ETV Bharat / state

ಕಾರ್ಕಳ ಯುವತಿ ಅತ್ಯಾಚಾರ ಹೇಯ ಕೃತ್ಯ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ - Karkala Girl Rape Case - KARKALA GIRL RAPE CASE

ಕಾರ್ಕಳದಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

hebbalkar
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (ETV Bharat)
author img

By ETV Bharat Karnataka Team

Published : Aug 25, 2024, 6:45 PM IST

ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಅತ್ಯಂತ ಖಂಡನೀಯ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಈ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿದ ಸಚಿವರು, ಮಾಹಿತಿ ಬಂದ ತಕ್ಷಣ ಘಟನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಪೊಲೀಸರಿಗೆ ದಿಟ್ಟತನದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಪೊಲೀಸರು ಕೂಡ ಘಟನೆ ಸಂಬಂಧಿಸಿದಂತೆ ಕೂಲಂಕಷ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇದರ ಹಿಂದೆ ಯಾರೇ ಇದ್ದರೂ ಮುಲಾಜಿಲ್ಲದೇ ಬಂಧಿಸಲಾಗುವುದು ಎಂದು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯಾರೇ ಆಗಲಿ, ಯಾವುದೇ ಧರ್ಮದವರಾಗಲಿ ತಪ್ಪು ಮಾಡಿದರೆ, ತಕ್ಕ ಶಿಕ್ಷೆ ನೀಡುವುದಕ್ಕೆ ನಮ್ಮ ಪೊಲೀಸರಿಗೆ ಯಾವುದೇ ಹಿಂಜರಿಕೆಯಿಲ್ಲ. ದಿಟ್ಟ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಇನ್ನು ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ. ಸಂತ್ರಸ್ತ ಯುವತಿಗೆ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆಗೆ ಜಿಲ್ಲಾಡಳಿತ ಮಾನಸಿಕ ಧೈರ್ಯ ನೀಡಿದೆ. ಎಲ್ಲ ರೀತಿಯ ನೆರವು ನೀಡಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪ್ರಾಪರ್ಟಿ ಮ್ಯಾನೇಜ್​ಮೆಂಟ್​ ಹೆಸರಲ್ಲಿ ಮನೆ ಮಾಲೀಕರು, ಬಾಡಿಗೆದಾರರಿಗೆ ವಂಚಿಸುತ್ತಿದ್ದ‌ ದಂಪತಿ ಬಂಧನ - frauding house owner

ETV Bharat Logo

Copyright © 2025 Ushodaya Enterprises Pvt. Ltd., All Rights Reserved.