ETV Bharat / state

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ 3 ಲಕ್ಷ ನೀರಿನ ಮಾದರಿ ಸಂಗ್ರಹ: ಸಚಿವ ಪ್ರಿಯಾಂಕ್‌ ಖರ್ಗೆ - Priyank Kharge

ಗ್ರಾಮೀಣ ನೀರು ಸರಬರಾಜು ಅಧಿಕಾರಿಗಳು ಹಾಗೂ ಎಂಜಿನಿಯರ್​ಗಳು ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಮೂರು ಲಕ್ಷ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

minister-priyank-kharge
ಸಚಿವ ಪ್ರಿಯಾಂಕ್‌ ಖರ್ಗೆ (ETV Bharat)
author img

By ETV Bharat Karnataka Team

Published : Jun 25, 2024, 10:17 PM IST

ಬೆಂಗಳೂರು: ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಕಲುಷಿತಗೊಳ್ಳದಂತೆ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ನೀರು ಸರಬರಾಜು ಅಧಿಕಾರಿಗಳು ಹಾಗೂ ಎಂಜಿನಿಯರುಗಳು ಈ ತಿಂಗಳಿನ 14ರಿಂದ 21ರವರೆಗಿನ ವಾರದಲ್ಲಿ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಮೂರು ಲಕ್ಷ ನೀರಿನ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ಕೋಲಾರ ಜಿಲ್ಲೆಯ ಮುಳಬಾಗಿಲು ಬಳಿಯ ಮುಣಜೇನಹಳ್ಳಿ ಹಾಗೂ ಬೆಳಗಾವಿ ಜಿಲ್ಲೆಯ ಗೋಕಾಕ್‌ ಬಳಿಯ ಕನಸಗೇರಿ ಗ್ರಾಮದಲ್ಲಿ ಈಚೆಗೆ ಕುಡಿಯುವ ನೀರು ಕಲುಷಿತಗೊಂಡ ಹಿನ್ನೆಲೆಯಲ್ಲಿ, ಗ್ರಾಮಗಳಲ್ಲಿ ಪರ್ಯಾಯ ಜಲಮೂಲಗಳನ್ನು ಬಳಸಿ ಶುದ್ಧ ನೀರು ಸರಬರಾಜು ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಸ್ವಸ್ಥರಾದ ಗ್ರಾಮಸ್ಥರ ಆರೋಗ್ಯದ ಬಗ್ಗೆ ಎಚ್ಚರ ವಹಿಸಲಾಗಿದೆ ಎಂದು ಅವರು ಹೇಳಿದರು.

ಗ್ರಾಮೀಣ ನೀರು ಸರಬರಾಜು ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಚಿವರಿಗೆ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರವೇಜ್‌ ಮಾಹಿತಿ ನೀಡಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜೂನಿಯರ್‌ ಎಂಜಿನಿಯರ್‌ ರಾಜ್ಯದ 3,000 ಗ್ರಾಮಗಳಿಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಹೇಳಿದರು. ಗ್ರಾಮೀಣ ನೀರು ಸರಬರಾಜು ಇಲಾಖೆ ಆಯುಕ್ತ ಕೆ.ನಾಗೇಂದ್ರ ಪ್ರಸಾದ್‌ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಕುಡಿಯುವ ನೀರು ಕಲುಷಿತಗೊಳ್ಳದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ - Priyank Kharge

ETV Bharat Logo

Copyright © 2024 Ushodaya Enterprises Pvt. Ltd., All Rights Reserved.