ಬೆಂಗಳೂರು: ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ವತಿಯಿಂದ ಕೊಡಗು ಮತ್ತು ಕೇರಳ ಮಳೆ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ರವಾನಿಸುವ ಕಾರ್ಯಕ್ರಮಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಮೈಸೂರು ಎಲೆಕ್ಟ್ರಿಕಲ್ ಸಂಸ್ಥೆಯವರು ಕೊಡಗು, ಕೇರಳ ಸಂತ್ರತ್ತರಿಗೆ ಅಗತ್ಯ ವಸ್ತುಗಳನ್ನು ಕಳುಹಿಸಿ ಕೊಡುತ್ತಿದ್ದಾರೆ. ಸರ್ಕಾರದ ಜೊತೆಯಲ್ಲಿ ಸಾರ್ವಜನಿಕರ ಸಹಕಾರ, ಸಹಾಯವಿದ್ದರೆ ಸಂಕಷ್ಟಗಳ ಪರಿಹಾರ ವೇಗವಾಗಿ ಆಗುತ್ತದೆ ಎಂದು ಹೇಳಿದರು.
ಬಿಜೆಪಿ ಸುಳ್ಳಿನ ಇತಿಹಾಸ ಸಾರ್ವಜನಿಕರಿಗೆ ತಿಳಿಸಲು ಜನಾಂದೋಲನ ಮಾಡಲಾಗುತ್ತಿದೆ. ಮುಡಾದಲ್ಲಿ ಮುಖ್ಯಮಂತ್ರಿ ಪತ್ನಿ ಹೆಸರಿನಲ್ಲಿ ಸೈಟ್ ನೀಡಿರುವುದು ತಪ್ಪೆಂದಾದರೆ ಅಂದಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಳು ತಪ್ಪು ಮಾಡಿದ್ದಾರೆ ಎಂದರ್ಥ. ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ ನೋಟಿಸ್ ನೀಡಿರುವುದು ದೆಹಲಿ ನಾಯಕರ ಒತ್ತಡದಿಂದ ಎಂದು ದೂರಿದರು.
ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಎಸ್.ಮನೋಹರ್ ಮಾತನಾಡಿ, ಮನುಜಮತ ವಿಶ್ವಪಥ ಎನ್ನುವ ರಾಷ್ಟ್ರಕವಿ ಕುವೆಂಪು ಸಂದೇಶದಂತೆ, ಮನುಷ್ಯ, ಮನುಷ್ಯರಿಗೆ ಸಹಾಯ, ಸಹಕಾರ ನೀಡಿದಾಗ ಮಾತ್ರ ಮನುಷ್ಯ ಜನ್ಮ ಸಾರ್ಥಕ. ಆದ್ದರಿಂದ ಕೊಡಗು ಮತ್ತು ಕೇರಳ ರಾಜ್ಯಕ್ಕೆ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟೃೀಸ್ ಲಿಮಿಟೆಡ್ ಸಂಸ್ಥೆ ವತಿಯಿಂದ ಅಂದಾಜು 15 ಲಕ್ಷ ರೂ ಮೌಲ್ಯದ ಅಗತ್ಯ ವಸ್ತುಗಳನ್ನು ರವಾನೆ ಮಾಡಲಾಗುತ್ತಿದೆ ಎಂದು ಹೇಳಿದರು.
ನಮ್ಮ ಸಂಸ್ಥೆ ವತಿಯಿಂದ ಈಗಾಗಲೇ ರಾಜ್ಯ ಆರೋಗ್ಯ ಇಲಾಖೆಗೆ ಎರಡು ಆಂಬ್ಯುಲೆನ್ಸ್ ಮತ್ತು ಬಿಟಿಎಂ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಯ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಎಲ್ಇಡಿ ಟಿವಿಯನ್ನು ಉಚಿತವಾಗಿ ನೀಡಲಾಗಿದೆ ಎಂದರು.
ಇದನ್ನೂ ಓದಿ: ಕಾರವಾರ: ಕುಸಿದು ಬಿದ್ದ ಕಾಳಿ ನದಿ ಸೇತುವೆ ನೋಡಲು ಜನದಟ್ಟಣೆ; ಹೈರಾಣಾದ ಪೊಲೀಸರು - Kali River Bridge Collapse