ಶಿವಮೊಗ್ಗ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ಕಾಗೋಡು ತಿಮ್ಮಪ್ಪನವರು ಅನಾರೋಗ್ಯದಿಂದ ಎರಡು ದಿನಗಳ ಹಿಂದೆ ನಗರದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಮಧು ಬಂಗಾರಪ್ಪ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಜೊತೆಗೆ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಧು ಬಂಗಾರಪ್ಪ ಚರ್ಚಿಸಿದ್ದಾರೆ. ಜೊತೆಗೆ ಶರಾವತಿ ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ಸಮಸ್ಯೆಗಳ ಬಗ್ಗೆ ಇತ್ತೀಚೆಗೆ ನಡೆದ ರಾಜಕೀಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಎಂಎಲ್ಸಿ ಬಲ್ಕಿಷ್ ಭಾನು ಸೇರಿದಂತೆ ಇತರೆ ಮುಖಂಡರು ಹಾಜರಿದ್ದರು.
ಇದಕ್ಕೂ ಮುನ್ನ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಲಪ್ಪ ಹರತಾಳು ಅವರು ಸಹ ಆಸ್ಪತ್ರೆಗೆ ಭೇಟಿ ನೀಡಿ ಕಾಗೋಡು ತಿಮ್ಮಪ್ಪನವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಕಾಗೋಡು ಅವರ ಪುತ್ರಿ ಡಾ. ರಾಜನಂದಿನಿ ಹಾಜರಿದ್ದರು.
ಇದನ್ನೂ ಓದಿ : ನಮ್ಮ ಪಕ್ಷದವರು ಆಪರೇಷನ್ ಹಸ್ತ ಮಾಡುತ್ತಿಲ್ಲ: ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ