ETV Bharat / state

'ಬಿಜೆಪಿ ಅವಧಿಯಲ್ಲೂ ಕೊಲೆಗಳಾಗಿದ್ದವು, ಸಂಸದ ಜಾಧವ್ ಅದನ್ನು ನೆನಪಿಸಿಕೊಳ್ಳಲಿ': ಸಚಿವ ಪ್ರಿಯಾಂಕ್ ಖರ್ಗೆ - Minister Priyank Kharge

ಸಂಸದ ಉಮೇಶ್ ಜಾಧವ್ ಅವರ ಹೇಳಿಕೆಯೊಂದಕ್ಕೆ ಪ್ರತಿಕ್ರಿಯಿಸಿರುವ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ 'ಬಿಜೆಪಿ ಸರ್ಕಾರ ಇದ್ದಾಗ ಕಲಬುರಗಿ ಜಿಲ್ಲೆಯಲ್ಲಿ 28 ಕೊಲೆಗಳಾಗಿದ್ದವು' ಎಂದು ತಿರುಗೇಟು ನೀಡಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ
ಸಚಿವ ಪ್ರಿಯಾಂಕ್ ಖರ್ಗೆ
author img

By ETV Bharat Karnataka Team

Published : Mar 13, 2024, 7:35 AM IST

Updated : Mar 13, 2024, 9:16 AM IST

ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿರುವ ಸಂಸದ ಉಮೇಶ್ ಜಾಧವ್​ ಅವರಿಗೆ ಬಿಜೆಪಿ ಸರ್ಕಾರ ಇದ್ದಾಗ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 28 ಕೊಲೆಗಳಾಗಿದ್ದವು ಎಂದು ಅಂಕಿ ಅಂಶಗಳ ನೀಡುವ ಮೂಲಕ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಸಂಸದ ಉಮೇಶ್ ಜಾಧವ್​ ಅವರು 'ಪ್ರಿಯಾಂಕ್​​​ ಉಸ್ತುವಾರಿ ಸಚಿವರಾದ ನಂತರ ಜಿಲ್ಲೆಯಲ್ಲಿ 13 ಕೊಲೆಗಳಾಗಿವೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ' ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿ ಪ್ರಿಯಾಂಕ್​ ಖರ್ಗೆ ''ಬಹುತೇಕ ಕೊಲೆಗಳಲ್ಲಿ ಅವರ ಚಿರಪರಿಚಿತರೇ ಆರೋಪಿಗಳಾಗಿದ್ದಾರೆ. ಅಫಜಲ್​ಪುರ ತಾಲೂಕಿನಲ್ಲಿ ನಮ್ಮ ಸರ್ಕಾರದ ಅಧಿಕಾರಿಯ ಮೇಲೆ ಟ್ರಾಕ್ಟರ್ ಹತ್ತಿಸಿದ್ದವರು ಯಾರು?'' ಎಂದು ತಿರುಗೇಟು ನೀಡಿದ್ದಾರೆ.

ಮುಂದುವರೆದು, ಬಿಜೆಪಿ ಸರ್ಕಾರದ ಅವಧಿಯಲ್ಲಿ 28 ಕೊಲೆಗಳಾಗಿದ್ದವು ಎಂದು ಪುನರುಚ್ಚರಿಸಿದ ಸಚಿವರು, ''ಗುಜರಾತ್​ನಲ್ಲಿ ಕಳೆದ ವರ್ಷದ ಅವಧಿಯಲ್ಲಿ 2,209 ಅತ್ಯಾಚಾರ ನಡೆದಿದ್ದು, 36 ಗ್ಯಾಂಗ್​ ರೇಪ್​ಗಳಾಗಿವೆ. ಇದಕ್ಕೆ ಸುವ್ಯವಸ್ಥೆ ಕುಸಿದಿದೆ ಎನ್ನಬಹುದು. ಬಿಜೆಪಿ ಅಧಿಕಾರವಿದ್ದಾಗಲೇ ಎಬಿವಿಪಿ ಕಾರ್ಯಕರ್ತರು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ಕಾರಿಗೆ ಅಡ್ಡಹಾಕಿದ್ದರು. ಬಿಜೆಪಿ ಅಧಿಕಾರದಲ್ಲಿ ಆಳಂದದ ಲಾಡ್ಲೆ ಮಶಾಖ ದರ್ಗಾದಲ್ಲಿ ಪೂಜೆ ಮಾಡುವ ವಿಚಾರದಲ್ಲಿ ಗಲಾಟೆಗಳಾಗಿದ್ದವು. ಆಗ ಕಾನೂನು ಸುವ್ಯವಸ್ಥೆ ಕುಸಿದಿತ್ತು. ಈ ಸಲ ಅಂತಹ ಯಾವುದೇ ಘಟನೆ ನಡೆಯದಂತೆ ನೋಡಿಕೊಂಡಿದ್ದೇವೆ'' ಎಂದು ಟಾಂಗ್​ ನೀಡಿದರು.

ಅಪರಂಜಿ ಎಲ್ಲಿ?: ಚಿತ್ತಾಪುರದ ಅಪರಂಜಿ ಈಗ ಎಲ್ಲಿ? ಎಂದು ಜಾಧವ್​ರನ್ನು ಪ್ರಶ್ನಿಸಿದ ಸಚಿವರು, ''ಅಪಘಾತವನ್ನು ಹಲ್ಲೆ ಎಂದು ಬಿಂಬಿಸಲಾಗಿತ್ತು. ಪೊಲೀಸ್​ ತನಿಖೆ ನಂತರ ಅದು ಸುಳ್ಳು ಎಂದು ಸಾಬೀತಾಗಿತ್ತು. ಆ ನಂತರ ಜಾಧವ್​ರ ಅಪರಂಜಿ ನಾಪತ್ತೆಯಾಗಿದ್ದಾನೆ'' ಎಂದು ಕುಟುಕಿದರು. ''ನಮ್ಮ ಸರ್ಕಾರದಲ್ಲಿ ರೌಡಿಗಳನ್ನು ನಿಯಂತ್ರಣ ಮಾಡಿರುವುದಕ್ಕೆ ಬಿಜೆಪಿಗರಿಗೆ ಸಂಕಷ್ಟವಾಗಿದೆ'' ಎಂದ ಖರ್ಗೆ, ''ಕಾನೂನು ಸುವ್ಯವಸ್ಥೆ ಕುಸಿದಿಲ್ಲ ಎನ್ನುವುದಕ್ಕೆ ಹಲವಾರು ಉದಾಹರಣೆಗಳಿವೆ'' ಎಂದು ಹೇಳಿದರು.

''ಸಂಸದರಾಗಿ ಜಾಧವ ಏನು ಅಭಿವೃದ್ದಿ ಮಾಡಿದ್ದಾರೆ ಹೇಳಲಿ. ಸಿಯುಕೆಗೆ ಸುಣ್ಣ ಬಣ್ಣ ಬಳಿಸಿಲ್ಲ, ರೇಲ್ವೆ ವಲಯ, ಟೆಕ್ಸ್​ಟೈಲ್ ಪಾರ್ಕ್ ಮುಂತಾದ ಯೋಜನೆಗಳು ವಾಪಸ್ ಹೋಗಿವೆ. ಈ ಸಲದ ರೇಲ್ವೆ ಬಜೆಟ್​ನಲ್ಲಿ ಕಲಬುರಗಿಗೆ ಕೇವಲ ಒಂದು ಸಾವಿರ ರೂಪಾಯಿ ಮೀಸಲಿಟ್ಟಿದ್ದಾರೆ. ಇವತ್ತು ವಂದೇ ಭಾರತ್​ ಡಕೋಟಾ ರೇಲ್ವೆಗೆ ಉದ್ಘಾಟನೆ ಮಾಡಿದ್ದಾರೆ. ಜಾಧವ್​ ವಾಸ್ತವದ ಮೇಲೆ ಮಾತನಾಡಲಿ'' ಎಂದು ಕುಟುಕಿದರು.

''ಪ್ರೊಟೋಕಾಲ್​ ಬಗ್ಗೆ ಯಾವಾಗಲೂ ಮಾತನಾಡುವ ಜಾಧವ್​, ಇತ್ತೀಚೆಗೆ ರಿಂಗ್ ರಸ್ತೆಯ ಸರ್ವಿಸ್ ರಸ್ತೆಗೆ ಅಡಿಗಲ್ಲು ಹಾಕುವ ಕಾರ್ಯಕ್ರಮದಲ್ಲಿ ಪ್ರೊಟೋಕಾಲ್ ಪಾಲನೆ ಮಾಡಿದ್ದಾರೆಯೇ? ಯಾವೊಬ್ಬ ಅಧಿಕಾರಿ ಇರಲಿಲ್ಲ, ಕೇವಲ ಬಿಜೆಪಿಯ ಕೆಲವರು ಮಾತ್ರ ಇದ್ದರು. ಒಂದು ವಿಚಾರ ಗೊತ್ತಿರಲಿ ಯೋಜನೆಗೆ ಅನುಮತಿಯೇ ನೀಡಲಾಗಿಲ್ಲ'' ಎಂದರು.

ಬಿಜೆಪಿಗರ ಟಿಕೆಟ್​ ನಿರಾಕರಣೆ ನನಗೆ ಸಂಬಂಧಿಸಿಲ್ಲ: ಮೈಸೂರು ಸಂಸದ ಪ್ರತಾಪ್​ ಸಿಂಹ ಅವರಿಗೆ ಟಿಕೆಟ್​​ ನೀಡುವುದು ಅನುಮಾನ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್,​​ ''ಬಿಜೆಪಿಯಲ್ಲಿ ಯಾರಿಗೆ ಟಿಕೆಟ್​​​ ನೀಡುತ್ತಾರೆ, ನಿರಾಕರಿಸುತ್ತಾರೆ ನನಗೆ ಸಂಬಂಧಿಸಿದ್ದಲ್ಲ'' ಎಂದರು. ಈ ಸಲ ಗೆಲುವು ನನ್ನದೇ ಎಂದು ಜಾಧವ ಹೇಳಿದ್ದಾರೆ ಎಂದು ಕೇಳಿದಾಗ, ''ಚುನಾವಣೆಯಲ್ಲಿ ಗೊತ್ತಾಗುತ್ತದೆ ಬಿಡಿ. ಪ್ರತಿಯೊಬ್ಬರೂ ಗೆಲ್ಲಬೇಕೆಂದೆ ಸ್ಪರ್ಧಿಸುತ್ತಾರೆ'' ಎಂದು ಹೇಳಿದರು.

ಬಾಡಿಗೆ ಬಾಷಣಕಾರ: ಚಕ್ರವರ್ತಿ ಸೂಲಿಬೆಲೆ ಅವರಿಗೆ ಜಿಲ್ಲೆಯ ಪ್ರವೇಶ ನಿರಾಕರಣೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ''ನನಗೆ ಮಾಡಲು ಬಹಳಷ್ಟು ಕೆಲಸಗಳಿವೆ, ಬಾಡಿಗೆ ಭಾಷಣಕಾರನ ಬಗ್ಗೆ ಮಾತನಾಡಲು ಸಮಯವಿಲ್ಲ. ಅವನು ಒಂದೇ ಒಂದು ಗ್ರಾಮ ಪಂಚಾಯತಿ ಚುನಾವಣೆ ಗೆದ್ದಿಲ್ಲ'' ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ನಾನೇ ಮನೆ ದೇವರು-ಪ್ರಿಯಾಂಕ್​ ಖರ್ಗೆ: ''ಆರ್​.ಅಶೋಕ್​ರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರಿಗೆ ನಾನು ಮನೆಯ ದೇವರು ಇದ್ದ ಹಾಗೆ. ನನ್ನನ್ನು ನೆನಪಿಸಿಕೊಳ್ಳುತ್ತಿರುತ್ತಾರೆ. ಇಲ್ಲದಿದ್ದರೆ ಅವರಿಗೆ ಆಹಾರ ಜೀರ್ಣವಾಗುವುದಿಲ್ಲ'' ಎಂದರು. ಸಂವಿಧಾನ ಬದಲಿಸುವ ಬಗ್ಗೆ ಮಾತನಾಡಿದ ಸಂಸದ ಅನಂತಕುಮಾರ ಹೆಗಡೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ''ಅವರಿಗೆ ತಲೆ ಕೆಟ್ಟಿದೆ, ಮಾನಸಿಕ‌ ಸಮತೋಲನ ಕಳೆದುಕೊಂಡಿದ್ದಾರೆ'' ಎಂದರು.

ಇದನ್ನೂ ಓದಿ: ಸಚಿವ ಸತೀಶ ಜಾರಕಿಹೊಳಿ ಸಂಧಾನ ಸಭೆ ಯಶಸ್ವಿ: ಪ್ರತಿಭಟನೆ ಕೈ ಬಿಟ್ಟ ರೈತರು

Last Updated : Mar 13, 2024, 9:16 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.