ETV Bharat / state

ವಿಮಾನ‌ ನಿಲ್ದಾಣ, ಏರ್ ಸ್ಟ್ರಿಪ್ ಪ್ರಗತಿ ಪರಿಶೀಲನೆ: ತಾಂತ್ರಿಕ ಅಡಚಣೆಗಳ ನಿವಾರಣೆಗೆ ಸಚಿವ ಎಂ‌.ಬಿ. ಪಾಟೀಲ್ ಸೂಚನೆ - M B Patil

ರಾಜ್ಯದಲ್ಲಿನ ವಿವಿಧ ವಿಮಾನ ನಿಲ್ದಾಣಗಳು ಮತ್ತು ಏರ್​ಸ್ಟ್ರಿಪ್ ಅಭಿವೃದ್ಧಿ ಯೋಜನೆಗಳಿಗೆ ಉಂಟಾಗಿರುವ ತಾಂತ್ರಿಕ ಅಡಚಣೆಗಳನ್ನು ತ್ವರಿತವಾಗಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸಚಿವ ಎಂ.ಬಿ. ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಪ್ರಗತಿ ಪರಿಶೀಲನಾ ಸಭೆ
ಪ್ರಗತಿ ಪರಿಶೀಲನಾ ಸಭೆ (ETV Bharat)
author img

By ETV Bharat Karnataka Team

Published : Aug 24, 2024, 9:53 PM IST

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಜಯಪುರ, ಹಾಸನ ಸೇರಿ ವಿವಿಧ ವಿಮಾನ ನಿಲ್ದಾಣಗಳು ಮತ್ತು ಏರ್-ಸ್ಟ್ರಿಪ್ ಅಭಿವೃದ್ಧಿ ಯೋಜನೆಗಳಿಗೆ ತಾಂತ್ರಿಕ ಅಡಚಣೆಗಳು ಎದುರಾಗಿವೆ. ಇನ್ನೂ ಕೆಲ ಯೋಜನೆಗಳಿಗೆ ಅಗತ್ಯ ಪ್ರಮಾಣದ ಭೂಮಿ ಸಿಕ್ಕಿಲ್ಲ. ಇವೆಲ್ಲವನ್ನೂ ತ್ವರಿತವಾಗಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂಬಂಧ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, 219 ಕೋಟಿ ರೂ. ವೆಚ್ಚದಲ್ಲಿ 322 ಎಕರೆ‌ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಯಚೂರು ಗ್ರೀನ್ ಫೀಲ್ಡ್ ವಿಮಾನ‌ ನಿಲ್ದಾಣದ ಕಾಮಗಾರಿ ಆರಂಭಕ್ಕೆ ತಾಂತ್ರಿಕ ಅಡಚಣೆಗಳಿದ್ದು, ತಕ್ಷಣ ಅವುಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದರು. ಅಗತ್ಯ ಬಿದ್ದರೆ ದೆಹಲಿಗೂ ಹೋಗಿ ಬರಬೇಕು ಎಂದು ತಾಕೀತು ಮಾಡಿದರು.

ರಾಯಚೂರು ವಿಮಾನ‌ ನಿಲ್ದಾಣ ಯೋಜನೆಗೆ ಈಗಾಗಲೇ ಡಿಪಿಆರ್ ಸಿದ್ಧವಾಗಿದೆ. ಯೋಜನೆಗೆ ಬೇಕಾಗಿರುವ ಪರಿಸರ ಇಲಾಖೆಯ ಅನುಮತಿಯನ್ನು ಕೂಡ ಬೇಗನೆ ಪಡೆಯಬೇಕು. ಹಾಸನ ವಿಮಾನ ನಿಲ್ದಾಣದ ಕಾಮಗಾರಿ ಚುರುಕಾಗಿ ಮುಗಿಸಬೇಕು. ಭೂಸ್ವಾಧೀನದ ಸಮಸ್ಯೆ ಇದ್ದು, ತಕ್ಷಣ ಬಗೆಹರಿಸಲು ಸಚಿವರು ಸೂಚಿಸಿದರು.

ಉಡಾನ್ ಯೋಜನೆ ಸ್ಥಗಿತವಾಗಿರುವ ಕಾರಣ ಬೀದರ್ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ನಿಲ್ಲಿಸಲಾಗಿದೆ. ಈ ಸಂಬಂಧ ವಿಮಾನಯಾನ ಸಂಸ್ಥೆಗಳ ಜತೆ ಮಾತುಕತೆ ನಡೆಸಿ, ಪರ್ಯಾಯ ಕ್ರಮಗಳ ಬಗ್ಗೆ ತೀರ್ಮಾನಿಸಬೇಕು. ಪುನಃ ಉಡಾನ್ ಯೋಜನೆ ಚಾಲನೆಗೆ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು.

ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣವಾಗಿದ್ದು, ಅಗತ್ಯ ಇರುವ ಅಗ್ನಿಶಾಮಕ ವಾಹನಗಳನ್ನು ಖರೀದಿಸಲು ತ್ವರಿತವಾಗಿ ಕ್ರಮ ತೆಗೆದುಕೊಳ್ಳಬೇಕು. ಇದೇ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಭೂಸ್ವಾಧೀನಕ್ಕೂ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

ಏರ್-ಸ್ಟ್ರಿಪ್ಸ್ ಅಭಿವೃದ್ಧಿಗೆ ಭೂಮಿ ಗುರುತಿಸಿ: ಪ್ರವಾಸೋದ್ಯಮವನ್ನು ಪರಿಗಣಿಸಿ ಚಿಕ್ಕಮಗಳೂರು, ಕೊಡಗು, ಧರ್ಮಸ್ಥಳ ಮತ್ತು ಹಂಪಿಯಲ್ಲಿ ಏರ್-ಸ್ಟ್ರಿಪ್ ನಿರ್ಮಿಸುವುದಾಗಿ ಘೋಷಿಸಲಾಗಿದೆ. ಈ ಪೈಕಿ ಕೊಡಗು ಮತ್ತು ಧರ್ಮಸ್ಥಳದಲ್ಲಿ 140 ಎಕರೆ ಭೂಮಿ ಅಗತ್ಯವಿದೆ. ಸ್ಥಳೀಯ ಶಾಸಕರು ಮತ್ತು ಜಿಲ್ಲಾಡಳಿತದ ಜತೆ ವ್ಯವಹರಿಸಿ, ಈ ಪ್ರಕ್ರಿಯೆ ಮುಗಿಸಬೇಕು ಎಂದು ತಿಳಿಸಿದರು.

ಚಿಕ್ಕಮಗಳೂರಿನಲ್ಲಿ ಈ ಯೋಜನೆಗೆ ಈಗಾಗಲೇ 120 ಎಕರೆ ಜಾಗ ಗುರುತಿಸಲಾಗಿದೆ. ಆದರೆ ಇದಕ್ಕೆ ಇನ್ನೂ 17.5 ಎಕರೆ ಅಗತ್ಯವಿದ್ದು, ಇದನ್ನು ಗುರುತಿಸಲು ನಿರ್ದೇಶಿಸಲಾಗಿದೆ. ಜತೆಗೆ ಈ ಸಂಬಂಧ ಡಿಪಿಆರ್ ಸಿದ್ಧಪಡಿಸಲು ಪವನ್ ಹನ್ಸ್ ಕಂಪನಿಗೆ ಹೇಳಲಾಗಿದೆ. ಕಾರವಾರದಲ್ಲಿ ಸಿವಿಲ್ ಎನ್ಕ್ಲೇವ್ ಅಭಿವೃದ್ಧಿಗೆ ಇನ್ನೂ 97 ಎಕರೆ ಭೂಮಿ ಬೇಕಾಗಿದೆ. ಇದಕ್ಕಾಗಿ ಈಗಾಗಲೇ 27.34 ಕೋಟಿ ರೂ.ಗೂ ಹೆಚ್ಚು ಹಣ ಕೊಡಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ದುರಸ್ತಿ ಕಾಮಗಾರಿ: ಬೆಂಗಳೂರಿನ ಈ ರೈಲು ನಿಲ್ದಾಣದಲ್ಲಿ ಮೂರು ತಿಂಗಳು ರೈಲು ನಿಲುಗಡೆ ಇಲ್ಲ - no train stop

ETV Bharat Logo

Copyright © 2024 Ushodaya Enterprises Pvt. Ltd., All Rights Reserved.