ETV Bharat / state

ನಿಗಮ ಮಂಡಳಿಗಳಿಗೆ ನೇಮಕ ಮಾಡುವಾಗ ನಮ್ಮ ಅಭಿಪ್ರಾಯ ಕೇಳಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

ನಿಗಮ ಮಂಡಳಿಗಳ ನೇಮಕಾತಿ ಬಗ್ಗೆ ನಮ್ಮ ಅಭಿಪ್ರಾಯ ಕೇಳಿಲ್ಲ ಎಂದು ಗೃಹ ಸಚಿವ ಪರಮಶ್ವರ್ ತಿಳಿಸಿದ್ದಾರೆ.

Etv Bharat
Etv Bharat
author img

By ETV Bharat Karnataka Team

Published : Jan 23, 2024, 3:11 PM IST

Updated : Jan 23, 2024, 4:26 PM IST

ಸಚಿವ ಡಾ ಜಿ ಪರಮೇಶ್ವರ್

ಬೆಂಗಳೂರು: ನಿಗಮ - ಮಂಡಳಿಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರರನ್ನು ನೇಮಕ ಮಾಡೋವಾಗ ನಮ್ಮ ಅಭಿಪ್ರಾಯವನ್ನು ಯಾರು ಕೇಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಒಂದೆರಡು ಹೆಸರು ಕೊಡಿ ಅಂದಾಗ ಕೊಟ್ಟಿದ್ದೇನೆ. ಆದರೆ, ನಮ್ಮ ಜೊತೆ ಮಾತಾಡಿ ಪಟ್ಟಿ ಮಾಡಿಲ್ಲ. ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಮುಖಂಡರ ಕೆಲಸ ನಮಗೆ ಗೊತ್ತಿರುತ್ತೆ. ಸಿಎಂ ಹಾಗೂ ಪಕ್ಷದ ‌ಅಧ್ಯಕ್ಷರು ಇದ್ದಾರೆ. ಆಯ್ಕೆ ವಿಚಾರದ ಜವಾಬ್ದಾರಿಯನ್ನು ಅವರಿಗೆ ಬಿಡಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಜಿಲ್ಲಾ ನಾಯಕರ ಜೊತೆ ಮಾತನಾಡಿ ಪಟ್ಟಿ ಮಾಡಬೇಕು. ಅದರೆ ಈಗ ಪಕ್ಷದ ಪ್ರಧಾನ ಕಾರ್ಯದರ್ಶಿಯವರೇ ಮಾಡುತ್ತಿದ್ದಾರೆ.‌ ಹೀಗಾಗಿ‌ ಪಟ್ಟಿ ಸಿದ್ಧಪಡಿಸುವುದು ನಿಧಾನವಾಗಿದೆ. ನಾನು ಸಹ 8 ವರ್ಷ ಪಕ್ಷದ ಅಧ್ಯಕ್ಷನಾಗಿದ್ದೇನೆ. ಯಾರು ಯಾರು ಕೆಲಸ ಮಾಡಿದ್ದಾರೆ ಎಂಬುದು ನನಗೆ ಗೊತ್ತಿದೆ. ಹತ್ತಾರು ವರ್ಷ ಪಕ್ಷಕ್ಕೆ ದುಡಿದವರಿದ್ದಾರೆ. ಅವರಿಗೆ ಅಧಿಕಾರ ಕೊಡಬೇಕು. ಕೆಲಸ ಮಾಡದವರಿಗೆ ಅಧಿಕಾರ ಕೊಟ್ಟರೆ, ಕೆಲಸ ಮಾಡಿರುವರಿಗೆ ನೋವು, ಅಸಮಾಧಾನವಾಗುತ್ತದೆ. ಹೀಗಾಗಿ ಮುಖಂಡರು, ಜಿಲ್ಲಾ ಅಧ್ಯಕ್ಷರ ಸಲಹೆಗಳನ್ನು ಕೇಳಬೇಕಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಅಭ್ಯರ್ಥಿಗಳು ಆತಂಕ ಪಡುವ ಅಗತ್ಯ ಇಲ್ಲ: ಎಲ್ಲ ಮುನ್ನೆಚ್ಚರಿಕೆ‌ ಕ್ರಮಗಳನ್ನು ವಹಿಸಿ ಪಿಎಸ್ಐ ಮರುಪರೀಕ್ಷೆ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು. ಬಹಳ ದಿನದಿಂದ ನೆನೆಗುದಿಗೆ ಬಿದ್ದಿದ್ದ ಪಿಎಸ್ಐ ಪರೀಕ್ಷೆ ಇವತ್ತು ನಡೆಯುತ್ತಿದೆ. ಕಳೆದ ಬಾರಿಯಂತೆ ಆಗದಂತೆ ಈ ಪರೀಕ್ಷೆಯನ್ನ ಎಚ್ಚರಿಕೆಯಿಂದ ನಡೆಸುತ್ತಿದ್ದೇವೆ. ಹೈಕೋರ್ಟ್ ಆದೇಶದ ಪ್ರಕಾರ ಕರ್ನಾಟಕ‌ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಲಾಗಿದೆ. ಯಾವುದೇ ಸಮಸ್ಯೆ ಆಗುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.

ಕಳೆದ ಬಾರಿ ಅಕ್ರಮದ ಕುರಿತು ನ್ಯಾ.ವೀರಪ್ಪ ಅವರ ಆಯೋಗದ ವರದಿ ಕೊಟ್ಟಿದೆ. ನಾನು ಅ ವರದಿಯನ್ನ ನೋಡಿಲ್ಲ. ಮುಖ್ಯಮಂತ್ರಿಯವರಿಗೆ ನೀಡಿದ್ದಾರೆ. ವರದಿಯಲ್ಲಿ ಏನು ಶಿಫಾರಸು ಮಾಡಿದ್ದಾರೋ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು. ಅದರಲ್ಲಿ ಯಾರ ಹೆಸರು ಇದೆ ಎಂಬುದು ಗೊತ್ತಿಲ್ಲ. ನಾವೆಲ್ಲ ಸಿಎಂ ಜೊತೆ ಕುಳಿತು ವರದಿ ವಿಶ್ಲೇಷಣೆ ಮಾಡುತ್ತೇವೆ. ಅಕ್ರಮದ ಬಗ್ಗೆ ಬಹಿರಂಗ ಹೇಳಿಕೆ ನೀಡಿದವರು ಸಮಿತಿಯು ವಿಚಾರಣೆ ವೇಳೆ ಕರೆದಾಗ ಹೋಗಿರಲಿಲ್ಲ. ಅದು ಯಾವ ರೀತಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮುಂದಿನ ನಿರ್ಧಾರ ಏನು ಮಾಡು ಎಂಬುದನ್ನು ತೀರ್ಮಾನಿಸುತ್ತೇವೆ ಎಂದು ಹೇಳಿದರು‌.

ಆಡಿಯೋ ವೈರಲ್ ಪ್ರಕರಣಕ್ಕೂ ಪಿಎಸ್ಐ ಮರುಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ಈಗಾಗಲೇ ಎಸ್ಐ ಲಿಂಗಯ್ಯ ಎಂಬುವರನ್ನು ಸಿಸಿಬಿ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ. ಆರೋಪಿತ ಎಸ್ಐ ಇಂಟಲಿಜೆನ್ಸ್‌ ವಿಭಾಗದಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ. ಈ ಪರೀಕ್ಷೆಯಲ್ಲಿಯೂ ಅಕ್ರಮ ನಡೆಯುತ್ತಿರಬಹುದು ಮತ್ತು ಅದರ ಸುಳಿವು ಸಿಗಬಹುದು ಎಂಬ ನಿಟ್ಟಿನಲ್ಲಿ ನಕಲಿ ಕರೆ ಮಾಡಿರುವುದಾಗಿ ಹೇಳಿಕೆ ನೀಡಿದ್ದು, ಸಿಸಿಬಿ ಅವರು ಈ ಬಗ್ಗೆ ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿಸಿದರು.

ನಾವೆಲ್ಲ ಶ್ರೀರಾಮ ಭಕ್ತರೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ ಅಂದರೆ ತಪ್ಪೇನು. ನಾವೆಲ್ಲರೂ ಜೈ ಶ್ರೀರಾಮ್ ಅಂತ ಹೇಳಿದ್ದೇವೆ. ಹೇಳದೇ ಇದ್ದರೆ ಶ್ರೀರಾಮನ ವಿರೋಧ ಅಂತಾರೆ. ಹೇಳಿದರೆ ಹೀಗೆ ಅಂತಾರೆ. ಇದರಲ್ಲಿ ಯಾವುದು ಸರಿ ಎಂದರು. ನಾವೆಲ್ಲ ಶ್ರೀರಾಮನ ಭಕ್ತರೇ. ಒಂದಲ್ಲ ಒಂದು ರೀತಿ ಶ್ರೀರಾಮನ ಆದರ್ಶ ಪಾಲನೆ ಮಾಡಬೇಕು ಅಂತ ಹೇಳುತ್ತೇವೆ. ಶ್ರೀರಾಮ ಬರೀ ನಾಲ್ಕು ಜನಕ್ಕೆ ಸೀಮಿತವಲ್ಲ. ನಮಗೆ ದಶರಥ ರಾಮ ಬೇಕು. ಮೋದಿಯ ರಾಮ ಬೇಕಾಗಿಲ್ಲ. ನಮಗೆ ಈ ದೇಶವನ್ನು ರಾಮರಾಜ್ಯ ಮಾಡಿದ ದಶರಥ ರಾಮ ಬೇಕೆ ಹೊರತು. ರಾಮನ ಹೆಸರು ಹೇಳಿಕೊಂಡು ಒಡೆದು ಆಳುವ ನೀತಿ ಆಚರಣೆ ಮಾಡುವವರು ಬೇಕಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಪಿಎಸ್ಐ ನೇಮಕಾತಿ ಮರು ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಭದ್ರತೆ

Last Updated : Jan 23, 2024, 4:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.