ETV Bharat / state

ಕಲಬುರಗಿ: ಆತ್ಮಹತ್ಯೆ, ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಪರಿಹಾರ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ - Minister Priyank Kharge

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿಗೆ ತೆರಳಿ ಆತ್ಮಹತ್ಯೆ ಮತ್ತು ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಪರಿಹಾರ ವಿತರಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ
ಸಚಿವ ಪ್ರಿಯಾಂಕ್ ಖರ್ಗೆ
author img

By ETV Bharat Karnataka Team

Published : Mar 12, 2024, 12:52 PM IST

ಕಲಬುರಗಿ: ಇತ್ತೀಚಿಗೆ ಚಿತ್ತಾಪೂರ ತಾಲೂಕಿನ ಕರದಾಳ ಗ್ರಾಮದಲ್ಲಿರುವ ಕಸ್ತೂರ ಬಾ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಕಡಬೂರು ಗ್ರಾಮದ 16 ವರ್ಷದ ಬಾಲಕಿಯ ಪೋಷಕರನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ಮಾಡಿ ಸಾಂತ್ವನ ಹೇಳಿದರು.

ಬಾಲಕಿ ಆತ್ಮಹತ್ಯೆಗೆ ದುಃಖ ವ್ಯಕ್ತಪಡಿಸಿದ ಸಚಿವರು, ಈ ಸಂಬಂಧ ವಸತಿ ಶಾಲೆಯ ಮಕ್ಕಳಿಗೆ ಕೌನ್ಸಲಿಂಗ್​ ಮಾಡಿಸಲಾಗುವುದು ಎಂದು ತಿಳಿಸಿದರು. ಇಂತಹ ಸಂಕಷ್ಟದ ಸಂದರ್ಭದಲ್ಲಿ ತಾವು ಕುಟುಂಬದ ಜೊತೆಗೆ ಇರುವುದಾಗಿ ಸಚಿವರು ಭರವಸೆ ನೀಡಿದರು. ಜೊತೆಗೆ ತಮ್ಮ ಪಕ್ಷದ ವತಿಯಿಂದ 1 ಲಕ್ಷ ರೂ. ಪರಿಹಾರದ ಹಣವನ್ನು ಪೋಷಕರಿಗೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಶೇಖ್ ಶಾಷಾವಲಿ, ಮುಖಂಡರಾದ ಮಹೇಮೂದ್​ ಸಾಹೇಬ್​, ಭೀಮಣ್ಣ ಸಾಲಿ, ಶಿವಾನಂದ ಪಾಟೀಲ ಸೇರಿದಂತೆ ಅನೇಕರಿದ್ದರು.

ಹಾಗೆಯೇ, ಕಳೆದ ನವೆಂಬರ್​ ತಿಂಗಳಲ್ಲಿ ಹಲಕಟ್ಟಾ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದ ಆರು ಜನರ ವಾರಸುದಾರರಿಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್​ ಖರ್ಗೆ ಅವರು ಪರಿಹಾರದ ಚೆಕ್ ವಿತರಿಸಿದರು. ನಾಲವಾರದ ಅವರ ಮನೆಗೆ ಭೇಟಿ ನೀಡಿದ ಸಚಿವರು, ಆರು ಜನರ ವಾರಸುದಾರರಿಗೆ ತಲಾ ರೂ 2. ಲಕ್ಷದ ಪರಿಹಾರದ ಚೆಕ್​ನ್ನು ವಿತರಿಸಿದರು.

ರಸ್ತೆ ಅಪಘಾತದಲ್ಲಿ ನಾಲವಾರ ಗ್ರಾಮದ ನಿವಾಸಿಗಳಾದ ನಜ್ಮಿನ್​ ಬೇಗಂ(28), ಬೀಬಿ ಫಾತಿಮಾ(12), ಅಬೂಬಕ್ಕರ್(4), ಬೀಬಿ ಮರಿಯಮ್( 3 ತಿಂಗಳು), ಮುಹಮ್ಮದ್​ ಪಾಷಾ (20) ಹಾಗೂ ಆಟೋ ಚಾಲಕ ಬಾಬಾ(35) ಸ್ಥಳದಲ್ಲಿಯೇ ಮೃತಪಟ್ಟಿದ್ದು, 10 ವರ್ಷದ ಬಾಲಕ ಮಹಮ್ಮದ್ ಹುಸೇನ್ ಗಂಭೀರ ಗಾಯಗೊಂಡಿದ್ದರು.

ಇದನ್ನೂ ಓದಿ: ಕಾರಿನ ಮೇಲೆ ಕಬ್ಬು ತುಂಬಿದ್ದ ಲಾರಿ ಪಲ್ಟಿ: ಮೂವರು ಸಾವು

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.