ETV Bharat / state

ಸಿಎಂ ಜೊತೆ ಮಾತುಕತೆಗೆ ನಾನೇ ಖುದ್ದು ಕರೆದರೂ ಯಾರೂ ಬಂದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ - PANCHAMASALI RESERVATION PROTEST

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಅನಗತ್ಯವಾಗಿ ರಾಜಕೀಯ ನಡೆಯುತ್ತಿದೆ. ಸಭೆಗೆ ಸಿಎಂ ಕರೆದರೂ ಯಾವ ನಾಯಕರೂ ಆಗಮಿಸಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, Panchamasali reservation
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (ETV Bharat)
author img

By ETV Bharat Karnataka Team

Published : Dec 12, 2024, 5:26 PM IST

ಬೆಳಗಾವಿ: ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಬಿಜೆಪಿ ನಾಯಕರು ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದರು. ಸುವರ್ಣಸೌಧದಲ್ಲಿಂದು ಮಾತನಾಡಿದ ಅವರು, ಮಾತುಕತೆಗೆ ಮುಖಂಡರುಗಳನ್ನು ಕರೆತರುವಂತೆ ನನಗೆ ಸಿಎಂ ಸೂಚಿಸಿದ್ದರು.‌ ಸಿ.ಸಿ.ಪಾಟೀಲ್ ಸೇರಿದಂತೆ ಹಲವು ನಾಯಕರಿಗೆ ನಾನೇ ಖುದ್ದು ಕರೆ ಮಾಡಿದರೂ ಯಾರೂ ಸಭೆಗೆ ಬರಲಿಲ್ಲ. ಮೀಸಲಾತಿ ಹೋರಾಟ ರಾಜಕೀಯ ಆಗುತ್ತಿದೆ. ಇದರಲ್ಲಿ ಕಾಂಗ್ರೆಸ್, ಬಿಜೆಪಿ‌ ಅಂತ ಬರಬಾರದು ಎಂದರು.

ಮೀಸಲಾತಿ ವಿಚಾರವಾಗಿ ಬಿಜೆಪಿಯವರಿಗೆ ಈ ಪ್ರೀತಿ ಮೊದಲೇ ಯಾಕಿರಲಿಲ್ಲ? ಅವರ ಸರ್ಕಾರ ಇದ್ದಾಗ 2A ಮೀಸಲಾತಿಯನ್ನು ಯಾಕೆ ಕೊಡಲಿಲ್ಲ? ಆಗ ಮೀಸಲಾತಿ ಕೊಡದೇ ಮೂಗಿಗೆ ತುಪ್ಪ‌ ಸವರುವ ಕೆಲಸ ಮಾಡಿದರು ಎಂದು ಸಚಿವೆ ಹೆಬ್ಬಾಳ್ಕರ್ ಕಿಡಿಕಾರಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (ETV Bharat)

ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು.‌ ಮಾತುಕತೆಗೆ ಮುಖ್ಯಮಂತ್ರಿಗಳು ಸಮಯ ಕೊಟ್ಟಿದ್ದರು. ನಾನೇ ಫೋನ್ ಮಾಡಿದ್ದಲ್ಲದೇ ಸ್ವತಃ ಹೋಗಿ ಕರೆದು ಬಂದಿದ್ದೆ. ಸಮಾಜದ 10 ಜನ ಮುಖಂಡರನ್ನು ಕರೆದುಕೊಂಡು ಬರಲು ಸಿಎಂ ಸೂಚಿಸಿದ್ದರು‌. ಈ ಸಂಬಂಧ ಸಿ.ಸಿ.ಪಾಟೀಲ್ ಅವರಿಗೆ ನಾನೇ ಫೋನ್ ಮಾಡಿ ಕರೆದೆ. ಅವರು ಯಾರೂ ಬರಲಿಲ್ಲ ಎಂದು ಹೇಳಿದರು.

ಪ್ರತಿಭಟನೆ ತೀವ್ರ ಸ್ವರೂಪ ಪಡೆಯಲು ಕೆಲವರ ಪ್ರಚೋದನೆಯೇ ಕಾರಣ. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು.‌ ನ್ಯಾಯಾಲಯದ ಆದೇಶದಂತೆ ಕಾನೂನು ಉಲ್ಲಂಘಿಸಿ ಪ್ರತಿಭಟನೆ ಮಾಡುವುದಿಲ್ಲ ಎಂದು ಸ್ವತಃ ಪ್ರತಿಭಟನಾಕಾರರೇ ಮುಚ್ಚಳಿಕೆ ಪತ್ರ ಬರೆದುಕೊಟ್ಟಿದ್ದರು. ಆದರೆ, ಪ್ರತಿಭಟನೆಯಲ್ಲಿ ಆಗಿದ್ದೇನು ಎಂದು ಪ್ರಶ್ನಿಸಿದರು.

ಜನರೆಲ್ಲಾ ಬೆಳಗ್ಗೆಯಿಂದ ಹಸಿದಿದ್ದಾರೆ‌. ಹಾಗಾಗಿ ಈ ಸಂದರ್ಭದಲ್ಲಿ ಅನಾಹುತ ಆಗುವುದು ಬೇಡ. ಪ್ರತಿಭಟನೆಗೆ ಇಳಿಯುವುದಕ್ಕಿಂತ‌ ಮುಖ್ಯಮಂತ್ರಿಗಳ ಬಳಿ ಮಾತುಕತೆ ನಡೆಸೋಣ ಎಂದು ವಿನಂತಿಸಿದ್ದೆ‌. ಯಾರದೋ ಪ್ರಚೋದನೆಯಿಂದಾಗಿ ಅಮಾಯಕರು ಲಾಠಿ ಏಟು ತಿನ್ನುವಂತಾಯಿತು. ಇಂಥ ಘಟನೆಗಳು ಆಗಬಾರದು. ಹಿಂಸೆಗೆ ಯಾರೂ ಅವಕಾಶ ಕೊಡಬಾರದು ಎಂದು ಸಚಿವೆ ಹೇಳಿದರು.

ಇದನ್ನೂ ಓದಿ: ಕಾನೂನು ಕೈಗೆತ್ತಿಕೊಂಡಿದ್ದರಿಂದ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಅನಿವಾರ್ಯವಾಯ್ತು: ಜಿ.ಪರಮೇಶ್ವರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.