ETV Bharat / state

ಹುಬ್ಬಳ್ಳಿ - ಧಾರವಾಡ ನಡುವೆ ಎಲ್‌ಆರ್‌ಟಿ ಸಾಧಕ - ಬಾಧಕ ಚರ್ಚಿಸಿ ಮುಂದಿನ ಕ್ರಮ - ಸಚಿವ ಸಂತೋಷ್ ಲಾಡ್ - MINISTER SANTOSH LAD

ಸಚಿವ ಸಂತೋಷ್ ಲಾಡ್ ಅವರು ಎಲ್​ಆರ್​ಟಿ ಕುರಿತು ಮಾತನಾಡಿದ್ದಾರೆ. ಅದರ ಸಾಧಕ - ಬಾಧಕದ ಬಗ್ಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

minister-santosh-lad
ಸಚಿವ ಸಂತೋಷ್ ಲಾಡ್ (ETV Bharat)
author img

By ETV Bharat Karnataka Team

Published : Nov 15, 2024, 5:25 PM IST

Updated : Nov 15, 2024, 5:39 PM IST

ಹುಬ್ಬಳ್ಳಿ : ಹುಬ್ಬಳ್ಳಿ - ಧಾರವಾಡ ನಡುವೆ ಬಿಆರ್‌ಟಿಎಸ್ (ಬಸ್ ರ‍್ಯಾಪಿಡ್ ಟ್ರಾನ್ಸಿಸ್ಟ್ ಸಿಸ್ಟಂ) ಬದಲು ಎಲ್‌ಆರ್‌ಟಿ (ಲೈಟ್ ರೈಲ್ ಟ್ರಾನ್ಸಿಟ್) ತರುವ ಕುರಿತು ಹಾಗೂ ಅದರ ಸಾಧಕ -ಬಾಧಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.

ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್‌ಆರ್‌ಟಿ (ಲೈಟ್ ರೈಲ್ ಟ್ರಾನ್ಸಿಟ್) ಬಗ್ಗೆ ಯೋಜನೆ ರೂಪಿಸಲಾಗುತ್ತಿದ್ದು, ಮುಂದಿನ ಒಂದು ತಿಂಗಳಲ್ಲಿ ಸ್ಪಷ್ಟತೆ ದೊರೆಯಲಿದೆ. ಹುಬ್ಬಳ್ಳಿ - ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಗುಣಮಟ್ಟ ಹಾಗೂ ಹಸ್ತಾಂತರದ ಬಗ್ಗೆ ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಸಭೆ ನಡೆಸಲಾಗುವುದು ಎಂದು ಹೇಳಿದರು.

ಸಚಿವ ಸಂತೋಷ್ ಲಾಡ್ ಮಾತನಾಡಿದರು (ETV Bharat)

ಪ್ಲೈಓವರ್ ಕಾಮಗಾರಿ ಪುನಃ ಪ್ರಾರಂಭವಾಗಿದೆ. ಇಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 127 ಹೊಸ ಬಸ್‌ಗಳಿಗೆ ಚಾಲನೆ ನೀಡಲಾಗುತ್ತಿದೆ. ಇಎಸ್‌ಐ ಆಸ್ಪತ್ರೆಗಳಿಗೆ ಜನರು ಬರುವಂತೆ ಮಾಡಬೇಕಿದೆ. ಬೇರೆ ಆಸ್ಪತ್ರೆಗಳಿಗೆ ಫಲಾನುಭವಿಗಳು ತೆರಳದಂತೆ ಉತ್ತಮ ಚಿಕಿತ್ಸೆ ನೀಡಬೇಕಾಗಿದೆ. ಸುಮಾರು 40 ಲಕ್ಷ ಫಲಾನುಭವಿಗಳು ಇದ್ದಾರೆ. ಅತ್ಯಾಧುನಿಕ ಸಲಕರಣೆ ಹಾಗೂ ಗುಣಮಟ್ಟದ ಚಿಕಿತ್ಸೆಯನ್ನು ಜನರಿಗೆ ನೀಡಬೇಕು. ಅನುದಾನದ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ : ನಮ್ಮ ಸರ್ಕಾರ ಸುಭದ್ರ, ಕೇಂದ್ರ ಸರ್ಕಾರ ಬದಲಾಗಬಹುದು: ಸಚಿವ ಸಂತೋಷ ಲಾಡ್ - Santhosh Lad

Last Updated : Nov 15, 2024, 5:39 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.