ETV Bharat / state

ಸಂಪೂರ್ಣ ಗುಣಮುಖವಾಗಿದ್ದೇನೆ, ಶೀಘ್ರವೇ ಜನಸೇವೆಗೆ ಮರಳುವೆ: ಲಕ್ಷ್ಮೀ ಹೆಬ್ಬಾಳ್ಕರ್‌ - MINISTER LAKSHMI HEBBALKAR

ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಆಚರಿಸಿಕೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎರಡು ವಾರದಲ್ಲಿ ಸಾರ್ವಜನಿಕ ಜೀವನಕ್ಕೆ ಮರಳುವುದಾಗಿ ತಿಳಿಸಿದ್ದಾರೆ.

LAKSHMI HEBBALKAR BIRTHDAY  MINISTER LAKSHMI HEBBALKAR ACCIDENT  BELAGAVI  MICRO FINANCE
ಅಭಿಮಾನಿಗಳ ಸಮ್ಮುಖದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹುಟ್ಟುಹಬ್ಬ ಆಚರಣೆ (ETV Bharat)
author img

By ETV Bharat Karnataka Team

Published : Feb 14, 2025, 3:57 PM IST

ಬೆಳಗಾವಿ: "ದೇವರ ದಯೆಯಿಂದ ನಾನು ಸಂಪೂರ್ಣವಾಗಿ ಗುಣಮುಖವಾಗಿದ್ದೇನೆ. ವೈದ್ಯರು 6 ವಾರ ವಿಶ್ರಾಂತಿ ಮಾಡುವಂತೆ ಹೇಳಿದ್ದಾರೆ. ಹಾಗಾಗಿ ಇನ್ನೆರಡು ವಾರಗಳಲ್ಲಿ ಮತ್ತೆ ಪ್ರಯಾಣ ಆರಂಭಿಸುತ್ತೇನೆ. ಸಾರ್ವಜನಿಕ ಜೀವನಕ್ಕೆ ಮರಳುತ್ತೇನೆ" ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಬೆಳಗಾವಿಯ ಗೃಹಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಳೆದೊಂದು ತಿಂಗಳು ತುಂಬಾ ಕಷ್ಟಕರವಾಗಿತ್ತು. ಕ್ಷೇತ್ರದ ಜನರನ್ನು ತುಂಬಾ ಮಿಸ್​​ ಮಾಡಿಕೊಳ್ಳುತ್ತಿದ್ದೆ. ಶೀಘ್ರವೇ ಜನ ಸೇವೆಗೆ ಮರಳುವೆ. ಕಳೆದ 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿದ್ದೇನೆ. ಜನರ ಮಧ್ಯೆಯೇ ನನ್ನ ದೈನಂದಿನ ಜೀವನ ನಡೆಯುತ್ತಿದೆ. ಈಗಲೂ ದೂರವಾಣಿ ಮೂಲಕ ಜನರ ಸಂಪರ್ಕದಲ್ಲಿದ್ದೇನೆ" ಎಂದು ಹೇಳಿದ ಅವರು​ ಎಲ್ಲರಿಗೂ ಕೃತಜ್ಞತೆ ಹೇಳಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (ETV Bharat)

ಮೈಕ್ರೋ ಫೈನಾನ್ಸ್ ಸಮಸ್ಯೆಯ ಬಗ್ಗೆ ಪ್ರತಿಕ್ರಿಯೆ: ಆರು ತಿಂಗಳ ಹಿಂದೆಯೇ ಮೈಕ್ರೋ ಫೈನಾನ್ಸ್ ಸಮಸ್ಯೆ ಬಗ್ಗೆ ತಿಳಿದಿತ್ತು. ನಾನು ತಕ್ಷಣವೇ ಜಿಲ್ಲಾಧಿಕಾರಿ, ನಗರ ಪೊಲೀಸ್​ ಆಯುಕ್ತರ ಗಮನಕ್ಕೆ ತಂದಿದ್ದೆ. ಜೊತೆಗೆ ಮೈಕ್ರೋ ಫೈನಾನ್ಸ್ ಸಂಸ್ಥೆಯವರನ್ನು ಕರೆಸಿ ಮಹಿಳೆಯರಿಗೆ ತೊಂದರೆ ನೀಡಬಾರದು ಎಂದು ಬುದ್ಧಿ ಹೇಳಿದ್ದೆ. ಇದರ ಮಧ್ಯೆಯೂ ಕ್ಷೇತ್ರದ ಹೊರಗಿನ ಐದಾರು ಮುಖಂಡರು ಫೈನಾನ್ಸ್​ ಮಾಡಿಸುತ್ತಿದ್ದರು. ಸುಮಾರು 20 ಸಾವಿರ ಮಹಿಳೆಯರು ಫೈನಾನ್ಸ್​ನಲ್ಲಿ ಹಣ ತೆಗೆದುಕೊಂಡು ಬಿಟ್ಟಿದ್ದರು" ಎಂದು ಹೇಳಿದರು.

LAKSHMI HEBBALKAR BIRTHDAY MINISTER LAKSHMI HEBBALKAR ACCIDENT  BELAGAVI  MICRO FINANCE
2 ವಾರದಲ್ಲಿ ಸಾರ್ವಜನಿಕ ಜೀವನಕ್ಕೆ ಮರಳುವೆ ಎಂದ ಲಕ್ಷ್ಮೀ ಹೆಬ್ಬಾಳ್ಕರ್ (ETV Bharat)

ಗೃಹ ಲಕ್ಷ್ಮೀ ಯೋಜನೆಯ ಕುರಿತು..: "ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹ ಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕವೇ ಹಣ ಹಾಕಲಾಗುತ್ತಿದೆ" ಎಂದು ಸ್ಪಷ್ಟಪಡಿಸಿದರು.

ಅಭಿಮಾನಿಗಳ ಸಮ್ಮುಖದಲ್ಲಿ ಜನ್ಮದಿನಾಚರಣೆ: ಕ್ಷೇತ್ರದ ಜನರೆದುರು ಕೇಕ್​ ಕತ್ತರಿಸುವ ಮೂಲಕ ಸಚಿವೆ ಹೆಬ್ಬಾಳಕರ್​ ತಮ್ಮ ಜನ್ಮದಿನವನ್ನು ಆಚರಿಸಿಕೊಂಡರು. ಜನ್ಮದಿನದ ನಿಮಿತ್ತ ಗೃಹ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಶುಭಾಶಯ ಕೋರಿದರು.

ಇದನ್ನೂ ಓದಿ: ಆಸ್ಪತ್ರೆಯಿಂದ ಲಕ್ಷ್ಮಿ ಹೆಬ್ಬಾಳ್ಕರ್ ಡಿಸ್ಚಾರ್ಜ್: ಅಂದು ಎಸ್ಕಾರ್ಟ್ ಇಲ್ಲದೇ ಪ್ರಯಾಣಿಸಿದ್ದರ ಬಗ್ಗೆ ಸಚಿವೆ ಸ್ಪಷ್ಟನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.