ETV Bharat / state

ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮಕ್ಕೆ ಗ್ರಾ.ಪಂ.ಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ - Dengue

ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ, ಗ್ರಾಮ ಪಂಚಾಯತಿಗಳಿಗೆ ಸೂಚನೆ ನೀಡಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ
ಸಚಿವ ಪ್ರಿಯಾಂಕ್ ಖರ್ಗೆ (ETV Bharat)
author img

By ETV Bharat Karnataka Team

Published : Jul 7, 2024, 2:09 PM IST

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಎಲ್ಲ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶಿಸಿದ್ದಾರೆ.

ಕುಡಿಯುವ ನೀರಿನ ಸರಬರಾಜು ಟ್ಯಾಂಕ್​​ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ಹರಡುವುದನ್ನು ತಡೆಗಟ್ಟಲು ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಪಂಚಾಯತಿ ಮಟ್ಟದಲ್ಲಿ ಲೋಪವಾಗದಂತೆ ಅನುಷ್ಠಾನಗೊಳಿಸಬೇಕು.

ಮನೆಗಳು, ಅಂಗಡಿ-ಮುಂಗಟ್ಟುಗಳು, ಹೊಟೇಲ್​​ಗಳು, ವಾಣಿಜ್ಯ ಸಂಕೀರ್ಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಜಾಗಗಳಲ್ಲಿ ನೀರು ದೀರ್ಘಕಾಲ ನಿಲ್ಲದಂತೆ ಕ್ರಮವಹಿಸಬೇಕು ಮತ್ತು ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳುಬೇಕು. ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು.

ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಚಾವಣಿಗಳು ಮತ್ತು ಆವರಣಗಳಲ್ಲಿ ಮಳೆನೀರು ಸಂಗ್ರಹವಾಗದಂತೆ, ನೀರಿನ ಶೇಖರಣೆಗಳಲ್ಲಿ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸುವುದು, ಸಾರ್ವಜನಿಕ ಸ್ಥಳಗಳು, ರಸ್ತೆಗಳಲ್ಲಿ ಮಳೆಯ ನೀರು ನಿಲ್ಲದಂತೆ ಗುಂಡಿ ಹಾಗೂ ತಗ್ಗುಗಳನ್ನು ಮುಚ್ಚಬೇಕು. ಸಾರ್ವಜನಿಕ ನಲ್ಲಿಗಳು ಹಾಗೂ ಕೊಳವೆ ಬಾವಿಗಳಿಂದ ಹೆಚ್ಚುವರಿ ನೀರು ಸರಾಗವಾಗಿ ಹರಿಯುವಂತೆ ಸೂಕ್ತವಾದ ಚರಂಡಿ ವ್ಯವಸ್ಥೆ ಮಾಡಬೇಕು. ಈಗಾಗಲೇ ಇರುವ ಚರಂಡಿಗಳಲ್ಲಿ ಶೇಖರಣೆಗೊಂಡಿರುವ ಹೂಳನ್ನು ಎತ್ತಿ ನೀರು ಸರಾಗವಾಗಿ ಹರಿಯುವಂತೆ ಮತ್ತು ಚರಂಡಿಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಪೂರೈಕೆ ನಳಗಳಿಗೆ ಕಂಟ್ರೋಲ್ ವಾಲ್ಸ್​ ಕಡ್ಡಾಯವಾಗಿ ಅಳವಡಿಸಲು ಕ್ರಮ ಕೈಗೊಳ್ಳಬೇಕು. ಇದರಿಂದ ನಳಗಳ ಸುತ್ತಲಿನ ಗುಂಡಿಗಳಲ್ಲಿ ನೀರು ಶೇಖರಣೆಯಾಗುವುದನ್ನು ಹಾಗೂ ಈಡಿಸ್ ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಯಬಹುದು.

ಇದನ್ನೂ ಓದಿ: ಡೆಂಗ್ಯೂಗೆ ಗಾಬರಿಯಾಗಬೇಡಿ: ವೈದ್ಯರ ಈ ಸಲಹೆಗಳನ್ನು ಪಾಲಿಸಿ ನಿಮ್ಮ ರಕ್ತದ ಕಣಗಳನ್ನು ಕಾಪಾಡಿಕೊಳ್ಳಿ - Blood platelets

ಗ್ರಾಮಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಕಟ್ಟಿಸಿರುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಕಡ್ಡಾಯವಾಗಿ ಸ್ವಚ್ಛಗೊಳಿಸಬೇಕು. ಖಾಲಿ ನಿವೇಶನಗಳಲ್ಲಿ ಘನತ್ಯಾಜ್ಯ ವಸ್ತುಗಳು ಮತ್ತು ಮಳೆ ನೀರು ಸಂಗ್ರಹವಾಗದಂತೆ ಕ್ರಮವಹಿಸಲು ನಿವೇಶನಗಳ ಮಾಲೀಕರಿಗೆ ಸೂಚನೆ ನೀಡಬೇಕು ಹಾಗೂ ಸೂಚನೆ ಪಾಲಿಸದವರಿಗೆ ನಿಯಮಾನುಸಾರ ದಂಡ ವಿಧಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.

ಎಳನೀರು ಮಾರಾಟಗಾರರು ಒಡೆದ ಎಳೆನೀರು ಚಿಪ್ಪುಗಳಲ್ಲಿ ಮಳೆ ನೀರು ಶೇಖರಣೆಯಾಗುವುದನ್ನು ತಡೆಗಟ್ಟಲು ಎಳೆನೀರು ಬುರುಡೆಗಳನ್ನು ನಾಲು ಭಾಗಗಳಾಗಿ ಒಡೆದು, ಬೋರಲು ಇಡುವಂತೆ ಸೂಚಿಸಬೇಕು ಮತ್ತು ಪ್ರತಿದಿನ ಕಡ್ಡಾಯವಾಗಿ ವಿಲೇವಾರಿ ಮಾಡುವಂತೆ ನೋಡಿಕೊಳ್ಳಬೇಕು.‌ ಆರೋಗ್ಯ ಸಿಬ್ಬಂದಿಯವರ ಜೊತೆಗೆ ಗ್ರಾಮ ಪಂಚಾಯತಿಗಳ ಸದಸ್ಯರು, ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರು, ಅಂಗನವಾಡಿ, ಶಾಲೆ ಹಾಗೂ ಇತರ ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಶಿಕ್ಷಣದ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.

ಗ್ರಾಮ ಮಟ್ಟದಲ್ಲಿರುವ 'ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿ'ಗಳನ್ನು ಡೆಂಗ್ಯೂ ನಿಯಂತ್ರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಗ್ರಾಪಂಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು ಎಂದು ಸಚಿವರು ಸೂಚಿಸಿದ್ದಾರೆ.

ಇದನ್ನೂ ಓದಿ: ಗ್ರಾ.ಪಂ.ಗಳಲ್ಲಿ ಜನನ, ಮರಣ ನೋಂದಣಿ ಜುಲೈ 1ರಿಂದ ಪ್ರಾರಂಭ: ಶುಲ್ಕ ಮಾಹಿತಿ ಹೀಗಿದೆ - BIRTH AND DEATH REGISTRATION

ETV Bharat Logo

Copyright © 2024 Ushodaya Enterprises Pvt. Ltd., All Rights Reserved.