ETV Bharat / state

ಜಗದೀಶ್ ಶೆಟ್ಟರ್​ಗೆ ಶುಭ ಹಾರೈಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ - Lakshmi Hebbalkar

ಲೋಕಸಭಾ ಚುನಾವಣೆಯಲ್ಲಿ ತಮ್ಮ ಮಗನ ವಿರುದ್ಧ ಜಯಭೇರಿ ಬಾರಿಸಿರುವ ಜಗದೀಶ್​ ಶೆಟ್ಟರ್​ ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಶುಭ ಕೋರಿದ್ದಾರೆ.

Minister Lakshmi Hebbalkar
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (ETV Bharat)
author img

By ETV Bharat Karnataka Team

Published : Jun 5, 2024, 7:47 PM IST

ಬೆಳಗಾವಿ: "ಲೋಕಸಭಾ ಚುನಾವಣೆಯಲ್ಲಿ ಮತದಾರರು ನೀಡಿದ ತೀರ್ಪನ್ನು ಅತ್ಯಂತ ವಿನಮ್ರತೆಯಿಂದ ಗೌರವಿಸುತ್ತೇವೆ. ನೂತನ ಸಂಸದರಾಗಿ ಆಯ್ಕೆಯಾಗಿರುವ ಜಗದೀಶ್ ಶೆಟ್ಟರ್ ಅವರಿಗೆ ಅಭಿನಂದನೆಗಳು" ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ಕುರಿತು ಇಂದು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, "ನಮ್ಮ ಪರವಾಗಿ ಕೆಲಸ ಮಾಡಿದ ಎಲ್ಲಾ ಕಾರ್ಯಕರ್ತರು, ಮುಖಂಡರು ಹಾಗೂ ಬೆಂಬಲಿಸಿದ ಎಲ್ಲ ಮತದಾರರು, ಸಹಕರಿಸಿದ ಮಾಧ್ಯಮದ ಸ್ನೇಹಿತರಿಗೆ ಧನ್ಯವಾದ ಸಲ್ಲಿಸುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲೆಯ ಎಲ್ಲಾ ಹಾಲಿ ಮತ್ತು ಮಾಜಿ ಶಾಸಕರು, ಪಕ್ಷದ ಮುಖಂಡರು ಹೆಚ್ಚಿನ ಸಹಕಾರ ನೀಡಿದ್ದಾರೆ. ಅವರೆಲ್ಲರಿಗೆ ಕೃತಜ್ಞತೆಗಳು" ಎಂದಿದ್ದಾರೆ.

ಇದೊಂದು ತಾತ್ಕಾಲಿಕ ಹಿನ್ನಡೆ: "ಮೃಣಾಲ್​ ಹೆಬ್ಬಾಳ್ಕರ್ ಇನ್ನೂ ಚಿಕ್ಕವನು. ರಾಜಕೀಯದಲ್ಲಿ ಸಾಕಷ್ಟು ಅವಕಾಶವಿದೆ. ಮುಂದಿನ ದಿನಗಳಲ್ಲಿ ಅವನಿಗೆ ಉತ್ತಮ ಭವಿಷ್ಯವಿದೆ. ಇದೊಂದು ತಾತ್ಕಾಲಿಕ ಹಿನ್ನಡೆ. ದೊಡ್ಡ ಪ್ರಮಾಣದಲ್ಲಿ ಜನರು ನಮ್ಮನ್ನು ಬೆಂಬಲಿಸಿದ್ದಾರೆ. ಆದಾಗ್ಯೂ ಈ ಚುನಾವಣೆಯಲ್ಲಾದ ಹಿನ್ನಡೆಗೆ ಆತ್ಮಾವಲೋಕನ ಮಾಡಿಕೊಂಡು, ಮುಂದಿನ ದಿನಗಳಲ್ಲಿ ಅವುಗಳನ್ನು ಸರಿಪಡಿಸಿಕೊಂಡು ಹೋಗುವ ಕೆಲಸ ಮಾಡುತ್ತೇವೆ. ನಮ್ಮ ಪರವಾಗಿ ಕೆಲಸ ಮಾಡಿದ ಎಲ್ಲಾ ಕಾರ್ಯಕರ್ತರ ಜೊತೆಗೆ ನಾವು ಸದಾ ಇರುತ್ತೇವೆ. ಜಿಲ್ಲೆಯ ಜನರ ಕಷ್ಟ-ಸುಖಗಳಲ್ಲಿ ನಿರಂತರವಾಗಿ ಭಾಗಿಯಾಗುತ್ತೇವೆ. ಪಕ್ಷವನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುತ್ತೇವೆ" ಎಂದು ತಿಳಿಸಿದ್ದಾರೆ.

"ನೂತನ ಸಂಸದರಾಗಿ ಆಯ್ಕೆಯಾಗಿರುವ ಜಗದೀಶ್ ಶೆಟ್ಟರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಅವರು ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಕೆಲಸ ಮಾಡಲಿ ಎಂದು ಶುಭ ಹಾರೈಸುತ್ತೇನೆ. ರಾಜ್ಯದಲ್ಲಿ ನಮ್ಮ ಸರ್ಕಾರವಿರುವುದರಿಂದ ಜಿಲ್ಲೆಗೆ ಹೊಸ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು. ಎಲ್ಲರ ಸಹಕಾರದೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮುಂದುವರಿಸಲಾಗುವುದು. ಜನರ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿಕೊಂಡು ಮುನ್ನಡೆಯಲಾಗುವುದು" ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್‌ಗೆ​ ಗೆಲುವು; ಕಾಂಗ್ರೆಸ್‌ನ​ ಮೃಣಾಲ್ ಹೆಬ್ಬಾಳ್ಕರ್‌ಗೆ ಸೋಲು - Jagadish Shettar

ETV Bharat Logo

Copyright © 2024 Ushodaya Enterprises Pvt. Ltd., All Rights Reserved.