ETV Bharat / state

ಕಲ್ಯಾಣ ಕರ್ನಾಟಕ ಉತ್ಸವ ಜನೋತ್ಸವವಾಗಿ ಆಚರಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ - Janotsava - JANOTSAVA

ಕಲ್ಯಾಣ ಕರ್ನಾಟಕ ಉತ್ಸವವನ್ನು ಜನೋತ್ಸವವನ್ನಾಗಿ ಆಚರಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Minister Priyank Kharge instructs officials to celebrate Kalyan Karnataka Utsav as Janotsava
ಜನೋತ್ಸವದ ಕುರಿತು ವಿಡಿಯೊ ಸಭೆಯಲ್ಲಿ ಮಾತನಾಡಿದ ಸಚಿವರು. (ETV Bharat)
author img

By ETV Bharat Karnataka Team

Published : Aug 30, 2024, 10:14 PM IST

ಬೆಂಗಳೂರು: ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವವನ್ನು ಜನೋತ್ಸವವನ್ನಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ವಿಕಾಸಸೌಧದಲ್ಲಿ ಇಂದು ಸಚಿವರು, ಜನಪ್ರತಿನಿಧಿಗಳೊಂದಿಗೆ ಕಲಬುರಗಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಭೆಯಲ್ಲಿ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾರಣವಾದ 371ಜೆ ಅಸ್ಥಿತ್ವಕ್ಕೆ ಬಂದು 10 ವರ್ಷಗಳು ಸಂದ ಸಂದರ್ಭದಲ್ಲಿ ದಶಮಾನೋತ್ಸವವನ್ನು ಆಚರಿಸುತ್ತಿರುವುದರಿಂದ ಈ ಬಾರಿಯ ಉತ್ಸವವನ್ನು ಅರ್ಥಗರ್ಭಿತವಾಗಿ ಆಚರಿಸಲು ಕಾರ್ಯಕ್ರಮಗಳನ್ನು ರೂಪಿಸುವಂತೆಯೂ ಹೇಳಿದರು.

ಸೆಪ್ಟೆಂಬರ್‌ 17ರಂದು ಮುಖ್ಯಮಂತ್ರಿಗಳು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ ಸಚಿವರು, ಸ್ಥಳೀಯ ಪಾರಂಪರಿಕ ಜಾನಪದ ಕಲೆಗಳೊಂದಿಗೆ ಕರ್ನಾಟಕದ ವೈವಿಧ್ಯಮಯ ಜಾನಪದ ಕಲೆಗಳನ್ನು ಒಟ್ಟುಗೂಡಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರ ಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಜಯ್‌ಸಿಂಗ್‌ ಮಾತನಾಡಿ, 371ಜೆ ಅಸ್ಥಿತ್ವಕ್ಕೆ ಬಂದು ಹತ್ತು ವರ್ಷಗಳು ಪೂರ್ಣಗೊಂಡಿದ್ದು, ಒಂದು ದಶಕದ ಅವಧಿಯಲ್ಲಿ ಈ ಪ್ರದೇಶದಲ್ಲಿ ಅಭಿವೃದ್ಧಿ ಕಾಣುತ್ತಿದ್ದೇವೆ, ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಇದಕ್ಕೆ ಪ್ರಮುಖ ಕಾರಣಕರ್ತರಾಗಿದ್ದು, ಅವರನ್ನು ಉತ್ಸವದ ಸಂದರ್ಭದಲ್ಲಿ ಅದ್ಧೂರಿಯಾಗಿ ಸನ್ಮಾನ ಮಾಡಬೇಕೆಂದು ಹೇಳಿದರು.

ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌, ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಿ.ಆರ್.ಪಾಟೀಲ್‌, ಶಾಸಕ ಎಂ.ವೈ.ಪಾಟೀಲ್, ಜಗದೇವ ಗುತ್ತೇದಾರ್‌, ಅಲ್ಲಮಪ್ರಭು ಪಾಟೀಲ್‌, ತಿಪ್ಪಣ್ಣಪ್ಪ ಕಮಕನೂರ್‌, ಖನಿಜಾ ಫಾತಿಮಾ ಭಾಗವಹಿಸಿದ್ದರು. ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜವೇಯಿ, ಜಿಲ್ಲಾಧಿಕಾರಿ ಫೌಜಿಯಾ ತನರನುಮ್‌, ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಭಂವರ್‌ ಸಿಂಗ್‌, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಅ.3ರಿಂದ 12ವರೆಗೆ ಅದ್ಧೂರಿ ಮೈಸೂರು ದಸರಾ: 'ನಾಡಹಬ್ಬ ಜನಪರವಾದ ಉತ್ಸವ ಆಗಬೇಕು' - ಸಿಎಂ - Mysuru Dasara 2024

ETV Bharat Logo

Copyright © 2025 Ushodaya Enterprises Pvt. Ltd., All Rights Reserved.