ETV Bharat / state

ಮಿಸ್ಟರ್ ನಿರಾಣಿ ಬಾಗಲಕೋಟೆಗೆ ಬಂದೇ ಉತ್ತರ ನೀಡುವೆ: ಸಚಿವ ಎಂ.ಬಿ. ಪಾಟೀಲ್ - M B Patil - M B PATIL

ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್​ ನಿರಾಣಿ ಬಾಗಲಕೋಟೆಯಲ್ಲಿ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ. ಪಾಟೀಲ್​, ನಾನೇ ಸ್ವತಃ ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲಿಯೇ ನಿನ್ನ ಸತ್ಯಾಂಶವನ್ನು ಬಿಚ್ಚಿಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.

ಸಚಿವ ಎಂ.ಬಿ.ಪಾಟೀಲ್
ಮುರುಗೇಶ್​ ನಿರಾಣಿ, ಸಚಿವ ಎಂ.ಬಿ.ಪಾಟೀಲ್ (ETV Bharat)
author img

By ETV Bharat Karnataka Team

Published : Sep 1, 2024, 8:53 PM IST

Updated : Sep 1, 2024, 9:08 PM IST

ಬೆಂಗಳೂರು: ನಾನು ವಿಜಯಪುರ ಜಿಲ್ಲೆಯವ, ನನಗೂ ಭಾಷೆ ಗೊತ್ತಿದೆ. ಬಾಗಲಕೋಟೆಗೇ ಬಂದು ನಿನಗೆ ನಿನ್ನ ಭಾಷೆಯಲ್ಲೇ ಉತ್ತರ ನೀಡುವೆ' ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಮಾಜಿ ಸಚಿವ ಮುರುಗೇಶ್​ ನಿರಾಣಿಗೆ ತಿರುಗೇಟು ನೀಡಿದ್ದಾರೆ.

ನಿರಾಣಿ ಅವರು ಬಾಗಲಕೋಟೆಯಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ತಮ್ಮ ವಿರುದ್ಧ ವಾಗ್ದಾಳಿ ನಡೆಸಿರುವ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಎಂ. ಬಿ. ಪಾಟೀಲ್, ಮಿಸ್ಟರ್​ ಮುರುಗೇಶ್​ ನಿರಾಣಿ ಬಾಗಲಕೋಟೆಯಲ್ಲಿ ನೀನು ಮಾಡಿರುವ ಪತ್ರಿಕಾಗೋಷ್ಠಿಯನ್ನು ಗಮನಿಸಿದ್ದೇನೆ. ಸಿದ್ದಾರ್ಥ ವಿಹಾರ ಟ್ರಸ್ಟ್​ಗೆ ಯಾವುದೇ ರಿಯಾಯಿತಿ ಇಲ್ಲದೆ ಸಿ.ಎ ನಿವೇಶನ ನೀಡಿದ್ದರೂ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಹೆಸರನ್ನು ಅನವಶ್ಯಕವಾಗಿ ಎಳೆದು ತಂದು ಹಗರಣವಾಗಿದೆ ಎಂದು ಬಿಜೆಪಿ ಅವರು ಬಿಂಬಿಸುತ್ತಿರುವುದಕ್ಕೆ ಪ್ರತಿಯಾಗಿ ನಾನು ಪತ್ರಿಕಾಗೋಷ್ಠಿ ನಡೆಸಿ, ಬಿಜೆಪಿ ಅವಧಿಯಲ್ಲಿ ಬಿಜೆಪಿ ನಾಯಕರು ಯಾರು ಯಾರು ಎಷ್ಟೆಷ್ಟು ಲಾಭ ಪಡೆದಿದ್ದಾರೆ ಎಂಬುದು ತಿಳಿಸುವುದು ನನ್ನ ಉದ್ದೇಶವಾಗಿತ್ತು. ಈ ಸಂದರ್ಭದಲ್ಲಿ ಮಿ. ನಿರಾಣಿ ತನ್ನ ಶಿಕ್ಷಣ ಸಂಸ್ಥೆ ಮತ್ತು ಸಕ್ಕರೆ ಕಾರ್ಖಾನೆಗೆ ಪಡೆದಿರುವ ಲಾಭದ ಮಾಹಿತಿಯನ್ನು ನೀಡಿದ್ದೇನೆ ಎಂದಿದ್ದಾರೆ.

ಆದರೆ, “ದನಕಾಯುವವನು" ಎಂಬ ಶಬ್ದವನ್ನು ನಾನು ಎಲ್ಲಿಯೂ ಬಳಸಿಲ್ಲ ಮತ್ತು ಏಕವಚನದಲ್ಲೂ ನಾನು ಮಾತನಾಡಿಲ್ಲ. ಅಷ್ಟಕ್ಕೂ, ದನಕಾಯುವುದು ಗೌರವದ ಕಾಯಕ. ದನಕಾಯುವವರನ್ನು ನಾನು ಗೌರವಿಸುತ್ತೇನೆ. ಮಿ. ನಿರಾಣಿ ತಾನಾಗಿಯೇ “ದನಕಾಯುವವ” ಎಂದು ತಿಳಿದುಕೊಂಡು, ನನ್ನ ಸಂಸ್ಥೆ ಮತ್ತು ನನ್ನ ಕುರಿತು ಏಕವಚನದಲ್ಲಿ ಕೆಟ್ಟ ಭಾಷೆ ಬಳಸಿದ್ದಾನೆ. ನಾನೂ ವಿಜಯಪುರ ಜಿಲ್ಲೆಯವ. ಇಂಥಹ ಎಲ್ಲ ಭಾಷೆಗಳು ನನಗೂ ಬರುತ್ತವೆ. ನಾನೇ ಸ್ವತಃ ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲಿಯೇ ನಿನ್ನ ಸತ್ಯಾಂಶವನ್ನು ಬಿಚ್ಚಿಡುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಅನವಶ್ಯಕವಾಗಿ ನನ್ನ ತಂಟೆಗೆ ಬಂದವರಿಗೆ ಹಿಂದೆಯೂ ಬಿಟ್ಟಿಲ್ಲ, ಇಂದು ಮತ್ತು ಮುಂದೆಯೂ ಬಿಡುವುದಿಲ್ಲ. ಅದರ ಕಹಿ ಅನುಭವ ಈ ಹಿಂದೆ ನಿನಗೆ ಆಗಿದೆ ಎನ್ನುವುದನ್ನು ನೆನಪಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎಂ.ಬಿ. ಪಾಟೀಲ್​ ನಿನ್ನ ಗೌಡಿಕೆ, ಅಧಿಕಾರ ದರ್ಪ ನಮ್ಮ ಮುಂದೆ ತೋರಿಸಬೇಡ: ಮುರುಗೇಶ್​ ನಿರಾಣಿ - Murugesh Nirani

Last Updated : Sep 1, 2024, 9:08 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.