ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣವರದಲ್ಲಿರುವ ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಮಹಿಳೆಯರ ಮತ್ತು ಮಕ್ಕಳ ಪೌಷ್ಟಿಕ ಆಹಾರ ತಯಾರಿಕೆ ಮತ್ತು ತರಬೇತಿ ಕೇಂದ್ರ (ಎಂಎಸ್ಪಿಸಿ)ಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದಿಢೀರ್ ಇಂದು ಭೇಟಿ ನೀಡಿ, ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಗುಣಮಟ್ಟವನ್ನು ಪರಿಶೀಲಿಸಿದರು.
ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ನೀಡಲಾಗುವ ಆಹಾರ ಪದಾರ್ಥಗಳ ತಯಾರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಯಾವುದೇ ಲೋಪದೋಷ ಆಗದಂತೆ, ಎಚ್ಚರ ವಹಿಸಿ ಆಹಾರ ಪದಾರ್ಥಗಳನ್ನು ಪೂರೈಸಲು ಸೂಚನೆ ನೀಡಿದರು.
ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ. ಪ್ರಕಾಶ್, ಹಿರಿಯ ನಾಗರಿಕರ, ವಿಶೇಷ ಚೇತನರ ಇಲಾಖೆಯ ನಿರ್ದೇಶಕ ಎನ್. ಸಿದ್ದೇಶ್ವರ್, ವಿಶೇಷಾಧಿಕಾರಿ ಎನ್.ಹೆಚ್. ನಿಶ್ಚಲ್, ಬೆಂಗಳೂರು ನಗರ ಜಿಲ್ಲೆಯ ಉಪ ನಿರ್ದೇಶಕ ಸಿದ್ದರಾಮಪ್ಪ ಉಪಸ್ಥಿತರಿದ್ದರು.
ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಭೆ, ನೀತಿ ಸಂಹಿತೆ ಉಲ್ಲಂಘನೆ ಆರೋಪ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?