ETV Bharat / state

ಪುತ್ರನಿಗೆ ಲೋಕಸಭೆ ಟಿಕೆಟ್ ವಿಚಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದೇನು?

author img

By ETV Bharat Karnataka Team

Published : Feb 4, 2024, 7:59 PM IST

ನನ್ನ ಪುತ್ರನಿಗೆ ಲೋಕಸಭೆ ಟಿಕೆಟ್​ ಕೊಡುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ, ನಾನು ಟಿಕೆಟ್​ ಕೊಡಿ ಎಂದು ಒತ್ತಾಯಿಸಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ.

Minister Lakshmi Hebbalkar reaction on Lok Sabha Ticket for son
ಪುತ್ರನಿಗೆ ಲೋಕಸಭೆ ಟಿಕೆಟ್ ವಿಚಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದೇನು?
ಪುತ್ರನಿಗೆ ಲೋಕಸಭೆ ಟಿಕೆಟ್ ವಿಚಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದೇನು?

ಬೆಳಗಾವಿ: "ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ತಮ್ಮ ಪುತ್ರ ಮೃಣಾಲ್ ಅವರಿಗೆ ಟಿಕೆಟ್ ನೀಡಬೇಕೆಂದು ನಾನು ಒತ್ತಾಯ ಮಾಡಿಲ್ಲ. ಆದರೆ, ಕ್ಷೇತ್ರದ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಗೆಲುವಿನ ಸಾಮರ್ಥ್ಯದ ಮಾನದಂಡದ ಮೇಲೆ ಅಭ್ಯರ್ಥಿ ಆಯ್ಕೆಯಾಗಲಿದೆ" ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದರು.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ತಮ್ಮ ಪುತ್ರ ಮೃಣಾಲ್ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದು ಅಥವಾ ಬಿಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ಈ ಹಿಂದೆ ನನ್ನ ಸಹೋದರ ಚನ್ನರಾಜ ಹಟ್ಟಿಹೊಳಿಯವರು ಎಂಎಲ್​ಸಿ ಆಗುವ ವೇಳೆಯಲ್ಲೂ ಜಿಲ್ಲೆಯ ಮುಖಂಡರು ಹಾಗೂ ಜನರ ಒತ್ತಾಸೆ ಇತ್ತು" ಎಂದರು.

"ಈಗಲೂ ಜಿಲ್ಲೆಯ ಜನರು, ಎಲ್ಲಾ ಸಮುದಾಯಗಳ ಮುಖಂಡರು ತಮ್ಮ ಪುತ್ರ ಸ್ಪರ್ಧಿಸಬೇಕೆಂದು ಅಪೇಕ್ಷೆ ಪಡುತ್ತಿದ್ದಾರೆ. ಆದರೆ, ಅಂತಿಮವಾಗಿ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತದೆಯೋ ಗೊತ್ತಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲ ತಲೆಬಾಗುತ್ತೇವೆ. ಚುನಾವಣೆಯಲ್ಲಿ ತಮ್ಮ ಪುತ್ರ ಮೃಣಾಲ್ ಅವರಿಗೆ ಪಕ್ಷ ಟಿಕೆಟ್ ನೀಡಿದರೂ ಅಥವಾ ಬೇರೆ ಯಾರಿಗೇ ಟಿಕೆಟ್ ನೀಡಿದರೂ ಬಹಳ ಪ್ರಾಮಾಣಿಕವಾಗಿ ಚುನಾವಣೆಯನ್ನು ಎದುರಿಸುತ್ತೇವೆ. ಈಗಾಗಲೇ ಯಾರಿಗೆ ಟಿಕೆಟ್ ನೀಡಿದರೆ ಗೆಲ್ಲಬಹುದು ಎನ್ನುವ ಸಮೀಕ್ಷೆ ಕೂಡ ಮಾಡಲಾಗುತ್ತಿದೆ. ಅಂತಿಮವಾಗಿ ಪಕ್ಷದ ಅಭ್ಯರ್ಥಿ ಗೆಲ್ಲಬೇಕು ಅಷ್ಟೇ. ಟಿಕೆಟ್ ಪಡೆಯುವುದಕ್ಕಾಗಿಯೇ ಪೈಪೋಟಿ ನಡೆಸುವುದಲ್ಲ" ಎಂದು ಹೇಳಿದರು.

"ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ. ಚುನಾವಣೆಯನ್ನು ನಾವೆಂದು ಹಗುರವಾಗಿ ತೆಗೆದುಕೊಂಡಿಲ್ಲ. ಪ್ರತಿಯೊಂದು ಹಂತದಲ್ಲೂ ನಮ್ಮ ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ. ವಿಧಾನಸಭೆ ಚುನಾವಣೆಗಿಂತ ಮುನ್ನ ಜನರಿಗೆ ಭರವಸೆ ಕೊಟ್ಟಂತಹ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ನುಡಿದಂತೆ ನಡೆದ ಆತ್ಮಸ್ಥೈರ್ಯದಿಂದ ಲೋಕಸಭಾ ಚುನಾವಣೆಯಲ್ಲಿ ಜನರ ಬಳಿಗೆ ಹೋಗುತ್ತಿದ್ದೇವೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೋಳಿ ಬೆಸ್ತ ಸಮಾಜ ಮೀಸಲಾತಿ ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, "ಮೊದಲು ದೇಶದಲ್ಲಿ ಬರೀ 33 ಕೋಟಿ ಜನಸಂಖ್ಯೆ ಇತ್ತು. ಆದರೆ, ಈಗ 100 ಕೋಟಿಗೂ ಹೆಚ್ಚು ಜನಸಂಖ್ಯೆ ಇದೆ. ಎಲ್ಲಾ ಸಮಾಜಗಳು ಬೆಳೆಯುತ್ತಿರುವ ಸಂದರ್ಭದಲ್ಲಿ ಜಾತಿವಾರು ಮೀಸಲಾತಿ ಕೇಳುವುದರಲ್ಲಿ ತಪ್ಪಿಲ್ಲ. ನಮ್ಮ ಪಂಚಮಸಾಲಿ ಸಮುದಾಯ ಕೂಡ 2ಎ ಗೆ ಸೇರಿಸಬೇಕೆಂದು ಹೋರಾಟ ಮಾಡುತ್ತಿದೆ. ಕುರುಬ ಸಮಾಜ ಕೂಡ ಎಸ್​ಟಿಗೆ ಸೇರಿಸಬೇಕೆಂದು ಹೋರಾಡುತ್ತಿದೆ. ಮುಖ್ಯವಾಗಿ ಹಿಂದುಳಿದ ವರ್ಗಗಳನ್ನು ಮುನ್ನೆಲೆಗೆ ತರುವುದೇ ನಮ್ಮೆಲ್ಲರ ಆಶಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಹಿಂದುಳಿದ ವರ್ಗಗಳಿಗೆ ನ್ಯಾಯ ದೊರಕಿಸಿಕೊಡಲು ಮುಂದಾಗಿದ್ದಾರೆ" ಎಂದರು.

ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್​ಡಿಡಿ ಭೇಟಿಯಾದ ನಿಖಿಲ್ ಕುಮಾರಸ್ವಾಮಿ: ಪಕ್ಷ ಸಂಘಟನೆ ಬಗ್ಗೆ ಚರ್ಚೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.