ETV Bharat / state

ಗ್ರಾಮಸಭೆಗೆ ಮಾರ್ಗಸೂಚಿ; ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ತಲುಪಿಸುವಲ್ಲಿ ಕ್ರಮ ವಹಿಸುವಂತೆ ಸಚಿವ ಖರ್ಗೆ ಸೂಚನೆ

ಗ್ರಾಮಸಭೆ ನಡೆಸಲು ಮಾರ್ಗಸೂಚಿ ಬಿಡುಗಡೆ ಮಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಗ್ರಾಮಗಳ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ತಲುಪಿಸುವಲ್ಲಿ ಕ್ರಮ ವಹಿಸುವಂತೆ ಸೂಚನೆ ನೀಡಿದರು.

PRIYANK KHARGE RELEASED GUIDELINE
ಸಚಿವ ಪ್ರಿಯಾಂಕ್ ಖರ್ಗೆ (ETV Bharat)
author img

By ETV Bharat Karnataka Team

Published : Oct 8, 2024, 7:15 AM IST

ಬೆಂಗಳೂರು: ಗ್ರಾಮ ಪಂಚಾಯತಿಗಳು ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದೆ. ಈ ಸಂಬಂಧ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993ರ ಅನುಷ್ಠಾನ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾಮ ಪಂಚಾಯತಿಗಳು ಸಭೆಗಳನ್ನು ನಡೆಸುವುದು ಕಡ್ಡಾಯ. ಗ್ರಾಮಸಭೆ ಸೇರುವ ಒಂದು ತಿಂಗಳು ಮೊದಲೇ ಜನವಸತಿ ಸಭೆ ಹಾಗೂ ವಾರ್ಡ್ ಸಭೆಗಳನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು ನಡೆಸಬೇಕು. ಒಂದು ವರ್ಷದಲ್ಲಿ ಎರಡು ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂಬ ಮಾಹಿತಿ ಮಾರ್ಗಸೂಚಿಗಳಲ್ಲಿದೆ. ಪ್ರತಿ ಆರ್ಥಿಕ ವರ್ಷದಲ್ಲಿ ಜನವರಿ ಮಾಹೆಯ 26, ಏಪ್ರಿಲ್ ಮಾಹೆಯ 24, ಆಗಸ್ಟ್ ಮಾಹೆಯ 15 ಮತ್ತು ಅಕ್ಟೋಬರ್ ಮಾಹೆಯ 2ರಂದು ಕಡ್ಡಾಯವಾಗಿ ಗ್ರಾಮ ಸಭೆಗಳನ್ನು ಆಯೋಜಿಸಲು ಸೂಚಿಸಲಾಗಿದೆ. ಒಂದು ವರ್ಷದಲ್ಲಿ ಒಂದು ವಿಶೇಷ ಮಹಿಳಾ ಗ್ರಾಮಸಭೆ ಮತ್ತು ಒಂದು ಮಕ್ಕಳ ಗ್ರಾಮಸಭೆಯನ್ನು ಆಯೋಜಿಸಲು ಮಾರ್ಗದರ್ಶನ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಗ್ರಾಮ ಸಭೆಗಳನ್ನು ಆಯೋಜಿಸುವ ಸಂಬಂಧ ತಾ.ಪಂ ಕಾರ್ಯಾನಿರ್ವಾಹಕ ಅಧಿಕಾರಿಗಳು ನಿರ್ವಹಿಸಬೇಕಾದ ಜವಾಬ್ದಾರಿಗಳನ್ನೂ ಸಹ ಈ ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ ಎಂದು ತಿಳಿಸಿರುವ ಸಚಿವರು, ತಾಲೂಕು ಪಂಚಾಯತಿಗಳ ಕಾರ್ಯಾನಿರ್ವಾಹಕ ಅಧಿಕಾರಿಗಳು ತಮ್ಮ ಜವಾಬ್ದಾರಿಯಲ್ಲಿ ಲೋಪವಾಗದಂತೆ ಕಾರ್ಯ ನಿರ್ವಹಿಸಲು ಸೂಚಿಸಿದ್ದಾರೆ.

ಗ್ರಾಮಸಭೆಗಳನ್ನು ನಡೆಸುವಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳ ಜವಾಬ್ದಾರಿ ಅತಿ ಮುಖ್ಯವಾಗಿದ್ದು, ಜನವಸತಿ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳಲ್ಲಿ ಹೆಚ್ಚು ಮಂದಿ ಪಾಲ್ಗೊಳ್ಳುವಂತೆ ಅರಿವು ಮೂಡಿಸಬೇಕು. ಗ್ರಾ.ಪಂ ಸ್ಥಳೀಯ ಸರ್ಕಾರಗಳಾಗಿ ಕಾರ್ಯ ನಿರ್ವಹಿಸುವ ಮೂಲಕ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ ಬಡ ಮತ್ತು ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಸಚಿವರು ನಿರ್ದೇಶನ ನೀಡಿದರು.

ಮಾರ್ಗಸೂಚಿ ಮುಖ್ಯಾಂಶಗಳು:

  • ಗ್ರಾಮ ಪಂಚಾಯತಿಗಳಲ್ಲಿ ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯ
  • ಜವಾಬ್ದಾರಿ ನಕ್ಷೆಯನುಸಾರ ಅನುಷ್ಠಾನಗೊಳಿಸಬೇಕಾದ ಕಾರ್ಯಕ್ರಮಗಳಿಗೆ ಆದ್ಯತೆ
  • ಗ್ರಾಮಸಭೆಗೂ ಒಂದು ತಿಂಗಳು ಮುನ್ನ ಜನವಸತಿ ಸಭೆ ಹಾಗೂ ವಾರ್ಡ್ ಸಭೆಗಳ ಏರ್ಪಾಟು
  • ತಾಲೂಕು ಪಂಚಾಯತಿಯ ಕಾರ್ಯಾನಿರ್ವಾಹಕ ಅಧಿಕಾರಿಗಳಿಗೆ ಗ್ರಾಮ ಸಭೆ ಆಯೋಜಿಸುವ ಜವಾಬ್ದಾರಿ

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿ ಸರ್ಕಾರ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.