ETV Bharat / state

ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿತ್ತು ಎಂದು ಬಿಜೆಪಿ ಸಾಬೀತುಪಡಿಸಲಿ: ಸಚಿವ ಜಿ ಪರಮೇಶ್ವರ್ ಸವಾಲು

ನಮ್ಮ‌ ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲು ಸಂಪೂರ್ಣವಾಗಿ ಸಿಕ್ಕಿಲ್ಲ. ಅನ್ಯಾಯದ ಕುರಿತು ನಾವು ದೆಹಲಿಗೆ ಹೋಗಿ ಪ್ರತಿಭಟನೆ‌ ನಡೆಸುತ್ತೇವೆ ಎಂದು ಸಚಿವ ಪರಮೇಶ್ವರ್ ಹೇಳಿದ್ದಾರೆ.

Etv Bharatminister-parameshwar-reaction-on-bjp-over-allocation-of-grants
ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿತ್ತು ಎಂದು ಬಿಜೆಪಿ ಸಾಭೀತುಪಡಿಸಲಿ: ಸಚಿವ ಪರಮೇಶ್ವರ್
author img

By ETV Bharat Karnataka Team

Published : Feb 5, 2024, 3:14 PM IST

Updated : Feb 5, 2024, 3:29 PM IST

ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ

ಬೆಂಗಳೂರು: "ಡಾ.‌ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಯುಪಿಎ ಸರ್ಕಾರದ ಅವಧಿಯಲ್ಲಿ ಅನುದಾನ ನೀಡುವ ವಿಚಾರದಲ್ಲಿ ರಾಜ್ಯಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ" ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಮನಮೋಹನ್ ಸಿಂಗ್ ಅವರು ಆರ್ಥಿಕ ತಜ್ಞರಾಗಿ‌ ಬ್ಯಾಲೆನ್ಸ್ ಮಾಡುತ್ತಿದ್ದರು. ಈ ಹಿಂದೆ ಪ್ರವಾಹ ಉಂಟಾದಾಗ ವೈಮಾನಿಕ ಸಮೀಕ್ಷೆ ನಡೆಸಿ ಎರಡು ಸಾವಿರ ಕೋಟಿ ರೂ. ಮಂಜೂರು ಮಾಡಿದ್ದರು. ಅವರ ಅವಧಿಯಲ್ಲಿ ಅನ್ಯಾಯವಾಗಿತ್ತು ಎನ್ನುವುದಾದರೆ ಬಿಜೆಪಿಯವರು ಸಾಬೀತುಪಡಿಸಲಿ" ಎಂದು ಸವಾಲು ಹಾಕಿದರು.

"ಜಿಎಸ್‌ಟಿ ಜಾರಿಯಾದ ನಂತರ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ಆದ್ರೆ ನಮ್ಮ‌ ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲು ಸಂಪೂರ್ಣವಾಗಿ ನಮಗೆ ಸಿಕ್ಕಿಲ್ಲ. ಬರ ಪರಿಹಾರಕ್ಕೆ 17 ಸಾವಿರ ಕೋಟಿ ರೂ. ಕೇಳಿದರು ಸಹ ಈವರೆಗೆ ಕೊಟ್ಟಿಲ್ಲ. ಎನ್‌ಡಿಆರ್‌ಎಫ್ ಫಂಡ್ ಸಹ ಬಂದಿಲ್ಲ. ಆದರೂ ನಾವು ಇದನ್ನೆಲ್ಲ‌ ರಾಜಕೀಯ ಮಾಡೋದಿಕ್ಕೆ ಹೋಗಿಲ್ಲ. ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ನಾವು ದೆಹಲಿಗೆ ಹೋಗಿ ಪ್ರತಿಭಟನೆ‌ ನಡೆಸುತ್ತೇವೆ.‌ ದೇಶದ ಜನತೆಗೆ ಗೊತ್ತಾಗಲಿ. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಜನರಿಗೆ ಗೊತ್ತಾಗಿದೆ. ವಿಶೇಷ ಅನುದಾನವನ್ನು ನಾವು ಕೇಳಿಲ್ಲ. ಆದರೆ, ನಮಗೆ ಬರಬೇಕಾದ ಪಾಲು‌ ಕೊಟ್ಟರೆ ಸಾಕು. ಯುಪಿಎ ಮತ್ತು ಎನ್‌ಡಿಎ ಅವಧಿಯ ಅನುದಾನ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲಿ. ರಾಜ್ಯದಲ್ಲಿ ನಾವು ಹೊರಡಿಸುತ್ತೇವೆ" ಎಂದು ಹೇಳಿದರು.

ರಾಜಸ್ವ ಸಂಗ್ರಹ ಕಡಿಮೆಯಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಆರೋಪ ಮಾಡುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, "ದೇಶದಲ್ಲಿ ಕರ್ನಾಟಕ ಎರಡನೇ ದೊಡ್ಡ ಟ್ಯಾಕ್ಸ್ ಪೇಯರ್ ಅಲ್ಲ ಎಂಬುದನ್ನು ಅವರು ಹೇಳಲಿ. ನಂತರ ರಾಜಸ್ವ ಸಂಗ್ರಹದ‌ ಬಗ್ಗೆ ಚರ್ಚಿಸೋಣ.‌ ರಾಜ್ಯದಲ್ಲಿ ಬರಗಾಲ ಇದೆ. ನಮ್ಮ ಹಕ್ಕು ಕೇಳುತ್ತಿದ್ದೇವೆ ಅಷ್ಟೇ" ಎಂದು ತಿರುಗೇಟು ನೀಡಿದರು.

ಪೊಲೀಸರಿಂದ ಯಾರ ಮೇಲೂ ಹಲ್ಲೆಯಾಗಿಲ್ಲ : "ಪ್ರತಿಭಟನೆ ಮಾಡುವುದಿದ್ದರೆ ಫ್ರೀಡಂಪಾರ್ಕ್‌ನಲ್ಲಿ ಶಾಂತಿಯುತವಾಗಿ ಮಾಡಲಿ. ಮನೆಗೆ ಯಾರಾದ್ರು ನುಗ್ಗುತ್ತಾರೆ ಅಂದಾಗ ಪೊಲೀಸರು ಸುಮ್ಮನೆ ಇರುವುದಿಲ್ಲ. ರಾಜ್ಯದಲ್ಲಿ ಶಾಂತಿ‌-ಸುವ್ಯವಸ್ಥೆ ಕಾಪಾಡಬೇಕು.‌‌ ಆ‌ ಕೆಲಸವನ್ನು‌ ಪೊಲೀಸರು ಮಾಡಿದ್ದಾರೆ. ಡಿ.ಕೆ.ಸುರೇಶ್ ಅವರ ಮನೆಗೆ ಮುತ್ತಿಗೆ ಹಾಕುತ್ತೇವೆ ಅಂತ ಬಂದಾಗ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಪೊಲೀಸರಿಂದ ಯಾರ ಮೇಲೂ ಹಲ್ಲೆಯಾಗಿಲ್ಲ" ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕೇಂದ್ರದ ಅನುದಾನ ತಾರತಮ್ಯದಿಂದ ರಾಜ್ಯಕ್ಕೆ 1,87,867 ಕೋಟಿ ರೂ. ನಷ್ಟವಾಗಿದೆ: ಸಿಎಂ ಸಿದ್ದರಾಮಯ್ಯ

Last Updated : Feb 5, 2024, 3:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.