ETV Bharat / state

ನೀರು ಕಲುಷಿತವಾದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ; ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ - Minister Priyank Kharge - MINISTER PRIYANK KHARGE

ಸಚಿವ ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಸರಬರಾಜಾಗುತ್ತಿರುವ ಕುಡಿಯುವ ನೀರು ಕಲುಷಿತವಾದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ್ದಾರೆ.

minister-priyank-kharge
ಸಚಿವ ಪ್ರಿಯಾಂಕ್‌ ಖರ್ಗೆ (ETV Bharat)
author img

By ETV Bharat Karnataka Team

Published : May 29, 2024, 3:05 PM IST

ಬೆಂಗಳೂರು : ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಸರಬರಾಜಾಗುತ್ತಿರುವ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣಗಳು ಪುನಾರಾವರ್ತನೆಯಾಗುತ್ತಿವೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದೇ ಇರುವ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ, ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಲ್ಲಾ ಕಾರ್ಯಪಾಲಕ ಅಭಿಯಂತರರಿಗೆ ಸಚಿವರು ಪತ್ರ ಬರೆದಿದ್ದು, ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮತ್ತು ಆಯಾ ಗ್ರಾಮ ಪಂಚಾಯತಿ ಆದ್ಯ ಜವಾಬ್ದಾರಿಯಾಗಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಲ್ಲದೇ, ಪ್ರಾಣಹಾನಿಗಳು ಕೂಡಾ ಸಂಭವಿಸಿರುತ್ತವೆ.

ಇಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಇಲಾಖೆಯಿಂದ ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡಲಾಗಿದ್ದರೂ ಸಹ, ಕೆಲವು ಗ್ರಾಮ/ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಪುನರಾವರ್ತನೆಯಾಗುತ್ತಿರುವುದು ಹೆಚ್ಚಾಗಿ ಕಂಡು ಬಂದಿದೆ ಎಂದೂ ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ.

ನೀರಿನ ತೊಟ್ಟಿ, ಜಲಾಗಾರಗಳು ಸುಸ್ಥಿಯಲ್ಲಿರಲಿ : ಕುಡಿಯುವ ನೀರಿನ ಸರಬರಾಜಿಗಾಗಿ ಅಳವಡಿಸಿರುವ ಕೊಳವೆಗಳಲ್ಲಿ ಮಳೆ ನೀರು, ಚರಂಡಿ ನೀರು ಮತ್ತು ಇತರೆ ಕಲುಷಿತ ನೀರು ಸೇರುತ್ತಿರುವುದರಿಂದ ಮತ್ತು ನೀರಿನ ಶೇಖರಣೆ ಮಾಡುವ ಕಿರು ನೀರು ಸರಬರಾಜು ಮಾಡುವ ನೀರಿನ ತೊಟ್ಟಿಗಳು ಹಾಗೂ ಜಲಾಗಾರಗಳನ್ನು ಕಾಲಕಾಲಕ್ಕೆ ಸರಿಯಾಗಿ ಸ್ವಚ್ಛಗೊಳಿಸುವುದು, ಹಾಗೂ ಕ್ಲೋರಿನೇಷನ್‌ ಕೈಗೊಳ್ಳುವುದು ಮತ್ತು ನೀರಿನ ಮೂಲಗಳಾದ ಕೊಳವೆ ಬಾವಿಗಳ ಸುತ್ತಮುತ್ತಲೂ ನಿಲ್ಲುವ ಕೊಳಚೆ ನೀರನ್ನು ಸ್ವಚ್ಛಗೊಳಿಸುವುದು ಮುಂತಾದ ಮುಂಜಾಗರೂಕತಾ ಕ್ರಮಗಳ ಮೂಲಕ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರದಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ನೀರು ಸರಬರಾಜು ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಕಾಲಕಾಲಕ್ಕೆ ಮೇಲ್ವಿಚಾರಣೆ ನಡೆಸಲು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಸೂಚನೆ ನೀಡಿರುವ ಸಚಿವ ಪ್ರಿಯಾಂಕ್​ ಖರ್ಗೆ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಕರಣಗಳು ಪುನಾರಾವರ್ತನೆಯಾದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಕುಡಿವ ನೀರು ನಿರ್ವಹಣೆ ಸಭೆ ನಡೆಸಲು ನೀತಿ ಸಂಹಿತೆ ವಿನಾಯಿತಿ ಕೋರಿದ ಪ್ರಿಯಾಂಕ್ ಖರ್ಗೆ - Minister Priyank Kharge

ETV Bharat Logo

Copyright © 2025 Ushodaya Enterprises Pvt. Ltd., All Rights Reserved.