ETV Bharat / state

ಲೋಕಸಭೆ ಫಲಿತಾಂಶ ಬಂದ ನಂತರ ಶಿಂಧೆಯೇ ಮಾಜಿ ಆಗುತ್ತಾರೆ: ಸಚಿವ ಎಂ.ಬಿ. ಪಾಟೀಲ್ - MB Patil

ರಾಜ್ಯ ಸರ್ಕಾರ ಪತನದ ಬಗ್ಗೆ ಮಹಾರಾಷ್ಟ್ರ ಸಿಎಂ ಶಿಂಧೆ ಹೇಳಿಕೆಗೆ ಸಚಿವ ಎಂ.ಬಿ. ಪಾಟೀಲ್​ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಸಚಿವ ಎಂ.ಬಿ.ಪಾಟೀಲ್
ಸಚಿವ ಎಂ.ಬಿ.ಪಾಟೀಲ್ (ETV Bharat)
author img

By ETV Bharat Karnataka Team

Published : May 13, 2024, 4:47 PM IST

ಬೆಂಗಳೂರು: ಲೋಕಸಭೆ ಚುನಾವಣೆಯ ಬಳಿಕ ಕರ್ನಾಟಕ ಸರಕಾರ ಉರುಳಿ ಬೀಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಮೊದಲು ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲಿ ಎಂದು ಸಚಿವ ಎಂ.ಬಿ. ಪಾಟೀಲ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ನಂತರ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ 20 ಶಾಸಕರು ಕಾಂಗ್ರೆಸ್​ಅನ್ನು ಸೇರಲಿದ್ದು, ಅವರೆಲ್ಲರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಸರಕಾರ ಬೀಳಿಸಲು ಇದು ಮಹಾರಾಷ್ಟ್ರವಲ್ಲ. ಜೂನ್ ಮೊದಲ ವಾರದ ನಂತರ ಶಿಂಧೆ ಅವರ ಸರಕಾರವೇ ಪತನವಾಗಿ, ಅವರೇ ಮಾಜಿ ಆಗಲಿದ್ದಾರೆ ಎಂದು ಅವರು ಭವಿಷ್ಯ ನುಡಿದರು.

ನಾವು 136 ಶಾಸಕರಿದ್ದೇವೆ. ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ನಮ್ಮ 89 ಶಾಸಕರು ಬಿಜೆಪಿಗೆ ಹೋಗಬೇಕು. ಈಗ ಬೇರೆ ಪಕ್ಷಕ್ಕೆ ಹೋಗುವ ದಡ್ಡರು ಯಾರೂ ಇಲ್ಲ. ಏಕನಾಥ ಶಿಂಧೆಗೆ ಶಕ್ತಿ ಇದ್ದರೆ ನಮ್ಮ ಐವರು ಶಾಸಕರನ್ನು ಮೊದಲು ತಮ್ಮತ್ತ ಸೆಳೆದುಕೊಂಡು ತೋರಿಸಲಿ. ಇನ್ನು ಒಂದೆರಡು ತಿಂಗಳಲ್ಲಿ ಆ ರಾಜ್ಯದಲ್ಲಿ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಮಹಾವಿಕಾಸ ಅಘಾಡಿ ಮೈತ್ರಿಕೂಟದ ಸರ್ಕಾರ ಬರಲಿದೆ ಎಂದು ಸಚಿವ ಎಂ ಬಿ ಪಾಟೀಲ್​ ಟಾಂಗ್​ ಕೊಟ್ಟರು.

ಇದನ್ನೂ ಓದಿ: ಕರ್ನಾಟಕದಲ್ಲಿ ಮಹಾರಾಷ್ಟ್ರ ರೀತಿಯಲ್ಲಿ ಆಪರೇಷನ್ ಆಗುತ್ತದೆ: ಸಿಎಂ ಏಕನಾಥ್​ ಶಿಂಧೆ - CM Eknath Shinde

ETV Bharat Logo

Copyright © 2024 Ushodaya Enterprises Pvt. Ltd., All Rights Reserved.