಲಾಗುವುದು ಮತ್ತು ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿದಂತಾಗುತ್ತದೆ ಎಂದು ಹೇಳಿದರು.

ಈಗಾಗಲೇ 14,21,116 ಪಹಣಿಗಳಲ್ಲಿ ಈ ರೀತಿ ಸ್ವಯಂಚಾಲಿತ ದಾಖಲೀಕರಣ ಮಾಡಲಾಗಿದೆ. ಇದರಲ್ಲಿ ಶೇ.72ರಷ್ಟು ಸ್ವಯಂ ಚಾಲಿತ ಮಾಡಿದರೆ, ಉಳಿದ ಶೇ.28ರಷ್ಟು ಪ್ರಕರಣಗಳ ಪಹಣಿಗಳನ್ನು ಹಳೆಯ ವ್ಯವಸ್ಥೆಯಲ್ಲಿ ಉಳಿಸಿಕೊಳ್ಳಲಾಗಿದೆ. ಮ್ಯುಟೇಷನ್​ನಲ್ಲಿ ಸೇಲ್ ಡೀಡ್, ಗಿಫ್ಟ್ ಡೀಡ್, ಪಾರ್ಟಿಷನ್ ಡೀಡ್, ಇನ್ ಹೆರಿಟೆನ್ಸ್, ಸಿವಿಲ್‌ ಕೋರ್ಟ್​ನಲ್ಲಿನ ಪ್ರಕರಣ, ವಿಲ್​ಗಳನ್ನು ಆಟೋಮೇಷನ್ ಮಾಡಲ್ಲ.

ಕಾರಣ ಹಕ್ಕು ಬದಲಾವಣೆ, ಇಂಡೀಕರಣ, ಸಿವಿಲ್ ನ್ಯಾಯಾಲಯಗಳಲ್ಲಿ ವ್ಯಾಜ್ಯ ಇರುವಂತಹ ಪ್ರಕರಣಗಳಲ್ಲಿ 15 ದಿನಗಳ ಕಾಲ ಆಕ್ಷೇಪಣೆಗೆ ಕಾಲಾವಕಾಶ ಒದಗಿಸಿ, ಆ ಬಳಿಕ ದಾಖಲೀಕರಣ ಮಾಡಬೇಕಾಗಿರುತ್ತದೆ. ಆದ್ದರಿಂದ ಇದರಲ್ಲಿ ಹಳೆಯ ವ್ಯವಸ್ಥೆ ಇಟ್ಟುಕೊಂಡು, ಮುಂದೆ ಎಲ್ಲಾ ಪಹಣಿಗಳಿಗೆ ಆಧಾರ್ ಜೋಡಣೆ ಪೂರ್ಣಗೊಂಡ ಬಳಿಕ ಇವುಗಳನ್ನು ಸಹ ಆಟೋಮ್ಯೂಟೇಷನ್ ವ್ಯಾಪ್ತಿಗೆ ತರುವ ಪ್ರಯತ್ನ ಮಾಡಲಾಗುವುದು ಎಂದರು.

ಆಸ್ತಿ ನೋಂದಣಿ ಮಾಡುವಾಗ ಆಧಾರ್ ಪಡೆಯಲಾಗುವುದು: ಇನ್ನು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಆಸ್ತಿ ನೋಂದಣಿಯಾಗುವ ವೇಳೆ ಆಧಾರ್ ಪಡೆಯುವ ಕೆಲಸ ಮಾಡಲಿದ್ದೇವೆ ಎಂದು ಇದೇ ವೇಳೆ, ತಿಳಿಸಿದರು. ರಿಜಿಸ್ಟ್ರೇಷನ್ ಹಂತದಲ್ಲೇ ಆಧಾರ್ ಲಿಂಕ್ ಮಾಡುತ್ತಿದ್ದೇವೆ.‌ ಬಹುತೇಕ ರಿಜಿಸ್ಟ್ರೇಷನ್ ಹಂತದಲ್ಲೇ ವಂಚನೆ ನಡೆಯುತ್ತಿದೆ. ಇದನ್ನು ತಡೆಯಲು ರಿಜಿಸ್ಟ್ರೇಷನ್ ಹಂತದಲ್ಲೇ ಆಧಾರ್ ಲಿಂಕ್ ಮಾಡುತ್ತೇವೆ. ಇದನ್ನು ಕಡ್ಡಾಯ ಮಾಡಲು ಆಗುವುದಿಲ್ಲ. ಹಾಗಾಗಿ ಆಧಾರ್ ಕೇಳುತ್ತೇವೆ.‌ ಕೊಟ್ಟಿಲ್ಲವಾದರೆ ಏನೋ ಸಮಸ್ಯೆ ಇದೆ ಎಂಬುದು ಗೊತ್ತಾಗುತ್ತೆ ಎಂದರು.

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಭಾನುವಾರವೂ ನೋಂದಣಿ: ಬೆಂಗಳೂರು ಸೇರಿ ಮಹಾನಗರ ಪಾಲಿಕೆ ವ್ಯಾಪ್ತಿಯ ನೋಂದಣಿ ಕಚೇರಿಗಳನ್ನು ಭಾನುವಾರವೂ ಸಹಿತ ಕಾರ್ಯನಿರ್ವಹಿಸುವಂತೆ ಆದೇಶ ಮಾಡಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.

ಅನೇಕ ಜನರು ನೋಂದಣಿಗಾಗಿ ತಮ್ಮ ಕೆಲಸ ಕಾರ್ಯಗಳಿಗೆ ರಜಾ ಹಾಕಿ ಬರಬೇಕಾಗುತ್ತದೆ. ನಗರ ಪ್ರದೇಶಗಳಲ್ಲಿ ಇದರಿಂದ ಕೆಲವರಿಗೆ ಅನಾನುಕೂಲವೂ ಆಗುತ್ತಿದೆ. ಆದ್ದರಿಂದ ಒಂದು ಕಂದಾಯ ಜಿಲ್ಲೆಯಲ್ಲಿ ಕನಿಷ್ಠ 6-7 ನೋಂದಣಾ ಕಚೇರಿಗಳು ಇರುತ್ತವೆ. ರೋಸ್ಟರ್ ಆಧಾರದ ಮೇಲೆ ಒಂದೊಂದು ವಾರ ಒಂದೊಂದು ನೋಂದಣಾಧಿಕಾರಿ ಕಚೇರಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಇದರ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ : ನೋಂದಣಿಗೆ ಇ-ಖಾತೆ ಕಡ್ಡಾಯಗೊಳಿಸುವ 2024 ಸಾಲಿನ‌ ನೋಂದಣಿ ತಿದ್ದುಪಡಿ ವಿಧೇಯಕ ಅಂಗೀಕಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.