ಬೆಳಗಾವಿ: ತಮ್ಮ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿರುವುದಕ್ಕೆ ನ್ಯಾಯಾಲಯದಲ್ಲಿ ಮಾತ್ರ ಹೋರಾಟ ಮಾಡುತ್ತೇನೆ. ಅದನ್ನು ಬಿಟ್ಟು ಹೊರಗಡೆ ಯಾವುದೇ ರೀತಿ ಹೋರಾಟ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ಕುರಿತು ನಿಮ್ಮ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ ನೀಡಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಬೆಳಗಾವಿಯಲ್ಲಿ ಅವರು ಪ್ರತಿಕ್ರಿಯಿಸಿದರು. ಹಿಂದೆ ಹಿಂದೂ ಪದದ ಹೇಳಿಕೆ ಚರ್ಚೆಗೆ ಗ್ರಾಸವಾಗಿತ್ತು. ಮೊದಲು ಯಾರೋ ಕೇಸ್ ಹಾಕಿದ್ರು. ಕೆಳ ನ್ಯಾಯಾಲಯದಲ್ಲಿ ಅದು ರಿಜೆಕ್ಟ್ ಆಗಿತ್ತು. ಈಗ ನೋಡಬೇಕು ಅದರಲ್ಲಿ ಏನಿದೆ ಅಂತ. ಈಗ ಕೋರ್ಟ್ ಏನು ಆದೇಶ ಮಾಡಿದೆ ಅಂತ ನೋಡೋಣ ಎಂದರು.
ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರ ಬಗ್ಗೆ ನನ್ನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ. ಆದರೆ ಅದರ ಪ್ರತಿ ನನಗೆ ಇನ್ನೂ ಸಿಕ್ಕಿಲ್ಲ. ಪ್ರತಿ ಸಿಕ್ಕ ನಂತರ ಕಾನೂನು ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ಕೋಳಿ ಬೆಸ್ತ ಸಮುದಾಯಕ್ಕೆ ಎಸ್ಟಿ ಮೀಸಲಾತಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ಎರಡು ಬಾರಿ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ವರದಿ ಶಿಫಾರಸು ಮಾಡಲಾಗಿತ್ತು. ಆದ್ರೆ ಅದು ವಾಪಸ್ ಬಂದಿದೆ. ವರದಿ ಕಳುಹಿಸುವುದಷ್ಟೇ ನಮ್ಮ ಕೆಲಸ. ಅಂತಿಮವಾಗಿ ನಿರ್ಧಾರ ತೆಗೆದುಕೊಳ್ಳುವುದು ಕೇಂದ್ರ ಸರ್ಕಾರದ ಕೆಲಸ ಎಂದು ಸತೀಶ್ ಜಾರಕಿಹೊಳಿ ಇದೇ ಸಂದರ್ಭದಲ್ಲಿ ಹೇಳಿದರು.
ಇದನ್ನೂ ಓದಿ: ಅಂಬಿಗ ಸಮಾಜ ಎಸ್ಟಿಗೆ ಸೇರಿಸಲು ಕೇಂದ್ರಕ್ಕೆ ವರದಿ ಸಲ್ಲಿಕೆ; ಸಚಿವ ಸತೀಶ್ ಜಾರಕಿಹೊಳಿ